ಗದಗ: ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆಯಾಚಿಸಲಿ‌-ರವಿಂದ್ರನಾಥ

ಕಾಂಗ್ರೆಸ್‌ನವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ

Team Udayavani, Feb 15, 2024, 5:10 PM IST

ಗದಗ: ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆಯಾಚಿಸಲಿ‌-ರವಿಂದ್ರನಾಥ

ಉದಯವಾಣಿ ಸಮಾಚಾರ
ಗದಗ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಬಹುಮತ ಬರುವುದಿಲ್ಲ ಎಂಬ ಕಾರಣಕ್ಕೆ ರಾಹುಲ್‌ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಾತಿ ನಿಂದನೆ ಆರೋಪ ಮಾಡಿದ್ದು ಖಂಡನೀಯ. ರಾಹುಲ್‌ ಗಾಂಧಿ ಅವರು ದೇಶದ ಜನರ ಕ್ಷಮೆಯಾಚಿಸಬೇಕೆಂದು ರಾಜ್ಯ ಒಬಿಸಿ ಕಾರ್ಯದರ್ಶಿ ರವಿಂದ್ರನಾಥ ದಂಡಿನ ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ನರೇಂದ್ರ ಮೋದಿಯವರು ಯಾರಿಗೂ ಅನ್ಯಾಯ ಮಾಡಿಲ್ಲ. ಅವರು ಯಾವುದೇ ಜಾತಿ, ಧರ್ಮ, ಬುಡಕಟ್ಟು ಜನಾಂಗವನ್ನಾಗಲಿ ನಿಂದಿಸಿ ರಾಜಕೀಯ ಮಾಡುವಂತ ವ್ಯಕ್ತಿಯಲ್ಲ. ಭಾರತದ 140 ಕೋಟಿ ಜನರ ಪ್ರತಿನಿ ಧಿಯಾಗಿ, ಪ್ರಧಾನ ಸೇವಕರಾಗಿ ಎಲ್ಲ ವರ್ಗದ ಜನರ ಸರ್ವತೋಮುಖ ಬೆಳವಣಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಂದ ದೇಶ ಉದ್ಧಾರವಾಗಿದೆಯೇ ಹೊರತು ಹಾನಿಯಾಗಿಲ್ಲ. ಭಾರತ ವಿಶ್ವಗುರುವಾಗಿ, ಆರ್ಥಿಕವಾಗಿ ಐದನೇ ಶಕ್ತಿಯಾಗಿ ಜಗತ್ತಿನಲ್ಲಿ ಹೊರ ಹೊಮ್ಮಿದೆ. ಹೀಗಿದ್ದಾಗ್ಯೂ ಕಾಂಗ್ರೆಸ್‌ನವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

1994ರಲ್ಲಿ ಕಾಂಗ್ರೆಸ್‌ ಸರ್ಕಾರ ತೇಲಿ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ. ಈ ಬಗ್ಗೆ ಅಂದಿನ ಕಾಂಗ್ರೆಸ್‌ ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ನಂತರ 1999ರಲ್ಲಿ ತೇಲಿ ಸಮಾಜವನ್ನು ಕೇಂದ್ರ ಸರ್ಕಾರ ಓಬಿಸಿ ಪಟ್ಟಿಯಲ್ಲಿ ಸೇರಿಸಿದೆ. ತೇಲಿ ಸಮಾಜವೆಂದರೆ ಕರ್ನಾಟಕದಲ್ಲಿ ಹಿಂದುಳಿದ ಗಾಣಿಗ ಸಮಾಜ. ಪ್ರಸ್ತುತ ತೇಲಿ ಸಮಾಜವನ್ನು ರಾಹುಲ್‌ ಗಾಂಧಿ ಯವರು ಮೋದಿಯವರು ಹಿಂದುಳಿದ ಜಾತಿಯವರಲ್ಲ ತಾವೇ ಸೇರಿಸಿಕೊಂಡಿದ್ದಾರೆಂದು ಆರೋಪ ಮಾಡಿದ್ದು, ಅವರ ಸಂಕುಚಿತ ಮನೋಭಾವವನ್ನು ಎತ್ತಿ ತೋರಿಸುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ವರ್ಗದವರನ್ನು ಒಗ್ಗೂಡಿಸಿಕೊಂಡು ದೇಶವನ್ನು ವಿಶ್ವಾದ್ಯಂತ ಕೊಂಡಾಡುವ ಹಾಗೆ ಮಾಡಿದ್ದಾರೆ. ಅಲ್ಲದೇ, ಹಿಂದುಳಿದ ವರ್ಗಗಳ ಆಯೋಗಕ್ಕೆ ಶಾಶ್ವತ ಸಂವಿಧಾನಿಕ ಸ್ಥಾನಮಾನ ಕೊಟ್ಟಿದ್ದಾರೆ. ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ ರವಿಂದ್ರನಾಥ ದಂಡಿನ ಹೇಳಿದರು.

ಪ್ರಕಾಶ ಬಾಕಳೆ, ಒಬಿಸಿ ಜಿಲ್ಲಾಧ್ಯಕ್ಷ ಅಶೋಕ ಹೆಬ್ಬಳ್ಳಿ, ಗದಗ ಗ್ರಾಮೀಣ ಮಂಡಲದ ಒಬಿಸಿ ಮೋರ್ಚಾದ ಅಧ್ಯಕ್ಷ ರವಿ ವಗ್ಗನವರ, ಯುವ ಮುಖಂಡ ಸುರೇಶ ಹರಳಪ್ಪನವರ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.