ಮುಂಡರಗಿ-ನರಗುಂದದಲ್ಲಿ ಹೆಚ್ಚಿನ ನಿಗಾ

Team Udayavani, Apr 23, 2020, 5:01 PM IST

ಮುಂಡರಗಿ-ನರಗುಂದದಲ್ಲಿ ಹೆಚ್ಚಿನ ನಿಗಾ

ಮುಂಡರಗಿ: ಪಟ್ಟಣದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ದೃಢಪಟ್ಟಿದೆ ಎಂಬ ವದಂತಿ ಬುಧವಾರ ಸ್ಥಳೀಯರನ್ನು ಬೆಚ್ಚಿ ಬೀಳಿಸಿತ್ತು. ಈ ನಡುವೆ ಪಟ್ಟಣದ ಜಾಗೃತ ವೃತ್ತದ ಲಕ್ಷ್ಮೀಗುಡಿ ಓಣಿ ಸೇರಿದಂತೆ ಮತ್ತಿತರ ಪ್ರದೇಶಗಳನ್ನು ಏಕಾಏಕಿ ನಿರ್ಬಂಧಗೊಳಿಸಿದ್ದು ಪಟ್ಟಣದ ನಿವಾಸಿಗಳ ಆತಂಕಕ್ಕೆ ಕಾರಣವಾಯಿತು. ಬಳಿಕ ಆರೋಗ್ಯ ಇಲಾಖೆ ಪ್ರಕಟಿಸಿದ ವರದಿಯಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂಬುದನ್ನು ಅರಿತು ನಿರಾಳರಾದರು.

ಬುಧವಾರ ತಹಶೀಲ್ದಾರ್‌ ವೆಂಕಟೇಶ ನಾಯಕ, ಪುರಸಭೆ ಮುಖ್ಯಾಧಿಕಾರಿ ಎಸ್‌.ಎಸ್‌. ನಾಯಕ ಹಾಗೂ ಪೊಲೀಸ್‌, ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಇದರ ಬೆನ್ನಲ್ಲೇ ತಾಲೂಕು ಆಡಳಿತ, ಪುರಸಭೆ ವತಿಯಿಂದ ಜಾಗೃತ ವೃತ್ತ ಲಕ್ಷ್ಮೀಗುಡಿ ಓಣಿ ಪ್ರದೇಶವನ್ನು ಬ್ಯಾರಿಕೇಡ್‌ ಹಾಕಿ ಕಂಬಳಿ ವೃತ್ತ, ತೋಂಟದಾರ್ಯ ಮಠದ ರಸ್ತೆ, ಡಾ| ಬಿ.ಆರ್‌. ಅಂಬೇಡ್ಕರ ನಗರ, ಭೀಮರಾವ್‌ ವೃತ್ತ, ಮಂಜುನಾಥ ನಗರದಲ್ಲಿ ಬ್ಯಾರಿಕೇಡ್‌ ಹಾಕಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಯಿತು.

ಅದರೊಂದಿಗೆ ಪುರಸಭೆ ಸಿಬ್ಬಂದಿ ಈ ಭಾಗದ ಗಲ್ಲಿಗಲ್ಲಿಗಳನ್ನು ಸ್ವತ್ಛಗೊಳಿಸಿ, ಹೈಡ್ರೊಕ್ಲೊರೈಡ್‌, ಮೆಲಾಥೀಯಾನ್‌ ಪೌಡರ್‌, ಮೆಲಾಥೀಯಾನ್‌ ದ್ರಾವಣ ಸಿಂಪಡಿಸಿದರು. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ, ಈ ಭಾಗದ ಜನರಿಗೆ  ಕೋವಿಡ್ 19 ಹರಡುವಿಕೆ, ರೋಗ ಲಕ್ಷಣಗಳು ಹಾಗೂ ತಡೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.

ಈ ಭಾಗದ ವ್ಯಕ್ತಿಗೆ  ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ ಎಂಬ ವದಂತಿ ಹರಿದಾಡಿತು. ಆದರೆ ರಾಜ್ಯ ಸರಕಾರ ಎಂದಿನಂತೆ ಬುಧವಾರ ಪ್ರಕಟಿಸಿದ ವರದಿಗಳಲ್ಲಿ ಜಿಲ್ಲೆಯ ಕೋವಿಡ್ 19 ಪ್ರಕರಣಗಳು ದೃಢಪಟ್ಟ ಮಾಹಿತಿ ಇಲ್ಲದಿರುವುದರಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟರು.

ಮುಂಡರಗಿ ಮತ್ತು ನರಗುಂದ ತಾಲೂಕಿನಲ್ಲಿ ಬುಧವಾರ ಯಾವುದೇ ಕೋವಿಡ್ 19  ಪ್ರಕರಣಗಳು ಖಚಿತವಾಗಿಲ್ಲ. ಆದರೆ ಆ ಭಾಗದ ಕೆಲವರಲ್ಲಿ ಕೋವಿಡ್ 19 ಲಕ್ಷಣಗಳು ಕಂಡುಬಂದಿದ್ದರಿಂದ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಕೋವಿಡ್‌ -19 ನಿಯಮಾವಳಿಯಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. – ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.