ಬರದ ಬರೆಗೆ ಉದ್ಯೋಗ ಖಾತ್ರಿ ಮುಲಾಮು


Team Udayavani, Apr 30, 2019, 2:15 PM IST

gad-1

ನರೇಗಲ್ಲ: ನಾಲ್ಕೈದು ವರ್ಷಗಳಿಂದ ಸತತ ಬರಗಾಲದಿಂದ ಕಂಗೆಟ್ಟಿರುವ ಈ ಭಾಗದ ದುಡಿಯುವ ಕೈಗಳನ್ನು ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆ ಆಧರಿಸಿದೆ. ಯೋಜನೆಯಡಿ ಉದ್ಯೋಗ ಕಲ್ಪಿಸಿ ಕೂಲಿ ಕಾರ್ಮಿಕರ ಬದುಕು ಹಸನು ಮಾಡುವತ್ತ ಸ್ಥಳೀಯ ಹೋಬಳಿ ವ್ಯಾಪ್ತಿಯ ಗ್ರಾಪಂಗಳು ಮುಂದಾಗಿರುವುದು ಶ್ಲಾಘನೀಯವಾಗಿದೆ.

ರೋಣ ತಾಲೂಕಿನ ನರೇಗಲ್ಲ ಹೋಬಳಿ ವ್ಯಾಪ್ತಿಯ ಅಬ್ಬಿಗೇರಿ, ಯರಬೇಲೇರಿ, ಕುರಡಗಿ, ನಾಗರಾಳ, ಗುಜಮಾಗಡಿ, ಡ.ಸ. ಹಡಗಲಿ, ಜಕ್ಕಲಿ, ಮಾರನಬಸರಿ, ಬೂದಿಹಾಳ, ಹೊಸಳ್ಳಿ, ಹಾಲಕೆರೆ, ನಿಡಗುಂದಿಕೊಪ್ಪ, ನಿಡಗುಂದಿ ಸೇರಿದಂತೆ ಕೋಟುಮಚಗಿ, ನಾರಾಯಣಪುರ ಗ್ರಾಮಗಳ ಕೂಲಿ ಕಾರ್ಮಿಕರಿಗೆ ಉದ್ಯೋಗ ‘ಖಾತ್ರಿ’ಯಾಗಿದೆ. ರೈತರ ಜಮೀನುಗಳಿಗೆ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಚೆಕ್‌ ಡ್ಯಾಂ, ಹಳ್ಳದ ಪಕ್ಕದಲ್ಲಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ನದಿ ಪುನಶ್ವೇತನ ಕಾರ್ಯ ಮಾಡುತ್ತಿದ್ದಾರೆ.

ಸಮೀಪದ ಕೋಟುಮಚಗಿ ಗ್ರಾಮದಲ್ಲಿ ಮೂರು ದಿನಗಳಿಂದ ದಿನ ಒಂದಕ್ಕೆ 1460 ಜನರು ಬದುವು ನಿರ್ಮಾಣ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದಾರೆ. ದಿನಕ್ಕೆ ಒಬ್ಬ ಕಾರ್ಮಿಕನಿಗೆ 249 ರೂ. ಕೂಲಿಯನ್ನು ಸರ್ಕಾರ ನಿಗದಿ ಮಾಡಿದೆ. ಅದರಂತೆ 3,63,540 ರೂ. ಪಾವತಿ ಮಾಡಲಾಗುತ್ತಿದೆ. ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಸತತವಾಗಿ 30 ದಿನಗಳ ವರೆಗೆ ಕೆಲಸ ಕೊಡಲಾಗುತ್ತದೆ. ಕೃಷಿ ಇಲಾಖೆಯಿಂದ ಸರ್ವೇ ಮಾಡಿದ ಹೊಲಗಳಲ್ಲಿ ಬದುವು ನಿರ್ಮಾಣ ಕಾಮಗಾರಿ ಮಾಡಲಾಗುತ್ತದೆ. 10 ಅಡಿ ಉದ್ದ-ಅಗಲ ಹಾಗೂ 2 ಅಡಿ ಆಳದ ಬದುವು ಮಾಡಲಾಗುತ್ತದೆ.

ನರೇಗಲ್ಲ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 20515 ಜನ ಜಾಬ್‌ ಕಾರ್ಡ್‌ ಹೊಂದಿದ್ದಾರೆ. ಇದರಲ್ಲಿ ಈಗಾಗಲೇ 10554 ಜನ ಕೆಲಸದಲ್ಲಿ ತೊಡಗಿಕೊಂಡು ಉದ್ಯೋಗ ಖಾತ್ರಿ ಯೋಜನೆ ಲಾಭ ಪಡೆದುಕೊಳ್ಳುತ್ತಿದ್ದಾರೆ. ಗುಳೆ ತಡೆಯುವಲ್ಲಿ ಉದ್ಯೋಗ ಖಾತ್ರಿ ಇಲ್ಲಿ ಪ್ರಮುಖ ಪಾತ್ರ ವಹಿಸಿದೆ.

 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.