ಕಿತ್ತು ಹೋದ ರಸ್ತೇಲಿ ಕಷ್ಟದ ಸಂಚಾರ

Team Udayavani, Feb 3, 2020, 2:21 PM IST

gadaga-tdy-02

ನರೇಗಲ್ಲ : ರೋಣ ತಾಲೂಕಿನ ಕೊನೆಯ ಹಳ್ಳಿ ನಾಗರಾಳ ಗ್ರಾಮದಿಂದ ನೀರಲಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ಕಿ.ಮೀ ರಸ್ತೆ ಹಾಗೂ ಮಧ್ಯದಲ್ಲಿರುವ ಸೇತುವೆ ಸಂಪೂರ್ಣವಾಗಿ ಕಿತ್ತು ಹೋಗಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ರಸ್ತೆ ಹದಗೆಟ್ಟಿರುವುದರ ಜತೆಗೆ ಅಲ್ಲಲ್ಲಿ ತಗ್ಗು-ದಿನ್ನೆಗಳು ಬಿದ್ದು ಬೈಕ್‌ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಸ್ತೆ ಸುಧಾರಣೆ ಹಾಗೂ ಸೇತುವೆ ಕಾಮಗಾರಿಗೆ ಕೋಟಿ ಹಣ ವ್ಯರ್ಥ ಮಾಡಿದರೂ ರಸ್ತೆ ಕಾಮಗಾರಿ ಮಾತ್ರ ಮುಗಿಯುತ್ತಿಲ್ಲ.

ಈ ರಸ್ತೆಯ ಮೇಲೆ ಮಳೆಗಾಲದ ಸಮಯದಲ್ಲಿ ಸದಾ ಕೆಸರಿನಿಂದ ಕೂಡಿರುತ್ತದೆ. ಅಲ್ಲದೆ ತೆಗ್ಗಿನಲ್ಲಿ ನೀರು ತುಂಬಿಕೊಂಡಿರುವುದರಿಂದ ಸ್ವಲ್ಪ ನಿಷ್ಕಾಳಜಿಯಿಂದ ಪ್ರಯಾಣ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ. ರಸ್ತೆ ದಶಕಗಳಿಂದ ಹದೆಗಟ್ಟಿರುವುದನ್ನು ಗಮನಸಿದ ಆಗಿನ ಶಾಸಕ ಬಿ.ಆರ್‌. ಯಾವಗಲ್ಲ ಅವರು ಜಿ.ಪಂನ ನರ್ಬಾಡ್‌ ಯೋಜನೆಯ 1 ಕೋಟಿ ರೂ. ಅನುದಾನದಲ್ಲಿ ಈ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ಈ ಕಾಮಗಾರಿ ಮಾತ್ರ ಆಮೆವೇಗದಲ್ಲಿ ಸಾಗಿದೆ. ಗುತ್ತಿಗೆದಾರ ಹಾಗೂ ಜಿ.ಪಂನ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಾಹನ ಸವಾರರು ಜೀವವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಸಂಚಾರ ಮಾಡುತ್ತಿದ್ದಾರೆ.

ರಸ್ತೆ ಹದಗೆಟ್ಟಿರುವುದರಿಂದ ದೊಡ್ಡ ಪ್ರಮಾಣದ ವಾಹನಗಳು ಹೆಚ್ಚಾಗಿ ರಸ್ತೆಯಿಂದ ಬರಲು ಹಿಂದೇಟು ಹಾಕುತ್ತಿವೆ. ಕೇವಲ ಗ್ರಾಮಕ್ಕೆ ದಿನಕ್ಕೆ ಒಂದೇ ಬಸ್‌ ಓಡಾಡುತ್ತಿದೆ. ಹೀಗಾಗಿ ಗ್ರಾಮದ ಸಾರ್ವಜನಿಕರು, ವಿದ್ಯಾರ್ಥಿಗಳು, ವ್ಯಪಾರಸ್ಥರು, ಕೂಲಿ, ಕಾರ್ಮಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಇದ್ದ ಅಲ್ಲ ಪ್ರಮಾಣದ ರಸ್ತೆಯಲ್ಲಿಯೂ ಕಾಮಗಾರಿ ಪ್ರಾರಂಭವಾಗಿರುವದರಿಂದ ಸಂಪೂರ್ಣವಾಗಿ ಜಲ್ಲಿ ಕಲ್ಲುಗಳು ತುಂಬಿಕೊಂಡಿವೆ. ಅಲ್ಲದೇ ಕೇಲ ಭಾಗದಲ್ಲಿ ದೊಡ್ಡ ಪ್ರಮಾಣದ ತಗ್ಗುಗಳು ಬಿದ್ದಿದ್ದು ಸಮಸ್ಯೆ ಇಷ್ಟು ಜಟಿಲ್‌ವಾಗಿದೆ. ರಸ್ತೆ ಮೇಲೆ ಖಡಿಗಳು ಹಾಗೂ ಗರಸು ಹಾಕಿರುವುದರಿಂದ ವಾಹನಗಳಿಗೆ ತೊಂದರೆಯಾಗುತ್ತದೆ. ಈ ರಸ್ತೆಯ ಮಧ್ಯದಲ್ಲಿ ಸಂಚರಿಸುವಾಗ ಸ್ವಲ್ಪ ಎಚ್ಚರಿಕೆಯಿಂದ ಸಂಚರಿಸಬೇಕಾಗುತ್ತದೆ.

