ರೈತ ಸುಖಿ ಇದ್ದರೆ ದೇಶ ಸುಖೀ: ಸಿದ್ದರಾಮ ಶ್ರೀ

Team Udayavani, Oct 20, 2018, 4:23 PM IST

19-october-19.gif

ಶಿರಹಟ್ಟಿ: ಪಟ್ಟಣದಲ್ಲಿ ದಸರಾ ಆಚರಣೆ ಅಂಗವಾಗಿ ಬೃಹತ್‌ ಮೆರವಣಿಗೆ ನಡೆಸಲಾಯಿತು.ಪಟ್ಟಣದಲ್ಲಿ ಶ್ರೀ ಮಠದಿಂದ ಶ್ರೀಗಳು ಮೆರವಣಿಗೆ ಮೂಲಕ ಗದಗ ರೋಡ್‌ಗೆ ಹೊಂದಿರುವ ಕೆಳಗೇರಿಯಲ್ಲಿರುವ ಗರಿಬನ್‌ನವಾಜ ದರ್ಗಾಕ್ಕೆ ಬಂದು ಜ.ಫ. ಸಿದ್ದರಾಮ ಸ್ವಾಮಿಗಳು ಬನ್ನಿ ಮಂಟಪಕ್ಕೆ ಬಂದು ಹಿಂದೂ-ಮುಸ್ಲಿಂ ಸಾಂಪ್ರದಾಯಿಕ ಆಚರಣೆ ಆಚರಿಸಿ, ಬನ್ನಿ ಮುಡಿಯುವುದರೊಂದಿಗೆ ಬನ್ನಿ ವಿನಿಮಯಕ್ಕೆ ಚಾಲನೆ ನೀಡಿದರು.

ಈ ಪದ್ಧತಿ ಹಿಂದಿನಿಂದ ಬಂದ ಸಾಂಪ್ರದಾಯಿಕ ಆಚರಣೆಯ ವೈಶಿಷ್ಟ್ಯವಾಗಿದೆ. ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಮೆರವಣಿಗೆಯಲ್ಲಿ ಆನೆಯ ಸ್ವಾಗತ, ನಗಾರಿಯ ನಿನಾದ, ಜಾಂಜ್‌ ಮೇಳ, ಡೊಳ್ಳು ಕುಣಿತ, ಹೆಜ್ಜೆ ಮೇಳ, ವಾದ್ಯ ಮೇಳ ಜತೆಗೆ ಸಾರ್ವಜನಿಕರು ಸಂಭ್ರಮಿಸುವುದಕ್ಕಾಗಿ ವಿಧ ವಿಧವಾದ ಪಟಾಕಿ ಸಿಡಿಸುವುದು. ಮುಂತಾದವುಗಳ ಮಧ್ಯೆ ಫಕ್ಕೀರ ಸಿದ್ದರಾಮ ಸ್ವಾಮಿಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.

ಹಬ್ಬದ ವೈಶಿಷ್ಟ್ಯತೆ ಎಂದರೆ ಪಟ್ಟಣದಲ್ಲಿ ಶ್ರೀಗಳು ಬನ್ನಿ ಮುಡಿಯುವವರೆಗೂ ಯಾರೊಬ್ಬರೂ ಬನ್ನಿ ವಿನಿಮಯ ಮಾಡಿಕೊಳ್ಳುವುದಿಲ್ಲ. ಈ ಸಂಪ್ರದಾಯಕ್ಕೆ ಅನೇಕ ದಶಕಗಳ ಇತಿಹಾಸವೇ ಇದೆ. ಜ.ಫ.ಸಿದ್ದರಾಮ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಸಂಪೂರ್ಣವಾಗಿ ಮುಂಗಾರು ಕೈ ಕೊಟ್ಟು ರೈತರನ್ನು ಸಂಕಷ್ಟಕ್ಕೆ ನೂಕಿದೆ. ಹಿಂಗಾರು ಮಳೆ ತುಸು ಆಶಾ ಭಾವನೆ ಮೂಡಿಸಿದೆ. ನಾಡಿನಾದ್ಯಂತ ಮಳೆ ಬರುತ್ತಿದ್ದು, ಹಿಂಗಾರು ಬೆಳೆ ಬೆಳೆಯಲು ಅನುಕೂಲವಾಗಿದೆ. ರೈತನೇ ದೇಶದ ಬೆನ್ನೆಲೆಬು ಮತ್ತು ದೇಶದ ಶಕ್ತಿ. ರೈತರು ಸುಖವಾಗಿದ್ದರೆ ದೇಶ ಸುಖಿಯಾಗಿರುತ್ತದೆ. ಇಂತಹ ರೈತರಿಗೆ ದಸರಾ ಹಬ್ಬ ಮಳೆ ಬರುವ ಮೂಲಕ ಸಂತೋಷವನ್ನುಂಟು ಮಾಡಿದೆ. ದೇಶದಲ್ಲಿ ಚೆನ್ನಾಗಿ ಮಳೆ ಆಗಿ ಉತ್ತಮ ಫಸಲು ಬೆಳೆಯುವಂತಾಗಲಿ ಎಂದರು.

