Landslide ಉಂಟಾಗಿ ಸಂಕಷ್ಟ: ಗದಗದ ಅಮರನಾಥ ಯಾತ್ರಿಗಳೆಲ್ಲರೂ ಸೇಫ್
Team Udayavani, Jul 8, 2023, 4:32 PM IST
ಗದಗ: ಜಿಲ್ಲೆಯಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಜನರು ಶುಕ್ರವಾರ ಉಂಟಾದ ಭೂಕುಸಿತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ತೆರಳಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬುದು ತಿಳಿದು ಬಂದಿದೆ.
ಜುಲೈ 4ರಂದು ಗದಗದಿಂದ 23 ಜನರ ತಂಡವು ಅಮರನಾಥ ಯಾತ್ರೆ ಕೈಗೊಂಡಿತ್ತು. ಶುಕ್ರವಾರ ಅಮರನಾಥ ದರ್ಶನ ಪಡೆದು ವಾಪಸ್ಸಾಗುವ ವೇಳೆ ಗುಡ್ಡ ಕುಸಿತ ಉಂಟಾಗಿ, ರಸ್ತೆ ಮಧ್ಯೆ ಸಿಲುಕಿ ಸಂಕಷ್ಟಕ್ಕೀಡಾಗಿದ್ದಾರೆ.
ಅಮರನಾಥ ಯಾತ್ರೆಗೆ ತೆರಳಿದ್ದ 23 ಜನರ ತಂಡವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸಂಪರ್ಕಕ್ಕೆ ದೊರೆತಿದ್ದು, ಅಲ್ಲಿನ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಿದ್ದಾರೆ.
ಅಮರನಾಥ ಯಾತ್ರೆಗೆ ತೆರಳಿದ್ದ ತಂಡವನ್ನು ಸುರಕ್ಷಿತವಾಗಿ ಗದಗ ನಗರಕ್ಕೆ ವಾಪಸ್ ತರಲು ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈಗಾಗಲೇ ತಯಾರಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