ಅನ್ನದಾತನ ಬದುಕಿಗೆ ಬರಗಾಲ ಬರ


Team Udayavani, Sep 23, 2019, 12:27 PM IST

gadaga-tdy-2

ನರೇಗಲ್ಲ: ಬರಗಾಲ ಅನ್ನದಾತನ ಬದುಕಿಗೆ ಮತ್ತೂಮ್ಮೆ ಬರೆ ಎಳೆದಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗಿದ್ದು, ಕೀಟ ಬಾಧೆಯೂ ಕೆಲವೆಡೆ ಕಂಡುಬರುತ್ತಿದೆ. ಇದರಿಂದ ರೈತರು ತತ್ತರಿಸಿಹೋಗಿದ್ದಾರೆ. ಒಂದೊಮ್ಮೆ ಮಳೆಯಾದರೆ ಹೊಸ ಬೆಳೆ ತೆಗೆಯುವ ಉದ್ದೇಶದಿಂದ ಒಣಗಿ ನಿಂತ ಬೆಳೆಗಳನ್ನು ಹರಗುವ (ಹಾಳು ಮಾಡುವ)ಕೆಲಸವನ್ನು ಹೋಬಳಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ರೈತರು ಮುಂದುವರಿಸಿದ್ದಾರೆ.

ಕಳೆದ ಜೂನ್‌ ತಿಂಗಳ ಮುಂಗಾರು ಆರಂಭದಲ್ಲಿ ಮಳೆಯು ಬಿತ್ತನೆಗೆ ಆಸೆ ತೋರಿಸಿದ್ದರಿಂದ ರೈತರು ಹತ್ತಿ, ಹೆಸರು, ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ, ಅಲಸಂದಿ, ಈರುಳ್ಳಿ, ಮೆಣಸಿಕಾಯಿ ಸೇರಿದಂತೆ ನಾನಾ ಬೆಳೆಯನ್ನು ಬಿತ್ತನೆ ಮಾಡಿದ್ದರು. ಬಿತ್ತನೆ ಬಳಿಕ ಒಮ್ಮೆಯು ಕೂಡ ಮಳೆ ಸರಿಯಾಗಿ ಸುರಿದಿಲ್ಲ. ಹೀಗಾಗಿ ಬೆಳೆದು ನಿಂತ ಬೆಳೆ  ಒಣಗಿ ಸಂಪೂರ್ಣ ಹಾಳಾಗಿದೆ. ರವಿವಾರ ಜಕ್ಕಲಿ ಗ್ರಾಮದ ರೈತರು ಅಲಸಂದಿ ಬೆಳೆಯನ್ನು ನಾಶಪಡಿಸಿದ್ದಾರೆ. ಸುಮಾರು 21 ಎಕರೆ ಜಮೀನಿನಲ್ಲಿ ಅಲಸಂದಿ ಬೆಳೆದಿದ್ದರು. ಮಳೆ ಮತ್ತು ಕೀಟ ಬಾಧೆಯಿಂದ ಇಳುವರಿ ಒಣಗಲು ಶುರುವಾಗಿತ್ತು. ಜಮೀನಿನಲ್ಲಿ ಬೆಳೆ ಬಿಟ್ಟರೆ ಮತ್ತಷ್ಟು ಹಾನಿಯಾಗುವ ಸಾಧ್ಯತೆ ಅರಿತು ಟ್ರ್ಟಾಕ್ಟರ್‌ ಬಳಸಿ ನಾಶಗೊಳಿಸಿದ್ದಾರೆ. ಆದರೆ, ಅನ್ನದಾತನ ಕೈಗೆ ಹತ್ತು ಪೈಸೆಯೂ ಬಂದಿಲ್ಲ.

