ಡೊನೇಷನ್ ಹಾವಳಿಗೆ ಕಡಿವಾಣ ಹಾಕಿ
Team Udayavani, May 18, 2019, 1:13 PM IST
ರೋಣ: ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಲೀಲಾ ಚಿತ್ರಗಾರ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಅಂಗಡಿಗೆ ಮನವಿ ಸಲ್ಲಿಸಿದರು.
ರೋಣ: ಖಾಸಗಿ ಶಿಕ್ಷಣ ಸಂಸ್ಥೆಗಳ ವಂತಿಗೆ(ಡೊನೇಷನ್) ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಲೀಲಾ ಚಿತ್ರಗಾರ ಶುಕ್ರವಾರ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಅಂಗಡಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಲೀಲಾ ಚಿತ್ರಗಾರ, ರೋಣ ತಾಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ವಂತಿಗೆ ಹಾವಳಿ ಮಿತಿಮೀರಿದ್ದು, ಇದಕ್ಕೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ವಿಫಲವಾಗಿದೆ. ಬಡ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ವಂತಿಗೆ ದಂಧೆ ನಿರ್ವಹಿಸಬೇಕಾದ ಅಧಿಕಾರಿಗಳು ಹಣದ ಆಸೆಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ರಕ್ಷಣೆಗೆ ನಿಂತಿರುವುದು ಖಂಡನೀಯವಾದ ಸಂಗತಿಯಾಗಿದೆ. ವಂತಿಗೆ ಪಡೆಯಬಾರದು ಎಂಬ ಸರ್ಕಾರದ ಆದೇಶವಿದ್ದರೂ ಉಲ್ಲಂಘಿಸಿ ಪೋಷಕರನ್ನು ಶೋಷಿಸುತ್ತಿದ್ದಾರೆ. ಇದರಿಂದಾಗಿ ತಾಲೂಕಿನ ಜನರಿಗೆ ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ವಂತಿಗೆ ಹಾವಳಿ ತಡೆಗಟ್ಟಲು ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮೀನಾಕ್ಷಿ ಬಸನಗೌಡ್ರ, ಸವಿತಾ ಸವದತ್ತಿ, ವಿ.ಎಂ. ವಿರಕ್ತಮಠ, ಬಿ.ಎಸ್. ಕುರಿಯುವರ, ಸುಮಂಗಲಾ ಹೊಕ್ರಾಣಿ, ರೇಖಾ ಸವದತ್ತಿ ಸೇರಿದಂತೆ ಮತ್ತಿತರರು ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444