ಶಿಕ್ಷಕರಿಗೆ ಕೋವಿಡ್‌-ಪೋಷಕರ ಆತಂಕ

ಶಾಲೆಗಳು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯ 11 ಬೋಧಕರಲ್ಲಿ ಸೋಂಕು ಪತ್ತೆ

Team Udayavani, Jan 3, 2021, 3:21 PM IST

ಶಿಕ್ಷಕರಿಗೆ ಕೋವಿಡ್‌-ಪೋಷಕರ ಆತಂಕ

ಗದಗ: ಪರಿಷ್ಕೃತ ವಿದ್ಯಾಗಮ ಯೋಜನೆಯಡಿ ಶಾಲೆಗಳು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯ 11 ಶಿಕ್ಷಕರಲ್ಲಿ ಕೋವಿಡ್‌-19 ಸೋಂಕುದೃಢಪಟ್ಟಿದೆ. ಶಾಲೆಗಳೊಂದಿಗೆ ಆರಂಭಗೊಂಡಿರುವ ಪದವಿ ಪೂರ್ವಕಾಲೇಜುಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲದಿರುವುದು ಮತ್ತುಕೆಲ ಶಾಲಾ ಶಿಕ್ಷಕರಿಗೆ ಕೋವಿಡ್‌ ದೃಢಪಟ್ಟಿರುವುದು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಿ, ಶುಕ್ರವಾರದಿಂದ ಜಿಲ್ಲೆಯಲ್ಲಿ 9 ರಿಂದ 12ನೇ ತರಗತಿ ವರೆಗೆ ಎಲ್ಲಶಾಲಾ-ಕಾಲೇಜುಗಳು ಪ್ರಾರಂಭಗೊಂಡಿವೆ. ಜ.1ರಿಂದ ಎಲ್ಲ ಶಾಲೆ, ಕಾಲೇಜುಗಳು ಕಾರ್ಯಾರಂಭಿಸಿದ್ದು,ಮಕ್ಕಳು ಕೂಡಾ ಸಂಭ್ರಮದಿಂದ ಹಾಜರಾಗುತ್ತಿದ್ದಾರೆ.ಈ ನಡುವೆ ಕೆಲ ಖಾಸಗಿ ಶಾಲೆಗಳ ಶಿಕ್ಷಕರಲ್ಲಿ ಕೋವಿಡ್‌ ಸೋಂಕು ಕಂಡು ಬಂದಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯ 11ಶಿಕ್ಷಕರಿಗೆ ಸೋಂಕು: ವಿದ್ಯಾಗಮ ಪರಿಷ್ಕರಿಸಿ ಶಾಲಾ ಆವರಣದಲ್ಲೇ ತರಗತಿಗಳನ್ನುನಡೆಸುವ ಸರಕಾರದ ನಿರ್ಧಾರವನ್ನು ಸಾರ್ವಜನಿಕರುಸ್ವಾಗತಿಸಿದ್ದಾರೆ. ಹೀಗಾಗಿ, ಜ. 1ರಂದು ಜಿಲ್ಲೆಯಲ್ಲಿ19 ಸಾವಿರ, ಜ.2 ರಂದು ಅಷ್ಟೇ ಸಂಖ್ಯೆಯ ಮಕ್ಕಳುಹಾಜರಾಗಿದ್ದಾರೆ. ಶಾಲಾ ಪುನಾರಂಭದ ಹಿನ್ನೆಲೆಯಲ್ಲಿಮುಂಜಾಗ್ರತಾ ಕ್ರಮವಾಗಿ ಶಿಕ್ಷಕರಿಗೆ ಕೋವಿಡ್‌ಪರೀಕ್ಷೆ ನಡೆಸಿದ್ದರಿಂದ ಜಿಲ್ಲೆಯ 11 ಶಿಕ್ಷಕರಿಗೆ ಸೋಂಕು ಪತ್ತೆಯಾಗಿದೆ.

