Gadag: ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವ ಎಚ್.ಕೆ. ಪಾಟೀಲ

Team Udayavani, Aug 8, 2023, 1:20 PM IST

Gadaga: Minister HK Patil launched the Gruha Jyoti Yojana

ಗದಗ: ಜಗತ್ತಿನಲ್ಲಿ ಬಡವರನ್ನು ಮೇಲ್ಮಟ್ಟಕ್ಕೇರಿಸುವ ಮೂಲಕ ಕ್ರಾಂತಿಕಾರಕ ಕೆಲಸ ಮಾಡಿದ ಹೆಗ್ಗಳಿಕೆ ನಮ್ಮ ಕರ್ನಾಟಕ ರಾಜ್ಯದಲ್ಲಿ ನಡೆದಿದೆ. ಕಾಂಗ್ರೆಸ್ ಸರಕಾರ ವರ್ಷದಲ್ಲಿ ಬಡ ಕುಟುಂಬವೊಂದಕ್ಕೆ 60 ಸಾವಿರ ಹಣ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ನಗರದ ಪರಿಸರ ಲೇಔಟ್ ನಲ್ಲಿರುವ ಭಾರತ ರತ್ನ ಪಂಡಿತ ಭೀಮಸೇನ ಜೋಶಿ ರಂಗಮಂದಿರದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರ ಬದುಕಿನ ಗುಣಮಟ್ಟ ಎತ್ತರಿಸಲಾಗುತ್ತಿದೆ. ನಿಮ್ಮ ಖುಷಿಯೊಂದಿಗೆ ನಾವು ಖುಷಿಯಾಗಿದ್ದೇವೆ. ಆದರೆ, ವಿರೋಧ ಪಕ್ಷಗಳ ನಾಯಕರಿಂದ ಟೀಕೆಗಳನ್ನು ಕೇಳುತ್ತಿದ್ದೀರಿ. ನಮ್ಮ ನೀತಿ, ತತ್ವ ಹಾಗೂ ಸರಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅವರು ಅರ್ಥೈಸಿಕೊಳ್ಳಬೇಕಿದೆ. ಬಡವರ ಕಲ್ಯಾಣ ಕೆಲಸಗಳಿಗೆ ನಮ್ಮ ಸರಕಾರ ಎಂದಿಗೂ ಬದ್ಧವಾಗಿದೆ ಎಂದು ಹೇಳಿದರು.

ಸತ್ಯ ಬಹಳ ಕಹಿ ಇರುತ್ತದೆ. ಸತ್ಯ ತಿಳಿಸಲು ಬಹಳಷ್ಟು ಜನ ಹಿಂದೆ ಮುಂದೆ  ನೋಡುತ್ತಾರೆ. ನಮ್ಮ ಹೆಸ್ಕಾಂ ವಿಭಾಗದ 7 ಜಿಲ್ಲೆಗಳ 30 ಲಕ್ಷ ಮನೆಗಳಿಗೆ 1600 ಕೋಟಿ ರೂ. ವಿದ್ಯುತ್ ನೀಡಲಾಗುತ್ತಿದೆ. 10 ಸಾವಿರ ಕೋಟಿ ರೂ. ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ವಿದ್ಯುತ್ ಖರೀದಿಯ ತಪ್ಪು ನೀತಿಯಿಂದಾಗಿ 3000 ಕೋಟಿ ರೂ. ಅನವಶ್ಯಕವಾಗಿ ನಷ್ಟ ಉಂಟಾಗಿದೆ. ಮುಂದಿನ ವರ್ಷದಿಂದ ಅನವಶ್ಯಕವಾಗಿ ನಷ್ಟ ಉಂಟಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:Strong Storms: ಚಂಡಮಾರುತದ ಮುನ್ಸೂಚನೆ… ಅಮೇರಿಕಾದಲ್ಲಿ 2,600 ವಿಮಾನಗಳ ಹಾರಾಟ ರದ್ದು

ಗದಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ 88 ಲಕ್ಷ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಜೋಳದ ಜೊತೆಗೆ ಪ್ರತಿವ್ಯಕ್ತಿಗೆ 170 ರೂ. ನಂತೆ ಜಿಲ್ಲೆಯಲ್ಲಿ 10 ಕೋಟಿ ರೂ. ಹಣ ವಿತರಿಸಲಾಗಿದೆ. ಗೃಹಲಕ್ಣ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಶೇ. 90ರಷ್ಟು ನೋಂದಣಿಯಾಗಿದ್ದು, ಆ. 17ರಂದು ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಯುವನಿಧಿ ಕಾರ್ಯಕ್ರಮ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ವಿವರಿಸಿದರು.

ಜಿಲ್ಲೆಯಲ್ಲಿ ಶೇ. 90ರಷ್ಟು, ಗದಗ ವಿಧಾನಸಭಾ ಕ್ಷೇತ್ರದ ಗದಗ-ಬೆಟಗೇರಿ ಶಹರದಲ್ಲಿ ಶೇ. 80, ಗ್ರಾಮೀಣ ಭಾಗದಲ್ಲಿ ಸೇ. 91ರಷ್ಟು ನೋಂದಣಿಯಾಗಿದ್ದು, ಇದೇ ತಿಂಗಳಿನಿಂದ ಗೃಹಜ್ಯೋತಿಯ ಲಾಭ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆ ಗದಗ ಜಿಲ್ಲೆಯಲ್ಲಿ ವಿದ್ಯುಕ್ತವಾಗಿ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧೀಕ್ಷಕ ಇಂಜಿನಿಯರ್ ಎಸ್.ಎಸ್. ಜಂಗಿನ ಮಾತನಾಡಿ, ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯೊಳಗೆ ವಿಲೀನಗೊಳಿಸಿ ಮಾಸಿಕ 53 ಯುನಿಟ್ ವಿದ್ಯುತ್ ಹಾಗೂ ಅಮೃತ ಜ್ಯೋತಿ ಯೋಜನೆಯಡಿ 75 ಯುನಿಟ್ ಉಚಿತ ವಿದ್ಯುತ್ ನೀಡಲಗುತ್ತಿದೆ ಎಂದು ಹೇಳಿದರು.

ಹೆಸ್ಕಾಂ ಎಂಡಿ ಮೊಹಮ್ಮದ್ ರೋಷನ್, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ನಗರಸಭೆ ಸದಸ್ಯ ಕೃಷ್ಣಾ ಪರಾಪೂರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಸ್ಕಾಂ ಗದಗ ವಿಭಾಗದ ಮುಖ್ಯ ಇಂಜಿನಿಯರ್ ರಮೇಶ ಬೆಂಡಿಗೇರಿ ಸೇರಿ ಅನೇಕರು ಇದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.