ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಚಿಂತನೆ ಕೈಬಿಡಿ: ಸ್ವಾಮೀಜಿ

Team Udayavani, May 24, 2020, 8:45 AM IST

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಚಿಂತನೆ ಕೈಬಿಡಿ: ಸ್ವಾಮೀಜಿ

ಗದಗ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವ ಚಿಂತನೆ ಹೊಂದಿದ್ದರೆ ತಕ್ಷಣ ಹಿಂಪಡೆಯಬೇಕು. ನೈಸರ್ಗಿಕ ಸಂಪತ್ತು ನಾಶ ಮಾಡುವಂಥ ಕೃತ್ಯಕ್ಕೆ ಸರಕಾರ ಮುಂದಾದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಡಾ|ತೋಂಟದ ಸಿದ್ಧರಾಮ ಸ್ವಾಮೀಜಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರೂಪದ ಸಸ್ಯ ಕಾಶಿ, ಖನಿಜ ಸಂಪತ್ತಿನಿಂದ ಕೂಡಿರುವ ಕಪ್ಪತ್ತಗುಡ್ಡ ಈ ಭಾಗದ ಜನರ ಜೀವನಾಡಿಯಾಗಿದೆ. ಕಪ್ಪತ್ತಗುಡ್ಡದಿಂದಲೇ ಈ ಭಾಗದಲ್ಲಿ ಅಲ್ಪಸ್ವಲ್ಪ ಮಳೆ-ಬೆಳೆ ಕಾಣುತ್ತಿದ್ದೇವೆ. ಅದು ಇಲ್ಲವಾದರೆ ಈ ಭಾಗದ ಜನರಿಗೆ ಉಳಿಗಾಲವಿಲ್ಲ. ಇದಕ್ಕೆ ಬಳ್ಳಾರಿ ಜಿಲ್ಲೆಯೇ ಉತ್ತಮ ಉದಾಹರಣೆ ಎಂದರು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕಪ್ಪತ್ತಗುಡ್ಡಕ್ಕೆ ಸಂರಕ್ಷಿತ ಅರಣ್ಯ, ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಅರಣ್ಯ ಸಚಿವರಾಗಿದ್ದ ಸತೀಶ ಜಾರಕಿಹೊಳಿ ಅವರ ಕಾಳಜಿಯಿಂದ ವನ್ಯಜೀವಿಧಾಮ ಸ್ಥಾನಮಾನ ದೊರಕಿತ್ತು.  ಇದರಿಂದ ಪರಿಸರವಾದಿಗಳಲ್ಲಿ ಸಮಾಧಾನ ತಂದಿತ್ತು. ಅದಕ್ಕೂ ಮುನ್ನ ಬಿ.ಎಸ್‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕಪ್ಪತ್ತಗುಡ್ಡದಲ್ಲಿ ಫೋಸ್ಕೋ ಕಂಪನಿ ನೆಲೆಯೂರಲು ಮುಂದಾಗಿತ್ತು. ಆಗ ಲಿಂ|ಜ| ತೋಂಟದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಬೃಹತ್‌ ಹೋರಾಟ ಫೋಸ್ಕೋ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೆ ಯಡಿಯೂರಪ್ಪನವರ ಅವಧಿಯಲ್ಲೇ ಕಪ್ಪತ್ತಗುಡ್ಡದಲ್ಲಿ ಗಣಿಕಾರಿಕೆ ಆರಂಭ ಗುಮಾನಿ ಎದ್ದಿದೆ. ಈ ರೀತಿಯ ಕೃತ್ಯಗಳು ಪ್ರಕೃತಿ ಮೇಲೆ ಅತ್ಯಾಚಾರ ನಡೆಸಿದಂತೆ ಎಂದು ವಾಗ್ಧಾಳಿ ನಡೆಸಿದರು. ಕಪ್ಪತ್ತಗುಡ್ಡದಲ್ಲಿ ಗಣಿಕಾರಿಕೆಗೆ ಕೆಲ ಚುನಾಯಿತ ಪ್ರತಿನಿಧಿಗಳು, ಉದ್ಯಮಿಗಳು ಸರಕಾರದ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗುತ್ತಿದೆ. ಜನಪ್ರತಿನಿಧಿಗಳು – ಆಳುವ ಸರಕಾರಗಳು ಪ್ರಕೃತಿ ಸಂರಕ್ಷಿಸುವ ಕೆಲಸ ಮಾಡಬೇಕು. ಜನಪ್ರತಿನಿಧಿಗಳು ಮುಂದಿನ ಪೀಳಿಗೆಯ ಹಿತಕ್ಕಾಗಿ ಕೆಲಸ ಮಾಡಬೇಕೇ ಹೊರತು, ಮುಂದಿನ ಚುನಾವಣೆಗೆ ಹಣ ಮಾಡುವುದು, ಅಧಿಕಾರದ ಆಮಿಷಕ್ಕಾಗಿ ಅಲ್ಲ. ಅದು ಒಳ್ಳೆಯ ಲಕ್ಷಣವೂ ಅಲ್ಲ ಎಂದು ತರಾಟೆ ತೆಗೆದುಕೊಂಡರು.

ಕಪ್ಪತ್ತಗುಡ್ಡದ ಸಂರಕ್ಷಣೆಗೆ ಈ ಭಾಗದ ಜನರು ಕಳೆದ ಒಂದು ದಶಕದಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಕಪ್ಪತ್ತಗುಡ್ಡ ವನ್ಯಜೀವಿಧಾಮ ಆಗಿದ್ದರೂ ಗಣಿಗಾರಿಕೆಯ ಆತಂಕ ದೂರವಾಗುತ್ತಿಲ್ಲ. ಗಣಿ ಧಣಿಗಳು ಸ್ವಾರ್ಥ ಸಾಧ ನೆಗೆ ತೆರೆಮರೆಯಲ್ಲಿ ಕಸರತ್ತು ಮುಂದುವರಿಸಿದ್ದಾರೆ. ಕಪ್ಪತ್ತಗುಡ್ಡದಲ್ಲಿ ಯಾವುದೇ ಕಾರಣಕ್ಕೂ ಗಣಿಗಾರಿಕೆ ನಡೆಸಲು ಬಿಡಲ್ಲ.
ಎಸ್‌.ಆರ್‌.ಹಿರೇಮಠ, ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

naksal (2)

Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ

Pannu Singh

ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.