ಬೆಟಗೇರಿಯ ಲೋಯಲಾ ಪ್ರಾಥಮಿಕ ಶಾಲೆಯ 5, ಬೆಟಗೇರಿಯ ಲೋಯಲಾ ಪ್ರೌಢಶಾಲೆ, ಬೆಟಗೇರಿಸೇಂಟ್‌ಜಾನ್‌ ಕನ್ನಡ ಪ್ರಾಥಮಿಕ ಶಾಲೆ, ಗದಗಿನಸಿ.ಎಸ್‌.ಪಾಟೀಲ ಪ್ರೌಢಶಾಲೆ, ಗದಗಿನ ಮಾರಲ್‌ಪ್ರಾಥಮಿಕ ಶಾಲೆ ಹಾಗೂ ನರಗುಂದ ತಾಲೂಕಿನಜಗಾಪುರ ಸರಕಾರಿ ಪ್ರೌಢಶಾಲೆಯ ತಲಾ ಒಬ್ಬರುಶಿಕ್ಷಕರಿಗೆ ಕೋವಿಡ್‌ ಪತ್ತೆಯಾಗಿದೆ. ಈ ಪೈಕಿ ಜ.1ರಂದು 9 ಹಾಗೂ ಜ. 2ರಂದು ಒಬ್ಬರಿಗೆ ಕೋವಿಡ್‌ ಸೋಂಕು ಖಚಿತವಾಗಿದೆ.

ಕೋವಿಡ್‌ ಕಂಡು ಬಂದಿರುವ ಶಿಕ್ಷಕರ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ 7 ದಿನಗಳ ಕಾಲ ರಜೆಘೋಷಿಸಿಸಲಾಗಿದೆ. ಆ ಪೈಕಿ ಯಾವುದೇ ಶಿಕ್ಷಕರಿಗೆಕೋವಿಡ್‌-19ರ ಲಕ್ಷಣಗಳಿಲ್ಲದ್ದರಿಂದ ಅವರನ್ನುಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಜೊತೆಗೆಪ್ರಾಥಮಿಕ ಸಂಪರ್ಕದಲ್ಲಿರುವ ಕುಟುಂಬಸ್ಥರು ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಿರುವುದು ಆತಂಕ ಸೃಷ್ಟಿಸಿದೆ.

ಈ ಪೈಕಿ ಬಹುತೇಕ ಶಿಕ್ಷಕಿಯರು ವಿವಿಧ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗಳ ನರ್ಸ್‌(ದಾದಿಯರು) ಗಳಾಗಿದ್ದಾರೆ. ಇತ್ತೀಚೆಗೆ ನಡೆದ ಹಬ್ಬದ ಸಂಭ್ರಮದಲ್ಲಿಸಾಕಷ್ಟು ಜನರೊಂದಿಗೆ ಬೆರೆತಿರುವುದು, ಗೋವಾ,ಮಂಗಳೂರು ಪ್ರಯಾಣದಿಂದಾಗಿ ಸೋಂಕು ಹರಡಿರುವ ಸಾಧ್ಯತೆಗಳಿವೆ. ಅಲ್ಲದೇ, ಕೆಲ ಶಿಕ್ಷಕರಿಗೆಸೋಂಕು ಖಚಿತವಾಗಿರುವ ಸುದ್ದಿ ಹರಡುತ್ತಿದ್ದಂತೆಕೆಲ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯೂ ಕ್ಷೀಣಿಸಿತ್ತು ಎನ್ನಲಾಗಿದೆ.

ಪ.ಪೂ.ಉಪನ್ಯಾಸಕರಿಗಿಲ್ಲ ಕೋವಿಡ್‌ ಪರೀಕ್ಷೆ:ಕಳೆದ ತಿಂಗಳು ಆರಂಭಗೊಂಡ ಪದವಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆಕೋವಿಡ್‌ ನೆಗೆಟಿವ್‌ ವರದಿ ಕಡ್ಡಾಯಗೊಳಿಸಿತ್ತು.ಇದೀಗ ಪುನಾರಂಭಗೊಂಡಿರುವ ವಿದ್ಯಾಗಮಕ್ಕೆ ಶಿಕ್ಷಕರಿಗೆ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವ ಸರಕಾರ, ಈ ನಿಯಮದಿಂದ ಪ.ಪೂ. ಕಾಲೇಜು ಉಪನ್ಯಾಸಕರನ್ನು ಹೊರಗಿಟ್ಟಿರುವುದು ಕುತೂಹಲ ಮೂಡಿಸಿದೆ.

