ಲಕ್ಕುಂಡಿ ಉತ್ಸವಕ್ಕೆ ಸಿಎಂ ಬೊಮ್ಮಾಯಿ ಅವರಿಂದ ₹1 ಕೋಟಿ ಅನುದಾನ ಬಿಡುಗಡೆ
Team Udayavani, Jan 31, 2023, 5:30 PM IST
ಗದಗ: ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ₹1 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಅದ್ದೂರಿಯಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ತಾಲೂಕಿನ ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಮಠದ ಸಭಾಭವನದಲ್ಲಿ ಲಕ್ಕುಂಡಿ ಉತ್ಸದ ಲೋಗೋ ಹಾಗೂ ಬ್ಯಾನರ್ ನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಫೆ. 10, 11 ಹಾಗೂ 12ರಂದು ನಡೆಯುವ ಲಕ್ಕುಂಡಿ ಉತ್ಸವದಲ್ಲಿ ಸಮಯದ ಹೊಂದಾಣಿಕೆ, ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ, ಪ್ರಾತಿನಿಧ್ಯ ಸಿಗಬೇಕು ಎನ್ನುವ ದೃಷ್ಟಿಯಲ್ಲಿ ಸಮಯ ಹೊಂದಾಣಿಕೆ ಮಾಡಲಾಗುತ್ತಿದೆ. ಲಕ್ಕುಂಡಿಯ ಬಿ.ಎಚ್. ಪಾಟೀಲ ಹೈಸ್ಕೂಲ್ ಆವರಣದಲದಲಿ ರಾಣಿ ಚೆನ್ನಮ್ಮ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
ಸಸಿ ನೆಡುವ ಮೂಲಕ ಲಕ್ಕುಂಡಿ ಉತ್ಸವ ಉದ್ಘಾಟನೆಗೊಳ್ಳಲಿದ್ದು, ಸಚಿವರಾದ ಬಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸುನಿಲ ಕುಮಾರ ಸೇರಿ ಹಲವು ಸಚಿವರಿಗೆ ಆಮಂತ್ರಣ ನೀಡಲಾಗಿದೆ ಎಂದು ಹೇಳಿದರು.
ಲಕ್ಕುಂಡಿ ಗ್ರಾಮದ ಪರಂಪರೆಯನ್ನು ನಾಡಿನಾದ್ಯಂತ ಪಸರಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ. ಗ್ರಾಮಸ್ಥರ ಪಾಲ್ಗೊಳ್ಳಲುವಿಕೆ ಮತ್ತು ಸಹಕಾರ ಅತಿ ಮುಖ್ಯವಾಗಿದೆ. ಉಪಹಾರ, ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಗ್ರಾಮದ ಸೌಂದರ್ಯ ಹೆಚ್ಚಿಸುವ ಸಲುವಾಗಿ ಗ್ರಾಮಸ್ಥರು ತಮ್ಮ ಹಂತದಲ್ಲಿ ಪ್ರಯತ್ನಿಸಿ ಎಂದು ಮನವಿ ಮಾಡಿದರು.
ಖ್ಯಾತ ಗಾಯಕರಿಂದ ಸಂಗೀತ ಕಾರ್ಯಕ್ರಮ: ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ, ಅನನ್ಯ ಭಟ್ ಸೇರಿ ಲಕ್ಕುಂಡಿ ಹಾಗೂ ಜಿಲ್ಲೆಯ ವಿಧಾನಸಭಾ ಮತಕ್ಷೇತ್ರದ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ ಹೇಳಿದರು.
ನಗರಸಭೆ ಅಧ್ಯಕ್ಷೆ ಉಷಾ ದಾಸರ, ಗ್ರಾಪಂ ಅಧ್ಯಕ್ಷೆ ಲಲಿತಾ ಗದಗಿನ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಪಂ ಸಿಇಒ ಡಾ. ಸುಶೀಲಾ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಬಾಸಾಬ್ ನೇಮಗೌಡ, ಎಸಿಎಫ್ ದೀಪಿಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ. ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ
ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್