2ನೇ ಹಂತದ ಲಸಿಕೆ ಹಾಕಿಸಿಕೊಳ್ಳಿ
Team Udayavani, Feb 10, 2021, 5:04 PM IST
ಗದಗ: ಮುಂಚೂಣಿ ಸೇನಾನಿಗಳಿಗೆ 2ನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಿಲ್ಲೆಯಲ್ಲಿ ಸೋಮವಾರ ಆರಂಭವಾಗಿದೆ. ಮುಂಚೂಣಿ ಸೇನಾನಿಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಸುರಕ್ಷಿತವಾಗಿದೆ. ನೋಂದಾಯಿತ ಎಲ್ಲ ನೌಕರರು ಲಸಿಕೆ ಪಡೆಯುವಂತೆ ಜಿಲ್ಲಾ ಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ಸೇರಿದಂತೆ ಇತರ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ನಗರಸ್ಥಳೀಯ ಸಂಸ್ಥೆಗಳು, ಪೊಲೀಸ ಇಲಾಖೆ ಹಾಗೂ ಗೃಹ ರಕ್ಷಕ ದಳ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಲಸಿಕೆ ಹಾಕುವಪ್ರಕ್ರಿಯೆ ನಡೆಯುತ್ತಿದೆ. ಎಲ್ಲರೂ ಲಸಿಕೆಯನ್ನು ಪಡೆಯಬೇಕು ಎಂದರು. ಜಿ.ಪಂ. ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುಲಸಿಕೆ ಪಡೆದಿದ್ದು, ಲಸಿಕೆ ಕುರಿತು ಭಯ ಹಾಗೂ ಆತಂಕವನ್ನು ಬಿಟ್ಟು ಎಲ್ಲ ನೊಂದಾಯಿತ ನೌಕರರು ಲಸಿಕೆ ಪಡೆಯಬೇಕು. ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 8 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಎಲ್ಲ ತಾಲೂಕಾ ಆಸ್ಪತ್ರೆಗಳು ಸೇರಿದಂತೆ ಗದಗಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹೆರಿಗೆ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ನೋಂದಾಯಿತ ನೌಕರರು ಲಸಿಕೆ ಪಡೆಯಬೇಕು. ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ್‌ರು ಲಸಿಕೆ ಪಡೆಯಲು ನೌಕರರಿಗೆ ಸೂಚಿಸುವಂತೆ ಹೇಳಿದರು.
ಜಿ.ಪಂ. ಸಿಇಒ ಡಾ|ಆನಂದ್ ಕೆ. ಮಾತನಾಡಿ, ಲಸಿಕೆ ಸಂಪೂರ್ಣ ವಿಶ್ವಾಸಾರ್ಹವಾಗಿದ್ದು, ನೋಂದಾಯಿತ ನೌಕರರು ಲಸಿಕೆ ಪಡೆಯಲು ಮುಂದಾಗಬೇಕು ಎಂದರು.
ಬಳಿಕ ಸಕಾಲ, ಭೂಮಿ ತಂತ್ರಜ್ಞಾನ ಹಾಗೂ ಮತದಾರ ಪಟ್ಟಿ ಪರಿಷ್ಕರಣೆ ಸಂಬಂ ಸಿದಂತೆ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ|ಸತೀಶ ಬಸರಿಗಿಡದ ಸೇರಿದಂತೆ ತಾಲೂಕಾ ತಹಶೀಲ್ದಾರ್‌ರು, ತಾ.ಪಂ. ಇಒಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಇತರ ಅಧಿಕಾರಿಗಳು ಹಾಜರಿದ್ದರು.