ಜಿಲ್ಲೆಯಲ್ಲಿ 27 ಸರಕಾರಿ, 27 ಅನುದಾನಿ ಹಾಗೂ 35 ಕ್ಕೂ ಹೆಚ್ಚು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ 500ಕ್ಕೂ ಹೆಚ್ಚು ಉಪನ್ಯಾಸಕರು ಬೋಧಿಸುತ್ತಿದ್ದು, ಅವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ. ಆದರೆ, ಕಾಲೇಜಿಗೆ ಹಾಜರಾಗುವವಿದ್ಯಾರ್ಥಿಗಳು ಮಾತ್ರ ಪೋಷಕರ ಒಪ್ಪಿಗೆ ಪತ್ರ ಸಲ್ಲಿಕೆಕಡ್ಡಾಯಗೊಳಿಸಿರುವುದು ಚರ್ಚೆಗೆ ಕಾರಣವಾಗಿದೆ. ಹೀಗಾಗಿ, ಕಳೆದ ಎರಡು ದಿನಗಳಿಂದ ಶೇ.38 ರಷ್ಟು ಮಾತ್ರ ವಿದ್ಯಾರ್ಥಿಗಳ ಹಾಜರಾತಿ ದಾಖಲಾಗಿದೆ. ಅಲ್ಲದೇ,ಪದವಿ ಪೂರ್ವ ಹಂತದಲ್ಲೂ ಎಲ್ಲ ಉಪನ್ಯಾಸಕರುಹಾಗೂ ವಿದ್ಯಾರ್ಥಿಗಳಿಗೂ ಮುಂಜಾಗ್ರತಾ ಕ್ರಮವಾಗಿಕೋವಿಡ್‌ ಪರೀಕ್ಷೆ ನಡೆಸುವುದು ಸೂಕ್ತ ಎಂಬುದು ಪೋಷಕರ ಅಭಿಪ್ರಾಯ.

ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 11 ಶಿಕ್ಷಕರಿಗೆ ಕೋವಿಡ್‌ ಸೋಂಕು ಕಂಡು ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಯಾ ಶಾಲೆಗಳಿಗೆ 7 ದಿನ ರಜೆ ನೀಡಿದ್ದೇವೆ. ಈ ಹಂತದಲ್ಲಿ ಯಾವುದೇ ವಿದ್ಯಾರ್ಥಿಗಳೊಂದಿಗೆ ಸಂಪರ್ಕಕ್ಕೆ ಬಂದಿಲ್ಲ. ಆದರೂ, ಅವರೊಂದಿಗೆ ಪ್ರಾಥಮ ಸಂಪರ್ಕಿತರನ್ನು ಗುರುತಿಸಿ, ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. – ಜಿ.ಎಂ.ಬಸವಲಿಂಗಪ್ಪ, ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ.

ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸಿಲ್ಲ. ಆದರೂ, ಸ್ವಯಂ ಪ್ರೇರಣೆಯಿಂದ ಪರೀಕ್ಷೆಗೆ ಒಳಪಡುವಂತೆ ಉಪನ್ಯಾಸಕರಿಗೆ ಮೌಖೀಕ ನಿರ್ದೇಶನ ನೀಡಿದ್ದೇವೆ. ಈ ವರೆಗೆ ಜಿಲ್ಲೆಯ ಉಪನ್ಯಾಸಕರಿಗೆ ಕೋವಿಡ್‌ ದೃಢಪಟ್ಟಿರುವ ಬಗ್ಗೆ ಮಾಹಿತಿ ಬಂದಿಲ್ಲ. – ಸಿ.ಜಯಪ್ಪ, ಉಪನಿರ್ದೇಶಕ, ಪದವಿ ಪೂರ್ವ ಶಿಕ್ಷಣ ಇಲಾಖೆ

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.