ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಸೋಂಕು ದೃಢ


Team Udayavani, Jun 17, 2020, 7:42 AM IST

ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಸೋಂಕು ದೃಢ

ಗದಗ: ಮಹಾರಾಷ್ಟ್ರದಿಂದ ಇತ್ತೀಚೆಗೆ ಮುಂಬೈ-ಗದಗ ರೈಲಿನಲ್ಲಿ ನಗರಕ್ಕೆ ಆಗಮಿಸಿದವರಲ್ಲಿ ಮೂವರು ಸೇರಿದಂತೆ ಒಟ್ಟು ನಾಲ್ವರಿಗೆ ಮಂಗಳವಾರ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜೂ.14ರಂದು ನಗರಕ್ಕೆ ಆಗಮಿಸಿದವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದ್ದು, ಅವರಲ್ಲಿ ನಗರದ 26 ವರ್ಷದ ಮಹಿಳೆ (ಪಿ.7386), ಜೂ.15ರಂದು ಆಗಮಿಸಿರುವ 11 ವರ್ಷದ ಬಾಲಕಿ (ಪಿ.7387) ಹಾಗೂ 3 ವರ್ಷದ ಮಗುವಿಗೆ (ಪಿ.7388) ಸೋಂಕು ದೃಢಪಟ್ಟಿದೆ. ಆದರೆ, ಸೋಂಕಿತ ಮಕ್ಕಳ ಪಾಲಕರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೊಳಪಡಿಸಿದ್ದು, ವರದಿ ನೆಗೆಟಿವ್‌ ಬಂದಿದೆ ಎನ್ನಲಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ವ್ಯಕ್ತಿಯೊಬ್ಬರಿಗೆ(ಪಿ.7389) ಕೋವಿಡ್‌ ದೃಢಪಟ್ಟಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಲು ಸೂಚಿಸಲಾಗಿತ್ತು. ಅದರಂತೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಅವರ ಗಂಟಲು ಮಾದರಿ ಸಂಗ್ರಹಿಸಿ, ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕಿತರೊಂದಿಗೆ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿರುವವರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

ಇಬ್ಬರು ಗುಣಮುಖ: ಕೋವಿಡ್ ಸೋಂಕಿನಿಂದ ಇಲ್ಲಿನ ನಿಗದಿತ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 59 ವರ್ಷದ ವೃದ್ಧ(ಪಿ-5383) ಮತ್ತು 49 ವರ್ಷದ ಮಹಿಳೆ (ಪಿ-5384) ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಮಹಾರಾಷ್ಟ್ರದಿಂದ ಹಿಂದಿರುಗಿದ್ದ ಈ ಇಬ್ಬರಿಗೂ ಜೂ.6 ರಂದು ಕೊರೊನಾ ಕಂಡು ಬಂದಿದ್ದು, ಇಲ್ಲಿನ ಕೋವಿಡ್‌ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಯಿಂದಾಗಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಜಿಮ್ಸ್‌ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ, ಶುಭ ಕೋರಿದರು. ಅಲ್ಲದೇ ಮುಂದಿನ ಎರಡು ವಾರ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು ಎಂದು ವೈದ್ಯರು ಸೂಚಿಸಿ, ಬೀಳ್ಕೊಟ್ಟರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.