ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚನೆ


Team Udayavani, Feb 12, 2021, 2:56 PM IST

DC meeting

ಗದಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂ ಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರೈಸಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿ ಸಿದಂತೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಅಭಿಯಾನದಡಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಎಪಿಕ್‌ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಿಧನ ಹೊಂದಿದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬೇಕು. ಚುನಾವಣೆಗಳ ಸಂದರ್ಭದಲ್ಲಿ ವಿಕಲಚೇತನರು, ಎಂಬತ್ತು ವರ್ಷ ಮೇಲ್ಪಟ್ಟವರು ಹಾಗೂ ಕೋವಿಡ್‌ ಸೋಂಕಿತರಿಗೆ ಪೋಸ್ಟಲ್‌ ಬ್ಯಾಲೆಟ್‌ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕನುಗುಣವಾಗಿ ಪೂರ್ವ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದರು. ಮತದಾರರ ಗುರುತಿನ ಚೀಟಿ ಹೊಂದಿದವರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದರ ಕುರಿತು ಪರಿಶೀಲಿಸಲು ಈ-ಎಪಿಕ್‌ ತಂತ್ರಾಂಶ ಜಾರಿಗೆ ತರಲಾಗಿದ್ದು, ಈ ಕುರಿತು ಜಾಗೃತಿ ಮೂಡಿಸಲು ತಿಳಿಸಿದರು.

ಹದಿನೆಂಟು ವರ್ಷ ಪೂರೈಸಿದ ಯುವ ಮತದಾರರು ಹಾಗೂ ವಿಕಲಚೇತನ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಆದ್ಯತೆ ನೀಡುವ ಮೂಲಕ ಎಲ್ಲರಿಗೂ ಮತದಾನದ ಹಕ್ಕು ಒದಗಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ :ಕೇತ್ರಗಳ ಪುನರ್ವಿಂಗಡಣೆಗೆ ಡಿಸಿಗಳಿಗೆ ನಿರ್ದೇಶನ  

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಮಾತನಾಡಿ, ಜಿಲ್ಲೆಯಲ್ಲಿ ನಾಲ್ಕು ಬಾರಿ ವಿಶೇಷ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ 9,711 ಅರ್ಹ ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿರುವ ತಾಂತ್ರಿಕ ನ್ಯೂನತೆ ಸರಿಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಸಿಇಒ ಡಾ|ಆನಂದ ಕೆ., ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾ ತಹಶೀಲ್ದಾರರು ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.