ಬಿತ್ತನೆ ಬೀಜ ಖರೀದಿ ಸಮಯ ವಿಸ್ತರಣೆಗೆ ಕ್ರಮ
Team Udayavani, May 25, 2021, 6:53 PM IST
ಗಜೇಂದ್ರಗಡ: ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಖರೀದಿಸಲು ರೈತರಿಗೆ ಬೆಳಿಗ್ಗೆ 10 ಗಂಟೆಗಿಂತ ಹೆಚ್ಚಿನ ಸಮಯ ವಿಸ್ತರಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು. ಸರ್ಕಾರ ಕೋವಿಡ್ ಎರಡನೇ ಅಲೆ ನಿಯಂತ್ರಣ ಮಾಡಲು ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಸಮಯ ನಿಗದಿಗೊಳಿಸಿದೆ. ಆದರೆ, ಗ್ರಾಮೀಣ ಭಾಗದಿಂದ ಆಗಮಿಸುವ ಜನರಿಗೆ ಈ ಕಡಿಮೆ ಅವಧಿ ಯಲ್ಲಿ ಬೀಜ ಸೇರಿದಂತೆ ಕೃಷಿ ಸಲಕರಣೆ ಖರೀದಿ ಮಾಡಲಾಗುವುದಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಜಿಲ್ಲಾಧಿ ಕಾರಿಗಳೊಂದಿಗೆ ಚರ್ಚಿಸಿ, ಮುಂಗಾರು ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.
ರೈತರು ಮುಂಗಾರಿನ ಮಳೆ ಉತ್ತಮವಾಗಿ ಸುರಿಯುವ ಆಶಾಭಾವನೆ ಹೊಂದಿದ್ದಾರೆ. ಹೀಗಾಗಿ, ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳ ನೂರಾರು ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿ ಇಲಾಖೆ ಬೀಜ ವಿತರಣಾ ಕೇಂದ್ರದಲ್ಲಿ ಬೀಜಗಳನ್ನು ಪಡೆದುಕೊಳ್ಳಬೇಕಾಗಿದೆ. ಗಜೇಂದ್ರಗಡ ಮತ್ತು ರೋಣ ತಾಲೂಕಿನಲ್ಲಿ 5 ಬೀಜ ವಿತರಣಾ ಕೇಂದ್ರಗಳಲ್ಲಿ ರಿಯಾಯತಿ ದರದಲ್ಲಿ ಬೀಜ ವಿತರಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ತೀವ್ರ ಸಂಕಷ್ಟದಲ್ಲಿರುವ ರೈತರ ಬೆಳೆಗಳು ಹೆಚ್ಚೆಚ್ಚು ಇಳುವರಿ ಬರುವಂತಾಗಲು ಗುಣಮಟ್ಟದ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.
ಕೃಷಿ ಅಧಿಕಾರಿ ಸಾವಿತ್ರಿ ಶಿವನಗೌಡರ ಮಾತನಾಡಿ, ಗಜೇಂದ್ರಗಡದ ರೈತ ಸಂಪರ್ಕ ಕೇಂದ್ರದಲ್ಲಿ ಸದ್ಯ 50 ಕ್ವಿಂಟಲ್ ಹೆಸರು, 6 ಕ್ವಿಂಟಲ್ ಹೈಬ್ರಿàಡ್ ಜೋಳ, 28 ಕ್ವಿಂಟಲ್ ತೊಗರಿ ಬೀಜಗಳು ಬಂದಿದ್ದು, ಶೀಘ್ರವೇ ಇನ್ನುಳಿದ ಬೆಳೆಯ ಬೀಜಗಳು ಬರಲಿವೆ ಎಂದರು. ಈ ವೇಳೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರವೀಂದ್ರ ಪಾಟೀಲ, ವಿ.ಎಸ್.ಶಾಂತಗೇರಿ, ಸಿ.ಕೆ. ಕಮ್ಮಾರ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!