ಭಾರತ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ
Team Udayavani, Apr 26, 2021, 7:57 PM IST
ಗದಗ: ವಿದ್ಯುತ್ ಶಾರ್ಟ್ ಸರ್ಕ್ನೂಟ್‌ನಿಂದಾಗಿ ನಗರದ ಬ್ಯಾಂಕ್ ರೋಡ್‌ನಲ್ಲಿರುವ ಭಾರತ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಹೆಸ್ಕಾಂಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ ಸಂಭವಿಸಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಏಜೆನ್ಸಿಯಲ್ಲಿದ್ದ 7 ತುಂಬಿದ್ದ ಸಿಲಿಂಡರ್‌ಗಳ ಪೈಕಿ ಒಂದು ಸ್ಪೋಟಗೊಂಡಿದೆ. ಪರಿಣಾಮ ಏಜೆನ್ಸಿ ಗಾಜು ಪುಡಿಪುಡಿಯಾಗಿದ್ದು, ಬೆಂಕಿ ಹೊತ್ತಿ ಉರಿದಿದೆ.
ಈ ನಡುವೆ ಗ್ಯಾಸ್ ಏಜೆನ್ಸಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಭಯ ಭೀತರಾಗಿದ್ದ ಹಿಂಭಾಗದ ಜನರು ಮನೆಯಿಂದ ಹೊರಗೆ ಓಡಿಹೋಗಿದ್ದರು. ಸಂತೋಷ ಕಮಿತ್ಕರ್, ನಾಗರಾಜ ಕಮಿತ್ಕರ್ ಸೇರಿದಂತೆ 7 ಕುಟುಂಬಸ್ಥರು ಮನೆ ತೊರೆದು, ಮಕ್ಕಳು ಮರಿಗಳೊಂದಿಗೆ ಬಹು ದೂರ ಓಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದೆ.
ಸ್ಥಳೀಯರಾದ ಅನ್ವರ್ ಶಿರಹಟ್ಟಿ, ಉಮರ್ ಫಾರೂಕ್ ಹುಬ್ಬಳ್ಳಿ ಹಾಗೂ ಅಬ್ಬಿಗೇರಿ ಸೇರಿದಂತೆ ಮತ್ತಿತರರು ಬೆಂಕಿ ನಂದಿಸುವ ಕಾರ್ಯಕ್ಕೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಡುಗೆ ಅನಿಲ ಸಿಲಿಂಡರ್ ದರ 50 ರೂ. ಏರಿಕೆ: 1,055 ರೂ.ಗೆ ತಲುಪಿದ ಎಲ್ಪಿಜಿ ದರ!
ಉತ್ತರದಲ್ಲಿ ಮೇಘ ಸ್ಫೋಟ: ಐವರು ಸಾವು
ದ.ಕ., ಉಡುಪಿಯಲ್ಲಿ ಇಂದು ರೆಡ್ ಅಲರ್ಟ್: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ
ಉಪ್ಪಿನಂಗಡಿಯಲ್ಲಿ ನೆರೆ ಭೀತಿ: ಕುಕ್ಕೆ: ಸ್ನಾನಘಟ್ಟ ಮುಳುಗಿ 4 ದಿನ!
ಕೊಡಗು: ಮುಂದುವರಿದ ಭಾರೀ ಮಳೆ: ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಆರ್. ಅಶೋಕ್