ಈರುಳ್ಳಿ-ಮೆಣಸಿನಕಾಯಿಗೆ ರೋಗಬಾಧೆ

•ಕೈಗೆ ಬರುವ ಮುನ್ನವೇ ಹಾಳಾದ ಬೆಳೆ •ಮಾಡಿದ ಖರ್ಚು ಸಿಗೋದು ಅನುಮಾನ

Team Udayavani, Sep 6, 2019, 11:28 AM IST

gadaga-tdy-1

ನರೇಗಲ್ಲ: ಈರುಳ್ಳಿ ಬೆಳೆಗೆ ಬೂದಿ ರೋಗ, ಮಜ್ಜಿಗೆ ರೋಗ ಕಾಣಿಸಿರುವುದು.

ನರೇಗಲ್ಲ: ಜಿನುಗು ಮಳೆಯಿಂದ ಈರುಳ್ಳಿ-ಮೆಣಸಿನ ಕಾಯಿ ಬೆಳೆಗೆ ಬೂದಿ, ಮಜ್ಜಿಗೆ, ಮುಟ್ಟಿಗೆ ರೋಗ ಹಾಗೂ ಕೀಟಬಾಧೆ ಸೇರಿದಂತೆ ಇತರೆ ರೋಗಗಳು ತಗುಲಿದ್ದು, ರೈತರು ಸಮುದಾಯದಲ್ಲಿ ಆತಂಕ ಸೃಷ್ಟಿಸಿದೆ.

ಈಗಾಗಲೇ ಮಳೆ ಕೊರತೆ, ಅಂತರ್ಜಲ ಕುಸಿತ, ವಿದ್ಯುತ್‌ ಸಮಸ್ಯೆ, ಕೂಲಿಕಾರರ ಸಮಸ್ಯೆ ಹಾಗೂ ಇತರೆ ಹತ್ತಾರು ಸಮಸ್ಯೆಗಳ ನಡುವೆ ಕಂಗೆಟ್ಟಿರುವ ಇಲ್ಲಿನ ರೈತರು ಒಣ ಬೇಸಾಯ ಹಾಗೂ ನೀರಾವರಿಯ ಕೊಳವೆ ಬಾವಿಗಳಲ್ಲಿರುವ ನೀರನ್ನು ಉಪಯೋಗಿಸಿಕೊಂಡು ಮುಂಗಾರು ಹಂಗಾಮಿಗೆ ಈರುಳ್ಳಿ ಹಾಕಿದರೆ ಕೊಳವೆ ರೋಗ, ಮಜ್ಜಿಗೆ ರೋಗ, ಬೂದಿ ರೋಗ, ಮುಟ್ಟಿಗೆ ರೋಗ ತಗುಲಿದೆ.

ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ 4500 ಹೆಕ್ಟೇರ್‌ನಲ್ಲಿ ಈರುಳ್ಳಿ, ಮೆಣಸಿನ ಕಾಯಿ ಬೆಳೆ ನಾಟಿ ಮಾಡಿದ್ದಾರೆ. ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ಈಗ ನಾನಾ ರೋಗಗಳು ತಗುಲಿ ಎದೆಗುಂದುವಂತೆ ಮಾಡಿವೆ. ಈರುಳ್ಳಿ, ಮೆಣಸಿನ ಬೆಳೆಗಳಿಗೆ ಸಂಪೂರ್ಣ ರೋಗಕ್ಕೆ ತುತ್ತಾಗಿದೆ. ಈ ರೋಗದಿಂದಾಗಿ ಗಡ್ಡೆಗಳು ದೊಡ್ಡವಾಗದೆ ಪೀಚುಗಡ್ಡೆಗಳಾಗಿವೆ. ಅಲ್ಲದೇ, ಮೇಲಿನ ಎಲೆಗಳು ಬೂದಿ ಹಾಗೂ ಮಜ್ಜಿಗೆ ರೋಗದಿಂದ ಒಣಗುತ್ತಿದ್ದು, ಗಡ್ಡೆಗಳನ್ನು ಕಿತ್ತು ಹಾಕಲು ರೈತರು ನಿರ್ಧರಿಸಿದ್ದಾರೆ.

ಬಂಡವಾಳಕ್ಕೆ ತೊಂದರೆ: ಒಂದು ಎಕರೆಯಲ್ಲಿ ಈರುಳ್ಳಿ ಬೆಳೆಯಲು ಹೊಲ ಹದ ಮಾಡುವುದರಿಂದ ಹಿಡಿದು ಬೀಜ, ಗೊಬ್ಬರ, ಔಷಧ ಹಾಗೂ ಕೂಲಿ ಮತ್ತು ಇತರೆ ಖರ್ಚುಗಳು ಸೇರಿ 40 ರಿಂದ 50 ಸಾವಿರ ರೂ. ಖರ್ಚಾಗುತ್ತಿದೆ. ಅಲ್ಲದೆ, ನೀರಾವರಿ ಜಮೀನುಗಳಿಗೆ ವಿದ್ಯುತ್‌ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ನೀರು ಬಿಡದಿದ್ದರೆ ಬೆಳೆ ಒಣಗುತ್ತದೆ. ಇಳುವರಿ ಕುಂಟಿತಗೊಳ್ಳುತ್ತದೆ.

ಇಳುವರಿ ಕುಂಟಿತ: ಮುಂಗಾರು ವಿಫಲ ಹಿನ್ನೆಲೆಯಲ್ಲಿ ಬೆಳೆಗಳು ಕುಂಟಿತಗೊಂಡ ಕಾರಣ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಮಾರುಕಟ್ಟೆಯಲ್ಲಿ ಈಗ ಒಂದು ಕ್ವಿಂಟಲ್ ಈರುಳ್ಳಿಗೆ 2500 ರೂ.ಗಳಿಂದ 3000 ರೂ.ಗಳವರೆಗೆ ಬೆಲೆ ಇದೆ. ಇಂಥ ಸಂದರ್ಭದಲ್ಲಿ ಹೋಬಳಿ ವ್ಯಾಪ್ತಿಯ ರೈತರು ನಾಲ್ಕು ಕಾಸು ಕಾಣಲು ಅನುಕೂಲವಾಗಿತ್ತು. ವಿಪರ್ಯಾಸ ಎಂದರೆ ಬೆಲೆ ಏರಿಕೆಯಿದ್ದರೂ, ಇಳುವರಿ ಇಲ್ಲದ್ದರಿಂದ ರೈತರಿಗೆ ಉಪಯೋಗವಾಗುತ್ತಿಲ್ಲ.

ರೈತರ ದೂರು: ಹೋಬಳಿ ವ್ಯಾಪ್ತಿಯಲ್ಲಿನ ಈರುಳ್ಳಿ, ಮೆಣಸಿನ ಬೆಳೆಗೆ ರೋಗಗಳು ಕಾಡುತ್ತಿರುವ ಬಗ್ಗೆ ಈಗಾಗಲೇ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅವರಿಂದ ಸಮರ್ಪಕ ಉತ್ತರವಾಗಲಿ, ಸಲಹೆಗಳಾಗಲಿ ಸಿಕ್ಕಿಲ್ಲ ಎಂದು ರೈತರು ದೂರುತ್ತಿದ್ದಾರೆ.

•ಸಿಕಂದರ ಎಂ. ಆರಿ

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.