ಕ್ಷೇತ್ರಗಳ ಪುನರ್ವಿಂಗಡಣೆಗೆ ಮಾರ್ಗಸೂಚಿ

ಜಿಲ್ಲೆಗೆ 5 ಜಿಪಂ ಕ್ಷೇತ್ರಗಳು ಪ್ಲಸ್‌-ವಿವಿಧ ತಾಲೂಕಿಗೆ ತಾಪಂ ಮೈನಸ್‌,ಶುರುವಾಗಿದೆ ಚರ್ಚೆ

Team Udayavani, Feb 13, 2021, 8:02 PM IST

ಕ್ಷೇತ್ರಗಳ ಪುನರ್ವಿಂಗಡಣೆಗೆ ಮಾರ್ಗಸೂಚಿ

ಗದಗ: ರಾಜ್ಯ ಚುನಾವಣಾ ಆಯೋಗ ಜಿಪಂ, ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಗೆ ಮಾರ್ಗಸೂಚಿ ಹೊರಡಿಸಿದೆ. ಆಯೋಗಪಟ್ಟಿ ಮಾಡಿರುವಂತೆ ಜಿಲ್ಲೆಯಲ್ಲಿ ಹೊಸದಾಗಿಐದು ಜಿಪಂ ಕ್ಷೇತ್ರಗಳು ಉದಯಿಸಿವೆ.

ಗದಗ, ರೋಣ ತಾಪಂ ಕ್ಷೇತ್ರಗಳ ಸಂಖ್ಯೆ ಕಡಿಮೆಗೊಳಿಸಿ, ಹೊಸತಾಲೂಕುಗಳಿಗೆ ಸರಿದೂಗಿಸುವಪ್ರಯತ್ನ ನಡೆಸಿದೆ. ಜಿಪಂ, ತಾಪಂ,ಕ್ಷೇತ್ರಗಳ ಪುನರ್ವಿಂಗಡಣೆಗೆ ಆದೇಶಹೊರಡಿಸುತ್ತಿದ್ದಂತೆ ಜಿಲ್ಲೆಯ ಸಾರ್ವಜನಿಕವಯಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ತಾಪಂ ವ್ಯವಸ್ಥೆಯನ್ನು ರದ್ದುಗೊಳಿಸುವಬಗ್ಗೆ ಪರ-ವಿರೋಧ ಚರ್ಚೆಗಳ ಮಧ್ಯೆಯೇ ರಾಜ್ಯ ಚುನಾವಣಾ ಆಯೋಗ ಜಿಪಂ, ತಾಪಂ, ಚುನಾವಣೆಗೆ ಸಿದ್ಧತೆ ನಡೆಸಿದೆ. ಅದರ ಭಾಗವಾಗಿಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿದೆ. ಜೊತೆಗೆ ಫೆ.20  ರಂದು ನಡೆಯುವ ಸಭೆಗೆ ಕ್ಷೇತ್ರಗಳ ಪುನರ್‌ ವಿಂಗಡಣೆ ಹಾಗೂ ನಕ್ಷೆಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ವಿಭಾಗದ ಸಿಬ್ಬಂದಿ ಹಾಜರಾಗುವಂತೆ ನಿರ್ದೇಶಿಸಿದೆ.

ಯಾರಿಗೆ ಪ್ಲಸ್‌-ಯಾರಿಗೆ ಮೈನಸ್‌?:

ಈಗಾಗಲೇ ಜಿಲ್ಲಾ ಚುನಾವಣಾ ವಿಭಾಗದಿಂದ ಜಿಲ್ಲೆಯ ಗ್ರಾಮೀಣ ಭಾಗದ ಜನಸಂಖ್ಯೆ ವಿವರಗಳನ್ನು ಪಡೆದುಕೊಂಡಿದೆ. ಅದನ್ನು ಆಧರಿಸಿ ತಾಲೂಕುವಾರು ಜಿಪಂ, ತಾಪಂ ಸ್ಥಾನಗಳನ್ನು ನಿಗದಿಪಡಿಸಿದೆ. ಅದರಂತೆಜಿಲ್ಲೆಯ ಜಿಪಂ ಗೆ ಐವರು ಸದಸ್ಯಬಲವನ್ನು ಹೆಚ್ಚಿಸಿದ್ದು, 19 ಸದಸ್ಯರಿಂದ 24ಕ್ಕೆ ಹೆಚ್ಚಿಸಿದೆ. ನರಗುಂದ ಮತ್ತು ಗಜೇಂದ್ರಗಡತಾಲೂಕು ಹೊರತುಪಡಿಸಿ, ಇನ್ನುಳದ ಐದುತಾಲೂಕುಗಳಿಗೆ ತಲಾ ಒಂದು ಜಿಪಂ ಕ್ಷೇತ್ರವನ್ನು ಹೆಚ್ಚಿಸಿದೆ.