ಗುತ್ತಿಗೆದಾರನ ನಿರ್ಲಕ್ಷ್ಯ: ಜಿ.ಪಂ ನರ್ಬಾಡ್‌ ಯೋಜನೆಯ 1 ಕೋಟಿ ರೂ.ಅನುದಾನದಲ್ಲಿ ನಾಗರಾಳ ಗ್ರಾಮದಿಂದ ನೀರಲಗಿ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರು ಕಾಮಗಾರಿಯನ್ನು ವಿಳಂಬ ಮಾಡುತ್ತಿರುವುದರಿಂದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಗ್ರಾಮಸ್ಥರು ಗುತ್ತಿಗಾರರ ವಿರುದ್ಧ ಜಿ.ಪಂ ಅಧಿಕಾರಿಗಳಿಗೆ ಹತ್ತು ಹಲವಾರು ಬಾರಿ ಮೌಖೀಕ ಹಾಗೂ ಲಿಖೀತ ಅರ್ಜಿಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಕಳಪೆ ಕಾಮಗಾರಿ ಆರೋಪ: 1 ಕೋಟಿ ಅನುದಾನದಲ್ಲಿ ನಿರ್ಮಿಸುತ್ತಿರುವ 3 ಕಿ.ಮೀ ರಸ್ತೆ ಹಾಗೂ ಸಣ್ಣ ಹಳ್ಳದ ಸೇತುವೆಗೆ ಎತ್ತರದ ತಡಗೋಡೆ ನಿರ್ಮಾಣದಲ್ಲಿ ಕಳಪೆ ಗುಣಮಟ್ಟದ ಹಳ್ಳ ಮರಳು, ಖಡಿ, ಕಬ್ಬಿಣ, ಸಿಮೆಂಟ್‌, ಡಾಂಬರ್‌ ಸೇರಿದಂತೆ ಕಾಮಗಾರಿಗೆ ಬಳಕೆ ಮಾಡುತ್ತಿರುವ ವಸ್ತುಗಳು ಸಂಪೂರ್ಣವಾಗಿ ಕಳಪೆ ಗುಣಮಟ್ಟದಿಂದ ಕೂಡಿವೆ. ಹೀಗಾಗಿ ಗ್ರಾಮಸ್ಥರು ಕಾಮಗಾರಿಯನ್ನು ಕಳೆದ ಮೂರ್‍ನಾಲ್ಕು ತಿಂಗಳಗಳಿಂದ ಸ್ಥಗಿತಗೊಳಿಸಿದ್ದಾರೆ. ಅಲ್ಲದೇ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ ಅ ಧಿಕಾರಿಗಳಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ನಾಗರಾಳ ಗ್ರಾಮದಿಂದ ನೀರಲಗಿ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆಗೆ ಈಗಾಗಲೇ 1 ಕೋಟಿ ರೂ. ಅನುದಾನ ನರ್ಬಾಡ್‌ ಯೋಜನೆಯಡಿ ನೀಡಲಾಗಿದೆ. ಆದರೆ, ಗುತ್ತಿಗೆ ಪಡೆದ ಗುತ್ತಿಗೆದಾರ ಕಾಮಗಾರಿಯನ್ನು ವಿಳಂಬ ಮಾಡಿರುವ ಬಗ್ಗೆ ಇಲಾಖೆ ಗಮನಕ್ಕೆ ಬಂದಿದೆ. ಕೂಡಲೇ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಲಾಗುವುದು. ರಸ್ತೆ ಸುಧಾರಣೆ ಹಾಗೂ ಸೇತುವೆ ಕಾಮಗಾರಿಯನ್ನು ಕೂಡಲೇ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು. ಉಮೇಶ ಮಂಡಸೊಪ್ಪಿ, ಜಿ.ಪಂ ಅಭಿಯಂತರ

ಸಿಕಂದರ ಎಂ. ಆರಿ

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.