30 ವಿಶೇಷ ಜಿಲ್ಲೆಗಳ ಪಟ್ಟಿಯಲ್ಲಿ ಗದಗ


Team Udayavani, Jan 6, 2019, 9:51 AM IST

6-january-17.jpg

ಗದಗ: ‘ವಿಶ್ವ ಶೌಚಾಲಯ ದಿನಾಚರಣೆ-2018’ರ ಭಾಗವಾಗಿ ‘ಸ್ವಚ್ಛ ಭಾರತ ಮಿಷನ್‌’ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಟಾಪ್‌-12 ಜಲ್ಲೆಗಳ ಹೊರತಾಗಿ ಮೂವತ್ತು ವಿಶೇಷ ಜಿಲ್ಲೆಗಳ ಪಟ್ಟಿಗೆ ಗದಗ ಜಿಲ್ಲೆ ಆಯ್ಕೆಯಾಗಿದೆ. ಉತ್ತರ ಕರ್ನಾಟಕದ ಮೊದಲ ಬಯಲು ಶೌಚ ಮುಕ್ತ ಜಿಲ್ಲೆಯೆಂಬ ಹೆಗ್ಗಳಿಕೆ ಪಡೆದಿರುವ ಗದಗ, ಶೌಚಾಲಯ ಅಗತ್ಯತೆ ಬಗ್ಗೆ ಪರಿಣಾಮಕಾರಿಯಾಗಿ ಜನಜಾಗೃತಿ ಮೂಡಿಸಿದ್ದಕ್ಕೆ ಇದೀಗ ರಾಷ್ಟ್ರಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ.

‘ಸ್ವಚ್ಛ ಭಾರತ ಮಿಷನ್‌ ಗ್ರಾಮೀಣ ಯೋಜನೆ ಅನುಷ್ಠಾನಕ್ಕೆ ಬಂದು ಐದು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕುಡಿಯುವ ನೀರು ಮುತ್ತು ನೈರ್ಮಲ್ಯ ಮಂತ್ರಾಲಯದಿಂದ 2018ರ ನ. 19ರಿಂದ 10 ದಿನಗಳ ಕಾಲ ದೇಶದ ಎಲ್ಲ ಜಿಲ್ಲೆಗಳಿಗೆ ‘ಸ್ವಚ್ಛ ಭಾರತ ಮಿಷನ್‌-ವಿಶ್ವ ಶೌಚಾಲಯ ದಿನಾಚರಣೆ-2018’ರ ಸ್ಪರ್ಧೆ ಆಯೋಜಿಸಿತ್ತು. ಗ್ರಾಮೀಣ ಭಾಗದಲ್ಲಿ ಶುಚಿತ್ವ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಜನಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

2012ರಲ್ಲಿ ನಡೆದ ಸಮೀಕ್ಷೆಯಂತೆ ಜಿಲ್ಲೆಯ 327 ಗ್ರಾಮಗಳಲ್ಲಿ ನಿರ್ಮಿಸಬೇಕಿದ್ದ ಒಟ್ಟು 1,35,434 ಶೌಚಾಲಯ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದ ಗದಗ ಜಿಲ್ಲೆ, ಉತ್ತರ ಕರ್ನಾಟಕದ ಮೊದಲ ಬಯಲು ಬಹಿರ್ದೆಸೆ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅದಕ್ಕೂ ಮುನ್ನ ನರಗುಂದ ತಾಲೂಕನ್ನು ರಾಜ್ಯದ ಮೊದಲ ಬಯಲು ಶೌಚಮುಕ್ತ ತಾಲೂಕು ಎಂದು 2017ರ ಸೆ. 26ರಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಘೋಷಿಸಿದ್ದರು. ಹೀಗಾಗಿ ಅದೇ ಹುರುಪಿನಲ್ಲಿದ್ದ ಜಿಪಂ ಅಧಿಕಾರಿಗಳು ವಿಶ್ವ ಶೌಚಾಲಯ ದಿನಾಚರಣೆ ಹತ್ತು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರ ಗಮನ ಸೆಳೆದಿದ್ದರು.