ಶ್ರೀಗಳು ಗರಿಬನ್‌ ನವಾಜ್‌ ದರ್ಗಾದ ಬಳಿ ಬನ್ನಿ ಮುಡಿದ ನಂತರ ಪಟ್ಟಣದಲ್ಲಿ ಪ್ರತಿಯೊಬ್ಬರೂ ಬನ್ನಿ ವಿನಿಮಯ ಮಾಡಿಕೊಂಡು ಬಂಗಾರದಂತೆ ಬಾಳ್ಳೋಣ ಎಂಬ ಶುಭಾಶಯಗಳನ್ನು ಕೋರುತ್ತಾರೆ. ದರ್ಗಾದಿಂದ ಹೊರಟ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಮಠಕ್ಕೆ ಬಂದು ತಲುಪಿತು. ಸಿ.ಸಿ.ನೂರಶೆಟ್ಟರ, ಶಿವರಾಯಗೌಡ (ಅಜ್ಜು) ಪಾಟೀಲ, ಬುಡನಶ್ಯಾ ಮಕಾನದಾರ, ಮುತ್ತಣ್ಣ ಮಜ್ಜಗಿ, ದೀಪು ಕಪ್ಪತ್ತನವರ, ಉಮೇಶ ತೇಲಿ, ಜಗದೀಶ ತೇಲಿ, ಬಸವಣ್ಣೆಪ್ಪ ತುಳಿ, ಬಿ.ಎಸ್‌ .ಹಿರೇಮಠ, ಪರಮೇಶ ಪರಬ ಇದ್ದರು. 

ಶಿರಹಟ್ಟಿ: ಪಟ್ಟಣದ ಮರಾಠಾ ಗಲ್ಲಿಯ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ನಿಮಿತ್ತ 10 ದಿನಗಳ ಕಾಲ ಪುರಾಣ ಕಾರ್ಯಕ್ರಮ ಏರ್ಪಡಿಲಾಗಿತ್ತು. ಕಾರಣ ಇಂದು ವಿಜಯದಶಮಿ ದಿನ ಪುರಾಣ ಮಂಗಲವಾಗಿದ್ದರಿಂದ ಶ್ರೀದೇವಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಪಟ್ಟಣದ ಗೌಡರಾದ ವೈ.ಎಸ್‌. ಪಾಟೀಲ ಮನೆಯಲ್ಲಿನ ಬನ್ನಿಗಿಡಕ್ಕೆ ಪೂಜೆ ಸಲ್ಲಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಭಕ್ತರಿಗೆ ದರ್ಶನ ಭಾಗ್ಯ ಮತ್ತು ಬನ್ನಿ ವಿನಿಮಯ ಮಾಡಿಕೊಳ್ಳಲಾಯಿತು. ಕೆ.ಎ.ಬಳಿಗೇರ, ಪರಮೇಶ ಪರಬ, ಪವಾರ ಸರ್‌, ಮಹೇಶ ಪರಬತ್‌, ರಾಜಣ್ಣ ಕದಂ, ಬಸವರಾಜ ತೋಡೇಕರ, ರಾಮಚಂದ್ರ ಪರಬತ್‌, ನಾಗರಾಜ ಲಕ್ಕುಂಡಿ, ಪ್ರಭಾಕರ ಗಾಯಕವಾಡ, ವಿಠಲ್‌ ಬಿಡವೇ, ತಾನಾಜಿ ಪರಬತ್‌, ಅನಿಲ ಮಾನೆ, ಸಂತೋಷ ತೋಡೆಕರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.