ಗಜೇಂದ್ರಗಡ:ವಾಣಿಜ್ಯ ಬೆಳೆ ಬೆನ್ನು ಹತ್ತಿದ ರೈತರು;ಅನ್ನ ದಾತನಿಗೆ ಮೇವು-ಹೊಟ್ಟಿನದ್ದೇ ಚಿಂತೆ


Team Udayavani, Mar 6, 2024, 2:53 PM IST

ಗಜೇಂದ್ರಗಡ:ವಾಣಿಜ್ಯ ಬೆಳೆ ಬೆನ್ನು ಹತ್ತಿದ ರೈತರು; ಅನ್ನ ದಾತನಿಗೆ ಮೇವು-ಹೊಟ್ಟಿನದ್ದೇ ಚಿಂತೆ

ಉದಯವಾಣಿ ಸಮಾಚಾರ
ಗಜೇಂದ್ರಗಡ: ತಾಲೂಕಿನಾದ್ಯಂತ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಬಹುದೆಂಬ ಉದ್ದೇಶದಿಂದ ರೈತರು ಹೊಟ್ಟು-ಮೇವು ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ.

ಬಹುತೇಕ ಅನ್ನದಾತರು ಮಳೆಯಾಶ್ರಿತ ಭೂಮಿ ಹೊಂದಿದ್ದು, ಮಳೆಯಾಗುವಿಕೆಯ ಪ್ರಮಾಣದ ಮೇಲೆ ತಾವು ಪಾರಂಪರಿಕವಾಗಿ ಬೆಳೆಯುತ್ತಿರುವ ಶೇಂಗಾ, ಜೋಳ, ಬದಲಾಗಿ ಉಳ್ಳಾಗಡ್ಡಿ, ಮೆಣಸಿನಕಾಯಿ, ಹತ್ತಿ, ಗೋವಿನಜೋಳದಂತಹ
ವಾಣಿಜ್ಯ ಬೆಳೆ ಬೆಳೆಯಲು ಆರಂಭಿಸಿದ್ದಾರೆ. ಪರಿಣಾಮ ಜಾನುವಾರುಗಳ ಮುಖ್ಯ ಆಹಾರ ಶೇಂಗಾ ಹೊಟ್ಟು, ಜೋಳದ ಮೇವಿನ
ಕೊರತೆಯಾಗಿದೆ. ಇದರಿಂದ ಹೊಟ್ಟು-ಮೇವಿನ ಬೆಲೆ ಹೆಚ್ಚಾಗಿರುವುದು ರೈತ ಸಮೂಹವನ್ನು ಕಂಗೆಡಿಸಿದೆ.

ಕಳೆದ ವರ್ಷ ಶೇಂಗಾ ಹೊಟ್ಟು ಟ್ರಾಕ್ಟರ್‌ ವೊಂದಕ್ಕೆ 9 ಸಾವಿರ ಇತ್ತು. ಆದರೆ ಈ ವರ್ಷ 11 ರಿಂದ 12 ಸಾವಿರಕ್ಕೇರಿದೆ. ಅದರಂತೆ ಜೋಳದ ಮೇವು ಟ್ಯಾಕ್ಟರ್‌ವೊಂದಕ್ಕೆ 2500 ರಿಂದ 3 ಸಾವಿರ ಇತ್ತು. ಅದು ಕೂಡ 5 ಸಾವಿರಕ್ಕೇರಿದೆ. ಇನ್ನು ಹುರಳಿ ಹೊಟ್ಟು 8 ರಿಂದ 10 ಸಾವಿರವರೆಗೆ ಬೆಲೆ ಇದೆ. ಕೆಲ ನೀರಾವರಿ ಆಶ್ರೀತ ಜಮೀನಿನಲ್ಲಿ ಬೆಳೆದ ಜೋಳದ ಮೇವಿಗೆ ಭಾರೀ ಬೇಡಿಕೆ ಬಂದಿದೆ. ಪರಿಣಾಮ ರೈತ ದಿನಬೆಳಗಾದರೆ ಯಾವ ಹೊಲದಲ್ಲಿ ಜೋಳದ ರಾಶಿ ನಡೆದಿದೆ. ಮತ್ತಿನ್ಯಾವ ಹೊಲದಲ್ಲಿ ಶೇಂಗಾ, ಗೋಧಿ ರಾಶಿ ನಡೆದಿದೆ ಎಂದು ಹೊಲದಿಂದ ಹೊಲಕ್ಕೆ ಅಲೆದು ಹೊಟ್ಟು ಮೇವು ಖರೀದಿಸುವುದೇ ದೊಡ್ಡ ಸಾಹಸವಾಗಿದೆ.

ಈ ಬಾರಿ ಮೇವಿನ ಕೊರತೆ ಹೆಚ್ಚಿದೆ. ಎರಡು ಟ್ರಾಕ್ಟರ್‌ ಜೋಳದ ಮೇವು ಖರೀದಿ ಮಾಡೀವ್ರಿ, ಮನುಷ್ಯರು ಹೊಟ್ಟೆ ಪಾಡಿಗಾಗಿ
ಎಲ್ಲಾದರೂ ಹೋಗಿ ಏನನ್ನಾದರೂ ತಿಂದು ಬದುಕಬಹುದ್ರೀ, ಆದ್ರ ಬಾಯಿಲ್ಲದ ಬಸವಣ್ಣನಿಗೆ ಹೊಟ್ಟು ಮೇವು ಇಲ್ಲಂದ್ರ ಹ್ಯಾಂಗ ಬದಕ್ತಾವರ್ರೀ..ಊರೂರು ಅಲ್ದು ಮೇವು ಖರೀದಿಸೀವಿ.
ಪರಿಯಪ್ಪ ಬೆನಕಪ್ಪನವರ, ರೈತ. ಮೇವು ಮತ್ತು ಹೊಟ್ಟಿನ ಕೊರತೆ ಬಗ್ಗೆ ತಾಲೂಕಾಡಳಿತದ ಗಮನಕ್ಕೆ ಬಂದಿಲ್ಲ.
ಈಚೆಗೆ ಶಾಸಕ ಜಿ.ಎಸ್‌.ಪಾಟೀಲ ನೇತೃತ್ವದಲ್ಲಿ
ನಡೆದ ಸಭೆಯಲ್ಲಿ ತಾಲೂಕಿನಲ್ಲಿ ಬರ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಯಾಗದಂತೆ ಮೇವು ಲಭ್ಯತೆ ಇರುವ ಕಡೆ ಖರೀದಿಸಿ ಸಂಗ್ರಹಿಸಲು ಪಶು ಸಂಗೋಪನಾ ಇಲಾಖೆಗೆ ಸೂಚಿಸಲಾಗಿದೆ.
ಕಿರಣ್‌ ಕುಮಾರ್‌ ಕುಲಕರ್ಣಿ,ತಹಶೀಲ್ದಾರ್‌, ಗಜೇಂದ್ರಗಡ.

ಡಿ.ಜಿ. ಮೊಮಿನ

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

Gadag; Gadag rural station CPI suspended due to dereliction of duty

Gadag; ಕರ್ತವ್ಯ ಲೋಪ ಹಿನ್ನೆಲೆ ಗದಗ ಗ್ರಾಮೀಣ ಠಾಣೆ ಸಿಪಿಐ ಸಸ್ಪೆಂಡ್

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.