ದಿ|ಗೂಳಪ್ಪ ಉಪನಾಳ ಹೆಸರು ಚಿರಸ್ಥಾಯಿ: ಮುಳಗುಂದ

ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಸೋಮಣ್ಣ ಮುಳಗುಂದ ಅಭಿಮತ

Team Udayavani, Jun 2, 2022, 4:11 PM IST

23

ಲಕ್ಷ್ಮೇಶ್ವರ: ಮಾಜಿ ಶಾಸಕ ದಿ|ಗೂಳಪ್ಪ ಉಪನಾಳ ಈ ಭಾಗದ ಜನರು ಎಂದೂ ಮರೆಯದ ಕೊಡುಗೆ ನೀಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಸಾಹಿತ್ಯ, ಶಿಕ್ಷಣ, ಕ್ರೀಡೆ, ರಾಜಕೀಯ ಎಲ್ಲ ಕ್ಷೇತ್ರಗಳಲ್ಲೂ ಉಪನಾಳ ಅವರು ತಮ್ಮ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹಿರಿಯ ಮುಖಂಡ ಸೋಮಣ್ಣ ಮುಳಗುಂದ ಹೇಳಿದರು.

ಪಟ್ಟಣದ ಜಿ.ಎಫ್‌.ಉಪನಾಳ ಪ್ರತಿಷ್ಠಾನದ ಶಾಂತಿಧಾಮ ವೃದ್ಧಾಶ್ರಮದ ಆವರಣದಲ್ಲಿ ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಶ್ರೀ ಗೂಳಪ್ಪ ಫಕ್ಕೀರಪ್ಪ ಉಪನಾಳ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯಾವುದೇ ವ್ಯಕ್ತಿ ಬೆಳೆದು ನಿಲ್ಲಬೇಕಾದರೆ ಆತನಲ್ಲಿರುವ ಆತ್ಮಸ್ಥೈರ್ಯ, ಪರೋಪಕಾರಿ ಗುಣ, ಸಮಾಜಮುಖೀ ಸೇವೆಗಳು ಮುಖ್ಯ ಕಾರಣವಾಗಿರುತ್ತವೆ. ಇವೆಲ್ಲ ಗುಣಗಳು ದಿ.ಗೂಳಪ್ಪನವರಲ್ಲಿದ್ದವು. ಆದ್ದರಿಂದ ಅವರು ಈ ಭಾಗದಲ್ಲಿ ತಮ್ಮ ಹೆಸರನ್ನು ಚಿರಸ್ಥಾಯಿಯಾಗಿಸಿದ್ದಾರೆ ಎಂದು ಹೇಳಿದರು.

ಸಾವಕ್ಕ ಫಕ್ಕೀರಪ್ಪ ಉಪನಾಳ ಅವರ ಹೆಸರಿನಲ್ಲಿ ದಿ.ಗೂಳಪ್ಪ ಉಪನಾಳ ಅವರು ನೀಡಿದ ದತ್ತಿ ನಿಮಿತ್ತ ಜಾನಪದ ಸಾಹಿತ್ಯ ಕುರಿತು ಜಾನಪದ ಲೋಕದ ಗಾರುಡಿಗ ಹರ್ಲಾಪೂರದ ಸಾಂಬಯ್ಯ ಹಿರೇಮಠ ಮಾತನಾಡಿ, ಜಾಣರ ಪದವೇ ಜಾನಪದ. ಜನ ಸಾಮಾನ್ಯರ ಬದುಕಿನೊಂದಿಗೆ ಮೇಳೈಸಿಕೊಂಡು ಎಲ್ಲರಿಗೂ ಅರ್ಥವಾಗುವ ಸರಳ ಭಾಷೆಯ ಸಾಹಿತ್ಯವೇ ಜನಪದ ಸಾಹಿತ್ಯವಾಗಿದೆ. ಗ್ರಾಮೀಣ ಜನರ ನಿತ್ಯ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಒಗಟು, ಲಾವಣಿ, ಸೋಭಾನೆ ಹಾಡು, ಕುಟ್ಟುವ ಪದ, ಹಂತಿ ಹಾಡು, ಡೊಳ್ಳಿನ ಹಾಡು, ಬೀಸುವ ಪದ, ಮದುವೆ ಹಾಡು ಹೀಗೆ ಇನ್ನೂ ಹಲವಾರು ಪ್ರಕಾರಗಳಲ್ಲಿ ಜಾನಪದ ಸಾಹಿತ್ಯ ತುಂಬಿಕೊಂಡಿದೆ. ಎಲ್ಲ ವರ್ಗದ ಜನರ ದುಃಖ-ದುಮ್ಮಾನಗಳಿಗೆ, ಕಷ್ಟ-ಸುಖಗಳಿಗೆ, ವಿರಹಕ್ಕೆ, ಸಂತೋಷಕ್ಕೆ, ಒಲುಮೆಗೆ ಹರಡಿಕೊಂಡಿದ್ದು, ಬದುಕನ್ನು ನಿರಾಯಾಸವಾಗಿ ನಡೆಸಿಕೊಂಡು ಹೋಗಲು ಕಂಡುಕೊಂಡ ಮಾರ್ಗವೇ ಜಾನಪದ ಎಂದು ಹೇಳಿದರು.

