ʼವಿರೋಧಿಗಳಿಗೆ ಅಭಿವೃದಿ ಕಾರ್ಯಗಳೇ ಉತ್ತರಿಸುತ್ತೆ’

ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅಭಿಮತ; ಅಡವಿ ಸೋಮಾಪುರದಲ್ಲಿ ಕಾಮಗಾರಿಗೆ ಚಾಲನೆ

Team Udayavani, Sep 4, 2022, 3:18 PM IST

14

ಗದಗ: ಅಡವಿ ಸೋಮಾಪುರ ಗ್ರಾಮದಲ್ಲಿ ರಸ್ತೆ, ಶಾಲಾ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ 4.75 ಕೋಟಿ ರೂ. ಅನುದಾನ ಒದಗಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಮಾತನಾಡುವುದೇ ಸಾಧನೆ ಆಗದೇ, ಅಭಿವೃದ್ಧಿ ಕಾಮಗಾರಿಗಳ ಮೂಲಕ ಸಾಧನೆಯೇ ಮಾತನಾಡುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸುಭದ್ರ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಅಭಿವೃದ್ಧಿಯತ್ತ ಚಿಂತಿಸುವ ಮೂಲಕ ಅನುಷ್ಠಾನಗೊಳಿಸೋಣ ಎಂದರು.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪ್ರವಾಹ ಬಂದೊದಗಿತು. ಅದನ್ನು ಸಮರ್ಥವಾಗಿ ನಿಭಾಯಿಸುವ ಹೊತ್ತಿಗೆ ಜಗತ್ತೇ ತಲ್ಲಣಗೊಳಿಸುವ ಕೋವಿಡ್‌ ಮಹಾಮಾರಿ ಆವರಿಸಿತು. ಈ ವೇಳೆ ಬಿ.ಎಸ್‌. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪರಿಸ್ಥಿತಿ ವೀಕ್ಷಿಸಿ ಕೋವಿಡ್‌ ಹತೋಟಿಗೆ ಹರಸಾಹಸ ಪಟ್ಟಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಆರೋಗ್ಯ ಕ್ಷೇತ್ರದ ಸುಧಾರಣೆಗೆ ಹಲವಾರು ಕ್ರಮಗಳನ್ನು ಹಾಗೂ ಕಠಿಣ ನಿರ್ಧಾರಗಳನ್ನು ಕೈಗೊಂಡು ಜನರ ಜೀವ ರಕ್ಷಣೆಗಾಗಿ ಸರ್ಕಾರ ಹಗಲಿರುಳು ಶ್ರಮಿಸಿದೆ ಎಂದು ಹೇಳಿದರು.

ನಂತರ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಮಕ್ಕಳಿಗೆ ವಿದ್ಯಾನಿಧಿ ಮೂಲಕ ದೇಶದಲ್ಲಿಯೇ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರಥಮ ಯೋಜನೆ ಜಾರಿಗೊಳಿಸಲಾಯಿತು. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ರಸ್ತೆ, ಕಟ್ಟಡ ಸೇರಿದಂತೆ ಮೂಲ ಸೌಕರ್ಯಗಳಿಗಾಗಿ ಅಂದಾಜು 16 ಸಾವಿರ ಕೋಟಿ ರೂ. ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವಿನಿಯೋಗಿಸಲಾಗಿದೆ. ವಿರೋಧಿ ಗಳ ಟೀಕೆ-ಟಿಪ್ಪಣಿಗಳಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಪ್ರತ್ಯುತ್ತರ ನೀಡೋಣ ಎಂದರು.

ಗ್ರಾಪಂ ಅಧ್ಯಕ್ಷ ಶ್ಯಾಮಸುಂದರ ಡಂಬಳ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಸಚಿವರು ಸ್ಪಂದಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟಿಗೂ ಅಧಿಕ ಅನುದಾನ ನೀಡಿದ್ದಾರೆ. ಗ್ರಾಮದ ಅಭಿವೃದ್ಧಿ ಪರ್ವ ಅವರಿಂದ ಹೀಗೆಯೇ ನಿರಂತರವಾಗಿ ಮುಂದುವರೆಯಲಿ ಎಂದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.