ಮಕ್ಕಳ ಸೃಜನಶೀಲತೆ ಅಭಿವ್ಯಕ್ತಗೊಳಿಸಲು ಅವಕಾಶ ನೀಡಿ


Team Udayavani, Nov 28, 2018, 4:26 PM IST

28-november-19.gif

ಗದಗ: ನಿಸರ್ಗದತ್ತವಾಗಿಯೇ ಮಕ್ಕಳಲ್ಲಿ ಸೃಜನಶೀಲತೆ ಅಡಗಿರುತ್ತದೆ. ಅದನ್ನು ಅಭಿವ್ಯಕ್ತಗೊಳಿಸಲು ಮುಕ್ತ ಅವಕಾಶ ಕಲ್ಪಿಸಬೇಕು. ತಮ್ಮ ಸುತ್ತಲಿನ ಜಗತ್ತನ್ನು ಕುತೂಹಲದಿಂದ ಗಮನಿಸುವ ಮೂಲಕ ಮಕ್ಕಳು ತಮಗಾದ ಅನುಭವಗಳನ್ನು ಬರಹದ ರೂಪದಲ್ಲಿ ದಾಖಲಿಸಿ, ಸೃಜನಶೀಲತೆಗೆ ಮತ್ತಷ್ಟು ಇಂಬುಕೊಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ನಾ. ಡಿಸೋಜಾ ಅಭಿಪ್ರಾಯಪಟ್ಟರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ, ಹುಲಕೋಟಿಯ ಕೆ.ಎಚ್‌. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕೆ.ಎಚ್‌. ಪಾಟೀಲ ಗ್ರಾಮ ಹಿತಾಭಿವೃದ್ಧಿ ಸಂಘ, ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ, ಹುಲಕೋಟಿ ಸಮಗ್ರ ಶಿಕ್ಷಣ-ಕರ್ನಾಟಕ, ಬಾಲಭವನ ಸೊಸೈಟಿ ಆಶ್ರಯದಲ್ಲಿ ಹುಲಕೋಟಿಯಲ್ಲಿ ಸಂಘಟಿಸಿದ್ದ ರಾಜ್ಯಮಟ್ಟದ ಮಕ್ಕಳ ಹಬ್ಬದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ತಾಳ್ಮೆ, ಸಹಕಾರ ಮನೋಭಾವವನ್ನು ರೂಢಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ರೂಪಗೊಳ್ಳಲು ಸಾಧ್ಯ ಎಂದು ಹೇಳಿದರು.

ಮೈಸೂರಿನ ಸಿಎಫ್‌ಟಿಆರ್‌ಐ ವಿಜ್ಞಾನ ಸಂವಹನಕಾರ ಕೊಳ್ಳೆಗಾಲ ಶರ್ಮಾ ಮಾತನಾಡಿ, ಮಕ್ಕಳು ಪ್ರಶ್ನೆ ಕೇಳುವ ಮನೋಭಾವ ರೂಢಿಸಿಕೊಳ್ಳಬೇಕು. ಸಮಸ್ಯೆ ಗುರುತಿಸಿ, ಪರಿಹಾರ ಶೋಧಿಸಿ, ಪರಿಶೀಲಿಸಿ ಮತ್ತು ಪರಾಮರ್ಶಿಸುವ ಮೂಲಕ ನಮ್ಮೊಳಗಿರುವ ವಿಜ್ಞಾನಿಯನ್ನು ಜಾಗೃತಿಗೊಳಿಸಬೇಕು. ಪ್ರಾಯೋಗಿಕ ಅಥವಾ ತರ್ಕ ಬದ್ಧ ಯೋಚನೆಗಳಿಂದ ಪರಾಮರ್ಶೆ ನಡೆಯಬೇಕು. ವಿಜ್ಞಾನಿ ಎಂಬುದು ಉದ್ಯೋಗವಲ್ಲ ನಮ್ಮ ಮನಸ್ಥಿತಿ ಮತ್ತು ಆಲೋಚನೆಯಾಗಿದೆ ಎಂದು ತಿಳಿಸಿದರು. ಮಾಜಿ ಶಾಸಕ ಡಿ.ಆರ್‌. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೂಡಿ ಬಾಳುವ, ಕೂಡಿ ಬದುಕುವ ಸಿದ್ಧಾಂತ ಬಹು ದೊಡ್ಡದು. ಸೌಹಾರ್ದತೆ, ಒಗ್ಗಟ್ಟು, ಜಾತ್ಯತೀತ ಮನೋಭಾವದ ಮೂಲಕ ಹೊಸ ಭಾರತವನ್ನು ಕಟ್ಟುವ ಕಾರ್ಯ ನಡೆಯಬೇಕು. ಈ ದಿಸೆಯಲ್ಲಿ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಶಾಲೆ, ಮನೆ, ಮತ್ತು ಸಮಾಜದಿಂದ ದೊರೆಯಬೇಕು ಎಂದು ಹೇಳಿದರು.

ಜೆ.ಕೆ. ಜಮಾದಾರ ಮಾತನಾಡಿ, ಚಾರಿತ್ರ್ಯ, ಬದ್ಧತೆ, ನಂಬಿಕೆ, ಸೌಜನ್ಯ, ಧೈರ್ಯ ಈ ಗುಣಗಳು ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತವೆ ಎಂದರು. ಬಾಲವಿಕಾಸ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಶಂಕರ ಹಲಗತ್ತಿ ಮಾತನಾಡಿ, ಮಕ್ಕಳ ಹಬ್ಬ ಮಕ್ಕಳಲ್ಲಿ ಸಂತಸದ ಕಲಿಕೆಯನ್ನು ಪರಿಚಯಿಸುವುದರ ಜೊತೆಗೆ ಸಹೋದರತ್ವ, ಪರಸ್ಪರ ಪ್ರೀತಿ, ತಿಳಿವಳಿಕೆಯನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕವಿ ಸತೀಶ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಶಶಿಕಲಾ ಬಳ್ಳೊಳ್ಳಿ, ಅರ್ಚನಾ ಜೈನ್‌, ಎಚ್‌.ಬಿ. ಮೇಟಿ ಶಿಬಿರದ ಕುರಿತು ಮಾತನಾಡಿದರು. ನಿವೃತ್ತ ಉಪನಿರ್ದೇಶಕ ಎ.ಎನ್‌. ನಾಗರಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡಿ, ಎಸ್‌.ಎಸ್‌. ಕೆಳದಿಮಠ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ಪ್ರಾಚಾರ್ಯ ಮಂಗಳಾ ಬಿ.ಆರ್‌. ಆಡಳಿತಾಧಿಕಾರಿ ವೈ.ಎನ್‌. ಶೆಟ್ಟಿ, ವಜ್ರಮುನಿ ಎಸ್‌., ರೇಣುಕಾ ಗುಡಿಮನಿ, ಟಿ.ಎ. ಪ್ರಶಾಂತಬಾಬು, ಶಂಕ್ರಣ್ಣ ಸಂಕಣ್ಣವರ, ಎಸ್‌.ಎಸ್‌. ಹಿರೇಮಠ ಇದ್ದರು. ಡಿ.ಎಸ್‌. ಬಾಪುರಿ ಸ್ವಾಗತಿಸಿದರು. ಡಾ| ನಿಂಗು ಸೊಲಗಿ ನಿರೂಪಿಸಿದರು. ವಿವೇಕಾನಂದಗೌಡ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.