ಪ್ರಶಸ್ತಿಗೆ ಆಯ್ಕೆ ವಿಧಾನ: ಗ್ರಾಮ ಮಟ್ಟದಲ್ಲಿ ಧಾರ್ಮಿಕ ಮುಖಂಡರು, ಜನಪ್ರನಿಧಿಗಳಿಂದ ಮನೆ ಮನೆ ಭೇಟಿ, ಮೇಣದ ಬತ್ತಿ ಜಾಥಾ ಮತ್ತು ಸ್ವಚ್ಛತಾ ರಥ, ಸಾಕ್ಷ್ಯಚಿತ್ರ ಪ್ರದರ್ಶನ, ಸಾಧಕರಿಗೆ ಸನ್ಮಾನ, ಗ್ರಾಮಗಳಲ್ಲಿ ಶಾಲಾ ಮಕ್ಕಳಿಂದ ಸೈಕಲ್‌ ಜಾಥಾ, ಶಾಲಾ ಮಕ್ಕಳಿಗೆ ಬಯಲು ಶೌಚಾಲಯ ಅಪಾಯಗಳು, ಬಯಲು ಮುಕ್ತ ಶೌಚಾಲಯ ಲಾಭಗಳ ಕುರಿತು ಪ್ರಬಂಧ, ಭಾಷಣ, ಮಹಿಳಾ ಸ್ವಸಹಾಯ ಸಂಘಗಳು, ಅಂಗನವಾಡಿ ಮತ್ತು ಆಶಾ ಕಾರ್ಯ ಕರ್ತೆಯರ ಮೂಲಕ ಜಾಗೃತಿ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅವುಗಳ ಆಯ್ದ ಚಿತ್ರ ಮತ್ತು ಮಾಹಿತಿಯೊಂದಿಗೆ ಕೇಂದ್ರ ಸರಕಾರದ ಸ್ವಚ್ಛ ಭಾರತ ಮಿಷನ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಅದರಂತೆ ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 412 ಜಿಲ್ಲೆಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

ಈ ಕುರಿತು ಮೌಲ್ಯಮಾಪನ ನಡೆಸಿದ ಸ್ವಚ್ಛ ಭಾರತ ಅಭಿಯಾನದ ಅಧಿಕಾರಿಗಳು, ಅಗ್ರ ಶ್ರೇಯಾಂಕಿತ-12 ಜಿಲ್ಲೆಗಳಲ್ಲಿ ರಾಜ್ಯ ಕೊಡಗು 7ನೇ ಸ್ಥಾನ ಪಡೆದಿದೆ. ಅದರೊಂದಿಗೆ 13ನೇ ಸ್ಥಾನಕ್ಕೆ ಅರ್ಹತೆ ಪಡೆಯಬಹುದಾದಂಥ ಒಟ್ಟು 30 ಜಿಲ್ಲೆಗಳನ್ನು ವಿಶೇಷ ಜಿಲ್ಲೆಗಳೆಂದು ಪರಿಗಣಿಸಲಾಗಿದೆ. ಅದರಲ್ಲಿ ಗದಗ ಜಿಲ್ಲೆ ಆಯ್ಕೆಯಾಗಿರುವುದು ಸಂತಸದ ಸಂಗತಿ.

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಸ್ಥಾನ ಲಭಿಸಿರುವುದು ಖುಷಿ ತಂದಿದೆ. ಬಯಲು ಮುಕ್ತ ಶೌಚಾಲಯ ಕುರಿತು ಇನ್ನೂ ಹೆಚ್ಚಿನ ಜನಜಾಗೃತಿ ಮೂಡಿಸಬೇಕಿದೆ.
·ಮಂಜುನಾಥ ಚವ್ಹಾಣ,
ಜಿಪಂ ಸಿಇಒ

•ವಿಶೇಷ ವರದಿ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.