ನ್ಯಾಯಯುತ ಹೋರಾಟಕ್ಕೆ ರೈತ ಸಂಘ ಸಿದ್ಧ

Team Udayavani, Jul 9, 2019, 8:42 AM IST

gadaga-tdy-2..

ನರೇಗಲ್ಲ: ಮಾರನಬಸರಿ ಗ್ರಾಮದಲ್ಲಿ ನೂತನ ಉತ್ತರ ಕರ್ನಾಟಕ ರೈತ ಸಂಘ ಪುರುಷ ಹಾಗೂ ಮಹಿಳಾ ಗ್ರಾಮ ಘಟಕ ಉದ್ಘಾಟಿಸಲಾಯಿತು.

ನರೇಗಲ್ಲ: ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಾಗಬೇಕು. ರೈತರಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕು. ರೈತರ ನ್ಯಾಯಯುತ ಹೋರಾಟಕ್ಕೆ ರೈತ ಸಂಘ ಸಿದ್ಧವಿದೆ. ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಭೇದ ಭಾವ ಮಾಡಲಾಗುತ್ತಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.

ಮಾರನಬಸರಿ ಗ್ರಾಮದಲ್ಲಿ ನಡೆದ ನೂತನ ಉತ್ತರ ಕರ್ನಾಟಕ ರೈತ ಸಂಘದ ಪುರುಷ ಹಾಗೂ ಮಹಿಳಾ ಗ್ರಾಮ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಸೌಲಭ್ಯ ಒದಗಿಸಿಕೊಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ನೆರವಿಗೆ ಆದ್ಯತೆ ನೀಡಬೇಕು. ಏನೇ ಕಷ್ಟ ಬಂದರೂ ರೈತರು ಎದೆಗುಂದದೆ ಮುನ್ನಗ್ಗಬೇಕು. ಕಷ್ಟಪಟ್ಟು ದುಡಿಯುತ್ತಿದ್ದರೂ ರೈತರು ಏಳಿಗೆಯಾಗುತ್ತಿಲ್ಲ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಕಷ್ಟ ಅನುಭವಿಸಬೇಕಿದೆ. ಜನಪ್ರತಿನಿಧಿಗಳು ಮತ ಪಡೆಯುವುದಕ್ಕಾಗಿ ರೈತರನ್ನು ಬಳಸಿಕೊಂಡು ರೈತರ ಕಲ್ಯಾಣದ ಹೆಸರಿನಲ್ಲಿ ಸ್ವಾರ್ಥ ಜೀವನ ನಡೆಸುತ್ತಿದ್ದಾರೆ. ರೈತರ ಬಗ್ಗೆ ಯಾರಿಗೂ, ಯಾವ ಪಕ್ಷಗಳಿಗೂ ಕಾಳಜಿ ಇಲ್ಲ. ರೈತರನ್ನು ಯಾವ ಸರ್ಕಾರವೂ ಉದ್ಧಾರ ಮಾಡುವುದಿಲ್ಲ. ರೈತರಿಗೆ ಸರ್ಕಾರ ಬಿತ್ತನೆ ಬೀಜ, ಗೊಬ್ಬರ, ವಿದ್ಯುತ್‌ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

ಸರ್ಕಾರಗಳು ರೈತರಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದರೆ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು. ವಿದ್ಯಾವಂತರು ಸೇರಿದಂತೆ ಗ್ರಾಮೀಣ ಜನರ ವಲಸೆ ಹೆಚ್ಚಿದ್ದು, ಆಳುವ ಸರ್ಕಾರಗಳು ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಆಹಾರ ಉತ್ಪಾದನೆ ಸೇರಿದಂತೆ ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ. ಕೃಷಿ ಚಟುವಟಿಕೆಯನ್ನು ಲಾಭದಾಯಕವಾಗಿ ನಡೆಸಿಕೊಂಡು ಮುನ್ನಡೆಯಲು ಸಮಗ್ರವಾಗಿ ರೈತರ ಹಿತವನ್ನು ಕಾಪಾಡುವಂತಹ ಪ್ರತ್ಯೇಕ ಕೃಷಿ ನೀತಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಹೇಳಿದರು.

ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಲ್.ಎಸ್‌. ಗೌಡರ ಮಾತನಾಡಿ, ಆಳುವ ಸರ್ಕಾರಗಳು ರೈತರ ಕಷ್ಟ ಸುಖಗಳಲ್ಲಿ ಯಾವ ಕಾರಣಕ್ಕೂ ಭಾಗಿಯಾಗುವುದಿಲ್ಲ. ಅನ್ನವುದು ಸತ್ಯಮಾತವಾಗಿದೆ. ಮಹಾದಾಯಿ ಹಾಗೂ ಕಳಸಾ ಬಂಡೂರಿ ಸತತವಾಗಿ ಹೋರಾಟ 3 ವರ್ಷ ಮುಗಿಯುತ್ತ ಬಂದರೂ ಸರ್ಕಾರ ಈ ವರೆಗೂ ಸ್ಪಂದಿಲ್ಲ. ಮುಂಬರುವ ಚುನಾವಣೆಯಲ್ಲಿ ರಾಜಕೀಯ ವ್ಯಕ್ತಿಗಳಿಗೆ ತಕ್ಕ ಪಾಠ ಕಲಿಸಲು ಸಿದ್ಧರಾಗಬೇಕು. ರೈತರು ಬರಿ ದುಡಿಯುಲು ಇದ್ದಾರೆ ಎಂದು ಕೊಂಡಿರುವ ರಾಜಕೀಯ ಪಕ್ಷಗಳು ನಮಗೆ ಬೇಡವೇ ಬೇಡ ಎಂದು ಹೇಳಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಸೋಮಶೇಖರ ಬರಗುಂಡಿ, ಶಿವಯ್ಯ ಸರಗಣಾಚಾರಿ ವೀರಪ್ಪ ಕುಸುಗಲ್ಲ, ಜಯದೇವ ಹಿರೇಮಠ, ಮಳಿಯಪ್ಪ ಡಬಗಲ್, ಶೇಖರಗೌಡ ಪಾಟೀಲ, ಚನ್ನಯ್ಯ ಹಿರೇಮಠ, ಶರಣಪ್ಪ ಕುರಿ, ಶಿವಶರಣ ಅಬ್ಬಿಗೇರಿ, ರೈಮಾನಸಾಬ ಮೋತೆಖಾನ್‌, ಖಾದಿರಸಾಬ್‌ ಕಳಕಾಪುರ, ಶಿವಪ್ಪ ತಳವಾರ, ಯಲ್ಲಪ್ಪ ಗುತ್ತೂರ, ಶ್ರೀದೇವಿ ಬಿಂಗಿಮ ಮೌಲಾಸಾಬ್‌ ಮೋತೆಖಾನ್‌, ಶಿವಪ್ಪ ಜಾಲಿಹಾಳ, ರಮೇಶ ಕುಲಕರ್ಣಿ, ಮಂಜುನಾಥ ಬಿಂಗಿ ಇದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.