ನಾಲ್ಕನೇ ಅಲೆ ಮುನ್ನೆಚ್ಚರಿಕೆಗೆ ಉದಾಸಿ ಸಲಹೆ  

ಬಡ ಜನರು ಆರೋಗ್ಯಕ್ಕಾಗಿ ಮಾಡುತ್ತಿರುವ ಖರ್ಚು ತಗ್ಗಿಸುವುದೇ ಆರೋಗ್ಯ ಮೇಳಗಳ ಗುರಿ

Team Udayavani, Apr 26, 2022, 12:28 PM IST

11

ಮುಂಡರಗಿ: ಕೋವಿಡ್‌ ನಾಲ್ಕನೇ ಅಲೆ ಕುರಿತು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಪಟ್ಟಣದ ತಾಲೂಕು ಆಸ್ಪತ್ರೆ, ಜಿಪಂ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಎರಡನೆಯ ಅಲೆಯಲ್ಲಿ ನಮ್ಮ ಹತ್ತಿರದ ಬಂಧುಗಳನ್ನು ಕಳೆದುಕೊಂಡಿದ್ದೇವೆ. ನಾಲ್ಕನೇ ಅಲೆಯ ಮುನ್ನೆಚ್ಚರಿಕೆಗಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್‌ ಬಳಸಬೇಕು ಎಂದು ಹೇಳಿದರು.

ಬಡವರಿಗೆ ಆರೋಗ್ಯದ ಯೋಜನೆಗಳ ತಲುಪಿಸುವುದೇ ಆರೋಗ್ಯ ಮೇಳದ ಉದ್ದೇಶವಾಗಿದೆ. ದೇಶದ ಬಡ ಜನರು ಆರೋಗ್ಯಕ್ಕಾಗಿ ಮಾಡುತ್ತಿರುವ ಖರ್ಚು ತಗ್ಗಿಸುವುದೇ ಆರೋಗ್ಯ ಮೇಳಗಳ ಗುರಿಯಾಗಿದೆ. ಆರೋಗ್ಯ ಮೇಳದಲ್ಲಿ ಆಯುಷ್ಮಾನ್‌ ಕಾರ್ಡ್‌ ಮತ್ತು ಆರೋಗ್ಯ ಕಾರ್ಡ್‌ ನೀಡಲಾಗುತ್ತಿದೆ. ಆರೋಗ್ಯ ಕಾರ್ಡ್‌ನಿಂದ ಆರೋಗ್ಯ ಸಮಸ್ಯೆಯ ಸಂಪೂರ್ಣ ಮಾಹಿತಿ ಅದರಲ್ಲಿರಲಿದೆ. ಜತೆಗೆ ಆರೋಗ್ಯ ಕಾರ್ಡ್‌ ಹೊಂದಿರುವ ಬಿಪಿಎಲ್‌ ಕಾರ್ಡ್‌ದಾರರಿಗೆ ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೂ ಆರೋಗ್ಯದ ಚಿಕಿತ್ಸೆಗಾಗಿ ಸರಕಾರ ಖರ್ಚು ಭರಿಸಲಿದೆ. ಗದಗ ಜಿಲ್ಲೆಯಲ್ಲಿ 16 ಸಾವಿರ ಆಯುಷ್ಮಾನ್‌ ಕಾರ್ಡ್‌ ವಿತರಿಸಬೇಕಿದೆ.ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿ ಗದಗ ಜಿಲ್ಲೆಗೆ 38 ಕೋಟಿ ರೂ. ಅನುದಾನ ಬಂದಿದ್ದು, ಅದರಲ್ಲಿ 28.15 ಕೋಟಿ ರೂ.ಗಳ ಸದ್ಬಳಕೆ ಮಾಡಲಾಗಿದೆ. 20-23 ಬಜೆಟ್‌ನಲ್ಲಿ 83 ಸಾವಿರ ಕೋಟಿ ರೂ.ಗಳನ್ನು ಆರೋಗ್ಯಕ್ಕಾಗಿ ಬಳಸಲಾಗುತ್ತಿದೆ ಎಂದರು.

ಪೋಷಣಾ ಅಭಿಯಾನದಲ್ಲಿ ಮಕ್ಕಳ ಕ್ಯಾಂಪ್‌ ಆಯೋಜಿಸಿ, ಮಕ್ಕಳ ತೂಕವನ್ನು ನೋಡಿ ಪೋಷಕಾಂಶ ವಿತರಿಸಿ, ಆರೋಗ್ಯವಂತ ಮಕ್ಕಳಿಗೆ ಬಹುಮಾನ ವಿತರಿಸಬೇಕು ಎಂದು ಸಿಡಿಪಿಒ ಅವರನ್ನು ವೇದಿಕೆಗೆ ಕರೆಯಿಸಿ ಸೂಚಿಸಿದರು.

ಶ್ರೀ ಜ.ಅನ್ನದಾನೀಶ್ವರ ಮಹಾಶಿವಯೋಗಿಗಳು ಸಾನಿಧ್ಯ ವಹಿಸಿ ಮಾತನಾಡಿ, ಆರೋಗ್ಯವೇ ಭಾಗ್ಯವಾಗಿದ್ದು, ಆರೋಗ್ಯ ಇದ್ದರೇ ಎಲ್ಲ ಭಾಗ್ಯಗಳು ಇದ್ದಂತೆ. ಆದ್ದರಿಂದ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದರು.

ಶಾಸಕ ರಾಮಣ್ಣ ಲಮಾಣಿ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್‌ ಆಶಪ್ಪ ಪೂಜಾರ, ತಾಪಂ ಇಒ ಎಸ್‌. ಎಸ್‌.ಕಲ್ಮನಿ, ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಮುಖಂಡರಾದ ಹೇಮಗಿರೀಶ ಹಾವಿನಾಳ, ಕರಬಸಪ್ಪ ಹಂಚಿನಾಳ, ಭೀಮಸಿಂಗ್‌ ರಾಠೊಡ್‌, ಡಾ|ಕುಮಾರಸ್ವಾಮಿ ಹಿರೇಮಠ, ಬಸವರಾಜ ಬಿಳಿಮಗ್ಗದ ಮತ್ತಿತರರು ಇದ್ದರು. ಡಾ|ಜಿ.ಎಂ.ಗೊಜನೂರು ಪ್ರಾಸ್ತಾವಿಕ ಮಾತನಾಡಿದರು. ಡಾ|ರಾಜೇಶ ಸ್ವಾಗತಿಸಿದರು. ಮಂಜುಳಾ ಸಜ್ಜನರ ನಿರೂಪಿಸಿದರು. ಡಾ|ಕೀರ್ತಿಹಾಸ ವಂದಿಸಿದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.