ಕೆರೆ ತುಂಬಿಸುವ ಯೋಜನೆಗೆ ಗ್ರಹಣ

•ರೈತರ ಜಮೀನು ಅಗೆದು ವರ್ಷ ಕಳೆದರೂ ಮುಗಿದಿಲ್ಲ ಕಾಮಗಾರಿ-ಕೃಷಿ ಕಾರ್ಯಕ್ಕೆ ತೊಂದರೆ

Team Udayavani, May 21, 2019, 8:41 AM IST

gadag-tdy-1..

ಲಕ್ಷ್ಮೇಶ್ವರ: ತಾಲೂಕಿನ ಬಾಲೇಹೊಸೂರ ಗ್ರಾಮದಲ್ಲಿನ ಎರಡು ಕೆರೆಗಳಿಗೆ ಸಮೀಪದ ವರದಾ ನದಿಯಿಂದ ನೀರು ತುಂಬಿಸುವ ಸಣ್ಣ ನೀರಾವರಿ ಇಲಾಖೆಯ 9.45 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷೆ ಯೋಜನೆ ಕುಂಟುತ್ತಾ ಸಾಗಿದೆ.

ಬಾಲೆಹೊಸೂರ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಎರಡು ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2017 ಡಿ. 25ರಂದು ಚಾಲನೆ ನೀಡಿದ್ದರು. ಆದರೆ ಕಳೆದ ಒಂದೂವರೆ ವರ್ಷದಿಂದಲೂ ಈ ಯೋಜನೆ ಕಾಮಗಾರಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಮಂಗಳೂರಿನ ಓಶಿಯನ್‌ ಕನ್‌ಸ್ಟ್ರಕ್ಸನ್‌ ಕಂಪನಿಯವರು ಇದರ ಗುತ್ತಿಗೆ ಪಡೆದಿದ್ದಾರೆ. ಮುಖ್ಯ ಗುತ್ತಿಗೆದಾರರು 2ನೇ ಯವರಿಗೆ ಕಾಮಗಾರಿ ಮಾಡಲು ನೀಡಿರುವುದು ಕಾಮಗಾರಿ ವೇಗ ಕಳೆದುಕೊಂಡಿದೆ ಎಂಬುದು ರೈತರ ಆರೋಪ. 18 ತಿಂಗಳ ಕಾಲಾವಧಿಯ ಈ ಕಾಮಗಾರಿಯನ್ನು ಗುತ್ತಿಗೆದಾರರು ಸಮರ್ಪಕವಾಗಿ ನಿರ್ವಹಿಸಿದ್ದರೆ ಈ ಮಳೆಗಾಲದಲ್ಲಾದರೂ ಕೆರೆಗಳು ತುಂಬುತ್ತಿದ್ದವು. ಆದರೆ ಗುತ್ತಿಗೆದಾರರ ನಿರ್ಲಕ್ಷ, ಸಣ್ಣ ನೀರಾವರಿ ಇಲಾಖೆ ಬೇಜಾವಾಬ್ದಾರಿಯಿಂದ ಯೋಜನೆ ಸಾಫಲ್ಯವಾಗುವಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ.

ಪ್ರಾರಂಭದ ಹಂತದಲ್ಲಿ ಈ ಯೋಜನೆಗೆ ಮರಡೂರ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರು ಪ್ರತಿರೋಧ ವ್ಯಕ್ತಪಡಿಸಿದ್ದರು. ಆದರೆ ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಶ್ರೀಗಳ ಮಧ್ಯಸ್ಥಿಕೆಯಲ್ಲಿ ರೈತರ ಮನವೊಲಿಸಿದ ಕಾಮಗಾರಿ ಆರಂಭಕ್ಕೆ ಸಮ್ಮತಿ ಪಡೆಯಲಾಗಿತ್ತು. ಆದರೆ ಗುತ್ತಿಗೆದಾರರು ಮತ್ತು ಇಲಾಖೆಯವರು ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಯರ್ರಾಬಿರ್ರಿ ಕಾಮಗಾರಿ ಮಾಡಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ.