15 ಸಾವಿರ ಹೆಕ್ಟೇರ್‌ ಬಿತ್ತನೆ: ಹೋಬಳಿ ವ್ಯಾಪ್ತಿಯ ಒಟ್ಟು ಕ್ಷೇತ್ರ 44,820 ಹೆಕ್ಟೇರ್‌ ಇದ್ದು, ಇದರಲ್ಲಿ ಅಂದಾಜು 15 ಸಾವಿರ ಹೆಕ್ಟೇರ್‌ ಮಾತ್ರ ಬಿತ್ತನೆ ಮಾಡಲಾಗಿತ್ತು. ಬಹುತೇಕ ಖುಷ್ಕಿ ಜಮೀನು ಆಗಿದ್ದು, ಹೆಸರು, ಸೂರ್ಯಕಾಂತಿ, ಜೋಳ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಅಲಸಂದಿ, ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ. ಆದರೆ, ಮಳೆ ಇಲ್ಲದೆ ತೇವಾಂಶ ಕೊರತೆ, ಕೀಟ ಭಾಧೆಯಿಂದ ಬೆಳೆಗಳು ಒಣಗಿವೆ. ಹೀಗಾಗಿ ಬೆಳೆಯನ್ನು ಹರಗಲಾಗುತ್ತಿದೆ. ಜಕ್ಕಲಿ, ಮಾರನಬಸರಿ, ಹಾಲಕೆರೆ, ನಿಡಗುಂದಿ, ನಿಡಗುಂದಿಕೊಪ್ಪ, ಬೂದಿಹಾಳ, ಅಬ್ಬಿಗೇರಿ, ಹೊಸಳ್ಳಿ, ಕಳಕಾಪುರ, ಡ.ಸ. ಹಡಗಲಿ, ಯರೇಬೇಲೇರಿ, ಕುರಡಗಿ, ಗುಜಮಾಗಡಿ, ನಾಗರಾಳ, ನರೇಗಲ್ಲ ಪಟ್ಟಣ ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರಿಂದ ಹರಗುವ ಕೆಲಸ ಜೋರಾಗಿದೆ.

ಸಾವಿರಾರು ರೂ. ನಷ್ಟ :  ಬಿತ್ತನೆ ಬೀಜ ಖರೀದಿ, ಬಿತ್ತುವ ಕೂಲಿ ಸೇರಿದಂತೆ ವಿವಿಧ ಕಾರ್ಯಕ್ಕೆ ಎಕರೆಗೆ ಸುಮಾರು 20-25 ಸಾವಿರ ರೂ. ಖರ್ಚು ಮಾಡಲಾಗಿದೆ. ಒಂದು ಬಾರಿ ಕ್ರಿಮಿನಾಶಕ ಸಿಂಪಡಣೆಯೂ ಮಾಡಿಯಾಗಿದೆ. ಆದರೆ, ಬೆಳೆ ಮಾತ್ರ ಕೈಗೆ ಬಾರದೇ ಬೆಳೆಯುವ ಹಂತದಲ್ಲಿಯೇ ನೆಲಸಮವಾಗುತ್ತಿದೆ. ಇದರಿಂದಾಗಿ ಈ ಬಾರಿಯೂ ರೈತರು ಪುನಃ ನಷ್ಟವನ್ನೇ ಅನುಭವಿಸುವಂತಾಗಿದೆ.

ಮುಂಗಾರು ಆರಂಭದಲ್ಲಿ ಸುರಿದ ಅಲ್ಪಸ್ವಲ್ಪ ಮಳೆ ನೆಚ್ಚಿಕೊಂಡು ಸಾವಿರಾರು ರೂ. ಖರ್ಚು ಮಾಡಿ ಬಿತ್ತನೆ ಮಾಡಲಾಗಿದೆ. ಆದರೆ, ತೇವಾಂಶ ಕೊರತೆಯಿಂದ ಬೆಳೆ ಸಂಪೂರ್ಣ ಒಣಗಿದೆ. ಹೀಗೆ ಬಿಟ್ಟರೆ ಯಾವ ಫಸಲೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಬೆಳೆ ಹರಗಲಾಗುತ್ತಿದ್ದು, ಮಳೆ ಸುರಿದರೆ ಮತ್ತೂಮ್ಮೆ ಬಿತ್ತನೆ ಮಾಡಬಹುದು. ಎಂ.ಎಸ್‌. ಧಡೇಸೂರಮಠ, ರೈತ

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯು ವಾಡಿಕೆ ಪ್ರಮಾಣಕ್ಕಿಂತ ಕಡಿಮೆಯಾಗಿದೆ. ಮೆಕ್ಕೆಜೋಳದಲ್ಲಿ ಸೈನಿಕ ಹುಳು, ಶೇಂಗಾ ಹಾಗೂ ವಿವಿಧ ಬೆಳೆಗಳಿಗೆ ಕೀಟ ಬಾಧೆ ಹೆಚ್ಚಾಗಿ ಕಂಡುಬಂದಿದ್ದರಿಂದ ರೈತರು ನಿರೀಕ್ಷಿತ ಇಳುವರಿ ಪಡೆಯಲು ಸಾಧ್ಯವಾಗುತ್ತಿಲ್ಲ. ಜಗದೀಶ ಹಾದಿಮನಿ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ.

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.