ಪುಲಕೇಶಿ ಉಪನಾಳ ಅವರು ದಿ|ಜಿ. ಎಫ್‌.ಉಪನಾಳ ಮಾತನಾಡಿದರು. ಬಡವರ ಬಂಧು ಗೂಳಪ್ಪ ಉಪನಾಳ ಅವರ ಕುರಿತು ಬಸವರಾಜ ಬಾಳೇಶ್ವರಮಠ ಮಾತನಾಡಿ, ವಿಶಿಷ್ಟ ವೇಷಭೂಷಣ, ಬಡವರ ನೋವಿಗೆ ಸ್ಪಂದಿಸುವ ಮೂಲಕ ಕ್ಷೇತ್ರವ್ಯಾಪ್ತಿಯಲ್ಲಿ ಹತ್ತಾರು ಸಮಾಜಮುಖೀ ಕಾರ್ಯಕ್ರಮ ಹಾಕಿಕೊಂಡು ಸದಾ ನೊಂದವರ ಕಣ್ಣೀರು ಒರೆಸುವ ಕಾರ್ಯವನ್ನು ದಿ.ಗೂಳಪ್ಪನವರು ಮಾಡಿದ್ದರು. ಹೀಗಾಗಿ, ಅವರನ್ನು ಜನರು ಬಡವರ ಬಂಧು ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಇಂತಹ ಶಾಸಕರು ನಮ್ಮ ಕ್ಷೇತ್ರದಲ್ಲಿ ಆಗಿಹೋಗಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ಈಶ್ವರ ಮೆಡ್ಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವೃದ್ಧಾಶ್ರಮದ ಅಧ್ಯಕ್ಷ ಪ್ರಕಾಶ ಉಪನಾಳ, ಪ್ರವೀಣ ಬಾಳಿಕಾಯಿ, ಶರಣಪ್ಪ ಗುಳಗಣ್ಣವರ, ಚಂದ್ರಪ್ಪ ಕಾರಡಗಿ, ಸೋಮೇಶ ಉಪನಾಳ, ಪೂರ್ಣಾಜಿ ಕರಾಟೆ, ನಿರ್ಮಲಾ ಅರಳಿ, ವೃದ್ಧಾಶ್ರಮದ ಹಿರಿಯ ಜೀವಿಗಳು ಉಪಸ್ಥಿತರಿದ್ದರು. ಸೋಮೇಶ ಉಪನಾಳ ಸ್ವಾಗತಿಸಿ, ಮಂಜುನಾಥ ಚಾಕಲಬ್ಬಿ ನಿರೂಪಿಸಿ, ಈರಣ್ಣ ಗಾಣಿಗೇರ ವಂದಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.