ನದಿ ಪಾತ್ರದಲ್ಲಿ ನಿರ್ಮಿಸಿರುವ ಮೇಲ್ಮಟ್ಟದ ಜಲಾಗಾರ ಕಾಮಗಾರಿ ಅರ್ಧಕ್ಕೆ ನಿಂತಿರುವುದು, ರೈತರ ಜಮೀನುಗಳಲ್ಲಿ ಪೈಪ್‌ಲೈನ್‌ಗಾಗಿ ಅಗೆದಿರುವ ಅರ್ಧಮರ್ಧ ಕಾಲುವೆಗಳು, ಅಳವಡಿಸಬೇಕಾದ ಪೈಪ್‌ಗ್ಳು ಇಲ್ಲದಿರುವುದು ಈ ಕಾಮಗಾರಿ ಕುಂಟುತ್ತಾ ಸಾಗಿರುವುದಕ್ಕೆ ಸಾಕ್ಷಿಯಾಗಿದೆ. ಒಟ್ಟು 11 ಕಿ.ಮೀ ಉದ್ದದ ಪೈಪ್‌ಲೈನ್‌ ಕಾಮಗಾರಿಗಾಗಿ ರೈತರ ಜಮೀನುಗಳನ್ನು ಅಗೆದು ವರ್ಷವೇ ಕಳೆದಿದ್ದು, ರೈತರು ತಮ್ಮ ಜಮೀನುಗಳಲ್ಲಿ ಉಳುಮೆ ಮಾಡದಂತಹ ಸ್ಥಿತಿಯನ್ನು ಗುತ್ತಿಗೆದಾರರು ನಿರ್ಮಿಸಿದ್ದಾರೆ.

ತಮ್ಮೂರ ಕೆರೆಗೆ ನದಿ ನೀರು ಹರಿದು ಬರುತ್ತದೆ ಎಂಬ ಆಶಾಭವನೆಯಿಂದ ಗ್ರಾಮದ ಜನರು ದಿಂಗಾಲೇಶ್ವರ ಶ್ರೀಗಳ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಎರಡೂ ಕೆರಗಳ ಹೂಳೆತ್ತುವ ಕಾರ್ಯ ಮಾಡಿದ್ದಾರೆ. ಆದರೆ ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎಂಬಂತೆ ಸರ್ಕಾರ ಕೆರೆ ತುಂಬಿಸಲು ನೀರಿನಂತೆ ಹಣ ವಿನಿಯೋಗಿಸುತ್ತಿದ್ದರೂ ಸಂಬಂಧಪಟ್ಟವರ ದಿವ್ಯ ನಿರ್ಲಕ್ಷ್ಯ ಮತ್ತು ನಿಷ್ಕಾಳಜಿಯಿಂದಾಗಿ ಯೋಜನೆ ದಿಕ್ಕು ತಪ್ಪಿರುವುದು ನಿರ್ಲಕ್ಷಕ್ಕೆ ಹಿಡಿದ ಕನ್ನಡಿಯಾಗಿದೆ.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಮಂದಿರ ದೇಣಿಗೆ ಲೆಕ್ಕ ಹಾದಿಬೀದಿಯಲ್ಲಿ ಕೇಳುವ ಅಗತ್ಯವೇನು?  

ರಾಮಮಂದಿರ ದೇಣಿಗೆ ಲೆಕ್ಕ ಹಾದಿಬೀದಿಯಲ್ಲಿ ಕೇಳುವ ಅಗತ್ಯವೇನು?  

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

1-ram

ಮತಾಂತರಿಗಳ ಸದೆಬಡಿಯಲು ಶ್ರೀರಾಮ ಸೇನೆ ಸಿದ್ಧ

1tola

ತೋಳ ಕೊಂದು ಬೈಕ್‌ಗೆ ಕಟ್ಟಿ ಎಳೆದೊಯ್ದ ಯುವಕರು

Vijaya Dashami celebration

ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.