ಗದಗ: ಬೆಳ್ಳಂಬೆಳಗ್ಗೆ ಪಿಡಿ ಎಸ್.ಎನ್ ರುದ್ರೇಶ್ ನಿವಾಸದ ಮೇಲೆ ಎಸಿಬಿ ದಾಳಿ
Team Udayavani, Oct 22, 2020, 10:49 AM IST
ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ಮನೆ, ಕಚೇರಿ ಸೇರಿದಂತೆ ಮೂರು ಕಡೆ ಗುರುವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗ್ಗೆ 5 ಗಂಟೆ ಸುಮಾರಿಗೆ ನಗರದ ನೌಕರರ ಭವನ ಹಿಂಭಾಗದ ಕಂದಾಯ ಇಲಾಖೆ ಅಧಿಕಾರಿಗಳ ವಸತಿ ಬಡಾವಣೆಯಲ್ಲಿರುವ ಮನೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಮನೆ ಹಾಗೂ ಜಿಲ್ಲಾಡಳಿತ ಭವನದ ಕಚೇರಿಗೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.
ಮನೆಯ ಮೇಲ್ಛಾವಣಿ, ಗಾರ್ಡನ್, ವಾಹನ ಪಾರ್ಕಿಂಗ್ ಜಾಗವನ್ನೂ ಬಿಡದೆ ಶೋಧ ನಡೆಸುತ್ತಿದ್ದಾರೆ. ಬೆಳಗಾವಿ ಎಸಿಬಿ ಡಿಎಸ್ಪಿ ಮಹಾಂತೇಶ್ವರ ಸಿಪಿಐ ಧರ್ನಾಯಕ, ಸಂಜೀವಕುಮಾರ ನೇತೃತ್ವದಲ್ಲಿ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೋವಿಡ್-19 ಲಸಿಕೆ: ಆಸ್ಟ್ರಾಜೆನಾಕ ಔಷಧಿ ಪ್ರಯೋಗದ ವೇಳೆ ಸ್ವಯಂಸೇವಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