ಅದರಂತೆ ಜಿಲ್ಲೆಯ 7 ತಾಪಂಗಳಲ್ಲಿಗದಗ, ರೋಣ ತಲಾ 3 ಹಾಗೂ ಮುಂಡರಗಿ2ಕ್ಷೇತ್ರಗಳನ್ನು ಕಳೆದುಕೊಂಡಿವೆ.ಗಜೇಂದ್ರಗಡ 5, ಶಿರಹಟ್ಟಿ 4, ಲಕ್ಷ್ಮೇಶ್ವರ3 ಕ್ಷತ್ರಗಳು ಹೆಚ್ಚಳವಾಗಿವೆ. ಇನ್ನುಳಿದಂತೆನರಗುಂದ ತಾಪಂನ 11 ಕ್ಷೇತ್ರಗಳನ್ನು ಮುಂದುವರಿಸಲಾಗಿದೆ. ಜೊತೆಗೆ ಜಿಲ್ಲೆಯ ಒಟ್ಟು 79 ಕ್ಷೇತ್ರಗಳಲ್ಲೇ ಎಲ್ಲ 7 ತಾಲೂಕುಗಳನ್ನು ಸರಿದೂಗಿಸಿರುವುದು ಗಮನಾರ್ಹ.

ಕ್ಷೇತ್ರ ಕಳೆದುಕೊಳ್ಳುವ ಆತಂಕ: ಜಿಲ್ಲೆಯಹೊಸದಾಗಿ ಎರಡು ತಾಲೂಕುಗಳು ರಚನೆಯಾಗಿದ್ದರಿಂದ 5 ಜಿಪಂ ಕ್ಷೇತ್ರಗಳುಹುಟ್ಟಿಕೊಂಡಿರುವುದು ಜಿಪಂ ಸ್ಪರ್ಧಾಕಾಂಕ್ಷಿಗಳಲ್ಲಿ ಚೈತನ್ಯ ಮೂಡಿಸಿದೆ. ಆದರೆ, ಈಗಿರುವ ತಾಪಂಗಳಲ್ಲೇ ಕೆಲವೆಡೆ ಕ್ಷೇತ್ರಗಳನ್ನು ಆಯೋಗ ಕಡಿಮೆ ಮಾಡಿದ್ದರಿಂದ ಹಲವರಿಗೆ ಕ್ಷೇತ್ರ ಕಳೆದುಕೊಳ್ಳುವ ಭೀತಿ ಶುರುವಾಗಿದೆ.

ಮಾತ್ರವಲ್ಲದೇ, ಗದಗ, ರೋಣ ಹಾಗೂ ಮುಂಡರಗಿ ತಾಲೂಕುಗಳು ವಿಶಾಲ ಹಾಗೂಹೆಚ್ಚಿನ ಜನ ಸಂಖ್ಯೆಯಿದ್ದರೂ, ತಾಪಂ ಸದಸ್ಯಬಲ ಕಡಿಮೆಗೊಳಿಸಿರುವುದು ಅವೈಜ್ಞಾನಿಕಅಲ್ಲದೇ, ನರಗುಂದ ತಾಲೂಕಿನ ಚಿಕ್ಕಮಣ್ಣೂರುಭಾಗದಲ್ಲಿ ಮತ್ತೂಂದು ತಾಪಂ ಕ್ಷೇತ್ರವನ್ನು ಕೊಡಬೇಕಿತ್ತು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಚುನಾವಣಾ ಆಯೋಗ ಕ್ಷೇತ್ರ ಪುನರ್‌ ವಿಂಗಡಣೆಗೆ ಆದೇಶಿದ್ದು, ಇನ್ನಷ್ಟೇಪ್ರಕ್ರಿಯೆಗಳು ಆರಂಭಗೊಳ್ಳಬೇಕಿದೆ. ಈ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್‌ಗಳ ಮೂಲಕ ಪೂರಕ ಮಾಹಿತಿ ಕಲೆ ಹಾಕಿ, ಗ್ರಾಮೀಣ ಭಾಗದ ಜನತೆಗೆ ತೊಂದರೆಯಾಗದ ರೀತಿಯಲ್ಲಿ ಪುನರ್ವಿಂಗಡಿಸಿ, ಕರಡು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುತ್ತದೆ. ಆನಂತರ ಆಯೋಗ ಕರಡು ಪ್ರಕಟಿಸಿ, ಆಕ್ಷೇಪಣೆ ಪ್ರಕ್ರಿಯೆಗಳ ಬಳಿಕ ಅಂತಿಮಗೊಳಿಸಲಾಗುತ್ತದೆ.  –ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿ

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.