ತವರಿಗೆ ಬಂದವರಿಂದಲೇ ಹಬ್ಬಿದ ಸೋಂಕು

ಹೊರ ರಾಜ್ಯ-ಜಿಲ್ಲೆಗೆ ವಲಸೆ ಹೋಗಿ ಬಂದವರಿಂದಲೇ ಎಫೆಕ್ಟ್!  ­ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡದಿರುವುದೇ ಕಾರಣ

Team Udayavani, May 17, 2021, 5:38 PM IST

201715mdr01

ಹು.ಬಾ.ವಡ್ಡಟ್ಟಿ.

ಮುಂಡರಗಿ: ತಾಲೂಕಿನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಕ್ಕಿಂತಲೂ ಪಟ್ಟಣ ಪ್ರದೇಶದಲ್ಲಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದರೆ, ಕೋವಿಡ್‌ ಕರ್ಫ್ಯೂ ನಂತರ ಬೆಂಗಳೂರು, ಮಂಗಳೂರು, ಕೇರಳ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿ ಬಂದವರಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಹರಡುವ ಸಾಧ್ಯತೆಗಳು ಹೆಚ್ಚಾಗಿವೆ.

ತಾಲೂಕಿನ 19 ಗ್ರಾಮ ಪಂಚಾಯಿತಿ ವ್ಯಾಪ್ತಿಯ 52 ಗ್ರಾಮಗಳಲ್ಲಿ ಐಸೋಲೇಷನ್‌ ಗೆ ಒಳಗಾದವರ ಪೈಕಿ ಪ್ರತಿ ಹಳ್ಳಿಗೆ ಇಬ್ಬರು, ಮೂವರಾದರೂ ಸಿಗುತ್ತಾರೆ. ಬೇರೆ ನಗರಗಳಿಂದ ವಲಸೆ ಬಂದವರಿಂದಲೇ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿ ಕೋವಿಡ್‌ ಸೋಂಕು ಹಬ್ಬುತ್ತಿದೆ. ಕೊರೊನಾ ಕರ್ಫ್ಯೂ ಪಟ್ಟಣ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ಜಾರಿಯಾಗಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಅಷ್ಟೊಂದು ಕಠಿಣವಾಗಿ ಜಾರಿಗೊಂಡಿಲ್ಲ. ಏಕೆಂದರೆ ಗ್ರಾಮೀಣ ಪ್ರದೇಶದಲ್ಲಿ ಕಟ್ಟೆಗಳ ಮೇಲೆ, ಮರದ ಕೆಳಗೆ ಕುಳಿತು ಹರಟೆ ಹೊಡೆಯುವವರು, ಇಸ್ಪೀಟ್‌ ಆಡುವವರಿಂದಲೂ ಕೋವಿಡ್‌ ಸೋಂಕು ಹರಡುತ್ತಿದೆ.

ತಾಲೂಕಿನ 19 ಗ್ರಾಮ ಪಂಚಾಯಿತಿಗಳ ಪ್ರತಿ ಹಳ್ಳಿಯಲ್ಲೂ ಮೊದಲ ಹಂತದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜತೆಗೆ ಸಾರ್ವಜನಿಕ ಸ್ಥಳಗಳು, ಚರಂಡಿ, ರಸ್ತೆಗಳನ್ನು ಸ್ವತ್ಛ ಮಾಡಲಾಗಿದೆ. ಅಲ್ಲದೇ, ಪ್ರತಿ ಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಯಂತ್ರಗಳನ್ನು ಬಳಸಿ ಸೋಡಿಯಂ ಹೈಡ್ರೋಕ್ಲೋರಿಕ್‌ ದ್ರಾವಣ ಸಿಂಪಡಣೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಯಂತ್ರ ಬಳಸಿ ಸ್ಯಾನಿಟೈಸರ್‌ ಕಡ್ಡಾಯವಾಗಿ ಮಾಡುತ್ತಿದ್ದಾರೆ.

ಶುಕ್ರವಾರವಷ್ಟೇ ತಾಲೂಕಿನಲ್ಲಿ 94 ಕೋವಿಡ್‌ ಪಾಜಿಟಿವ್‌ ಪ್ರಕರಣಗಳು ದಾಖಲಾಗಿವೆ. ಆರ್‌ಟಿಪಿಸಿಆರ್‌ 79 ಮಾದರಿಗಳನ್ನು ಸಂಗ್ರಹಿಸಲಾಗಿದೆ. 21 ಜನ ಸೊಂಕೀತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಹೋಂ ಐಸೋಲೇಷನ್‌ನಲ್ಲಿ 383 ಜನರಿದ್ದಾರೆ. 401ಸಕ್ರಿಯ ಪ್ರಕರಣಗಳಿವೆ. ಮೊದಲ ಅಲೆ ಮತ್ತು ಎರಡನೇ ಅಲೆಯಲ್ಲಿ ಇಲ್ಲಿಯವರೆಗೂ ಗ್ರಾಮೀಣ ಪ್ರದೇಶದಲ್ಲಿ 1249 ಪ್ರಕರಣಗಳು, ಮುಂಡರಗಿ ಪಟ್ಟಣದಲ್ಲಿ 750 ಪ್ರಕರಣಗಳು ಸೇರಿದಂತೆ ಒಟ್ಟು 1994 ಕೋವಿಡ್‌ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 32 ಜನ ಸೊಂಕೀತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಸೋಂಕು ಹರಡುತ್ತಿದ್ದಂತೆ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ಕರ್ಫ್ಯೂ ಅನ್ನು ಕಠಿಣಗೊಳಿಸಬೇಕು. ಇಲ್ಲದಿದ್ದರೆ ಸಮುದಾಯದಲ್ಲಿ ಸೋಂಕು ಹರಡುವ ಸಾಧ್ಯತೆ ಅಲ್ಲಗೆಳೆಯುವಂತಿಲ್ಲ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.