21ರಂದು ಬೆಂಗಳೂರಲ್ಲಿ ರೈತರ ಬೃಹತ್‌ ಸಮಾವೇಶ

ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ರಾಜ್ಯ ರೈತ ಸಂಘ-ಹಸಿರು ಸೇನೆ ಒತ್ತಾಯ

Team Udayavani, Apr 7, 2022, 1:36 PM IST

16

ಲಕ್ಷ್ಮೇಶ್ವರ: ಕೇಂದ್ರ ಸರಕಾರ ಈಗಾಗಲೇ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆದಿದ್ದು, ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಜಾನುವಾರು ಕಾಯ್ದೆ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಏ.21 ರಂದು ಬೆಂಗಳೂರಿನಲ್ಲಿ ರೈತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ರಾಜ್ಯ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಈಗಾಗಲೇ ಕೇಂದ್ರ ಸರಕಾರ ವಾಪಸ್‌ ಪಡೆದಿದ್ದರೂ ರಾಜ್ಯ ಸರಕಾರ ಇವುಗಳನ್ನು ಜಾರಿಗೊಳಿಸುವ ತರಾತುರಿಯಲ್ಲಿದೆ ಎಂದು ಆರೋಪಿಸಿದ ಅವರು, ಈ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕೆಂದು ರೈತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸುಮಾರು 1 ಲಕ್ಷದಷ್ಟು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಚುನಾವಣೆ ವಿಚಾರವಾಗಿ ಏ.21ಕ್ಕೆ ಈ ಕುರಿತು ಸ್ಪಷ್ಟ ನಿಲುವು ಕೈಗೊಳ್ಳಲಿದೆ. ಚಳವಳಿಗಾರರನ್ನು ಒಗ್ಗೂಡಿಸಿ, ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡುವ ಪ್ರಯತ್ನಕ್ಕೆ ಈ ಸಮಾವೇಶ ನಾಂದಿ ಹಾಡಲಿದೆ ಎಂದು ಹೇಳಿದರು.

ಸಮಾಜ ಒಡೆಯುವ ಕೆಲಸ ನಡೆಯುತ್ತಿದೆ: ದೇಶದಲ್ಲಿ ದಿನೇ ದಿನೇ ಇಂಧನ ಬೆಲೆಗಳ ಹೆಚ್ಚಳ, ಇದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸರಕಾರ, ಪರೋಕ್ಷವಾಗಿ ಹಿಜಾಬ್‌, ಹಲಾಲ್‌, ಆಜಾನ್‌ ನಂತಹ ಭಾವನಾತ್ಮಕ ವಿಚಾರಗಳಿಗೆ ಬೆಂಬಲ ನೀಡುತ್ತಾ, ತನ್ನ ವೈಫಲ್ಯ ಮರೆಮಾಚಲು ಹೊರಟಿದೆ. ರೈತರು ಮತ್ತು ಹಸಿದವರ ನಡುವಿನ ಸಂಬಂಧ ಗೊತ್ತಿಲ್ಲದವರು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಮಾನ್ಯತೆ ನೀಡಿ, ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಪಕ್ಷಾತೀತ ರೈತಪರ ಹೋರಾಟ ವೇದಿಕೆ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ, ಬಸವರಾಜ ಬಾಳೇಶ್ವರಮಠ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೆಗೌಡ, ಉಪಾಧ್ಯಕ್ಷ ಎನ್‌.ನಾಗರಾಜ, ಬಸವರಾಜ ಕೋಡಿಹಳ್ಳಿ, ಕುಮಾರ ಲಮಾಣಿ, ರಮೇಶ ದೊಡ್ಡೂರ, ಮಾಬುಸಾಬ ಬನ್ನಿಕೊಪ್ಪ, ಶಿವಾನಂದ ಲಿಂಗಶೆಟ್ಟಿ, ಬಸಣ್ಣ ಕರೆಯತ್ತಿನ, ಖಾನಸಾಬ ಸೂರಣಗಿ, ಉಮೇಶ ಡೊಳ್ಳಿನ, ಸಿದ್ದಲಿಂಗೇಶ ರಗಟಿ, ತಮ್ಮಣ್ಣ ಗಾಯಕವಾಡ, ಕೋಟೇಪ್ಪ ಹಡಗಲಿ, ಶಂಕ್ರಪ್ಪ ಕುಂಬಾರ, ಗನಿಸಾಬ ಬರದೂರ, ಮಹದೇವಪ್ಪ ಸುಣಗಾರ, ಮಹಾಂತೇಶ ಗುಡಗುಂಟಿ, ಫಕ್ಕೀರೇಶ ಯಲಿಗಾರ, ಬಸಣ್ಣ ಮುಂಡವಾಡ, ತಿಪ್ಪಣ್ಣ ಮುಂಡವಾಡ, ಪ್ರಕಾಶ ಮೇಟಿ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.