ಆಧ್ಯಾತ್ಮಿಕ ಮೌಲ್ಯಗಳಿಂದ ಆದರ್ಶಮಯ ಬದುಕು

Team Udayavani, Apr 13, 2019, 2:57 PM IST

gad-2
ನರಗುಂದ: ಸಾತ್ವಿಕ ಜೀವನಕ್ಕೆ ಅವಶ್ಯಕವಾದ ಮೌಲ್ಯಗಳನ್ನು ಎಲ್ಲಿಯೂ ಖರೀದಿ ಮಾಡಲಾಗದು. ಅದನ್ನು ನಾವೇ ರೂಪಿಸಿಕೊಳ್ಳಬೇಕು. ಇದಕ್ಕೆ ಅಧ್ಯಾತ್ಮದ ಅರಿವು ಬೇಕಾಗಿದೆ. ಆಧ್ಯಾತ್ಮಿಕ ಮೌಲ್ಯಗಳಿಂದ ಆದರ್ಶಮಯ ಬದುಕು ಸಾಗಿಸಲು ಸಾಧ್ಯ ಎಂದು ಪಟ್ಟಣದ ಈಶ್ವರೀಯ ವಿವಿ ಸಂಚಾಲಕಿ ಬ್ರಹ್ಮಕುಮಾರಿ ಪ್ರಭಕ್ಕನವರು ಹೇಳಿದರು.
ಪಟ್ಟಣದ ಈವಿವಿಯಲ್ಲಿ 11 ದಿನಗಳ ಕಾಲ ನಡೆಸಲಾದ ಶಾಲಾ ಮಕ್ಕಳಿಗಾಗಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಶಕ್ತಿ ಮನುಕುಲದ ಜೀವನದಲ್ಲಿ ಹೊಂದಾಣಿಕೆ ಮತ್ತು ಸಂಬಂಧಗಳನ್ನು ವೃದ್ಧಿಸುತ್ತದೆ ಎಂದು ಪ್ರತಿಪಾದಿಸಿದರು.
ಚಿಕ್ಕವರಿದ್ದಾಗಲೇ ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ರೂಪಿಸಬೇಕಾಗಿದೆ. ನಾನು ಹೇಗೆ ಬದುಕಬಲ್ಲೇ ಎಂಬ ನೈತಿಕ ಮತ್ತು ಆತ್ಮಸ್ಥೈರ್ಯ ತುಂಬುವಂತಹ ಶಿಕ್ಷಣ ಇಂದಿನ ಮಕ್ಕಳಿಗೆ ಅಗತ್ಯವಾಗಿದೆ ಎಂದರು.
ಮಕ್ಕಳು ಏನಾದರೂ ತಪ್ಪು ಮಾಡಿದಾಗ ಅವರಲ್ಲಿ ತಪ್ಪಿನ ಅರಿವು ಮೂಡಿಸಿದಾಗ ಮತ್ತೂಮ್ಮೆ ತಪ್ಪು ಮಾಡುವ ಸನ್ನಿವೇಶ ಬಾರದು. ಬೇಸಿಗೆ ರಜೆಯಲ್ಲಿ ಹಿಂದೆಲ್ಲ ಮಕ್ಕಳನ್ನು ಅಜ್ಜಿಯ ಮನೆಗೆ ಕಳಿಸುತ್ತಿದ್ದರು. ಅಜ್ಜಿಯರು ಹಳೆಯ ಕಥೆಗಳು, ನೀತಿ ಕಥೆಗಳನ್ನು ಹೇಳಿ ಮಕ್ಕಳಲ್ಲಿ ಆದರ್ಶ ಗುಣಗಳನ್ನು ಬೆಳೆಸುತ್ತಿದ್ದರು. ಆದರೆ ಇಂದು ಮಕ್ಕಳನ್ನು ಬೇಸಿಗೆ ರಜೆಗೆ ಕಳಿಸುವ ಸಂಪ್ರದಾಯ ಕಳೆದು ಹೋಗುತ್ತಿದೆ ಎಂದು ವಿಷಾದಿಸಿದರು.
ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಪಾಲಕರ ಜವಾಬ್ದಾರಿ, ಪಾತ್ರ ಬಹಳವಾಗಿದೆ. ಮಕ್ಕಳ ಬದುಕಿನಲ್ಲಿ ಮೌಲ್ಯಗಳನ್ನು ಬಿತ್ತಿ ಬೆಳೆದಾಗ ಆತನೊಬ್ಬ ಸತಜೆಯಾಗಿ ಹೊರಹೊಮ್ಮಲು ಸಾಧ್ಯವಿದೆ. ಮುಖ್ಯವಾಗಿ ಮಕ್ಕಳಲ್ಲಿ ನೈತಿಕತೆ ಬೆಳೆಸುವಲ್ಲಿ ಪಾಲಕರು ಮುಂದಾಗಬೇಕು ಎಂದರು.
ಈವಿವಿಯಲ್ಲಿ 11 ದಿನಗಳ ಕಾಲ ಶಾಲಾ ಮಕ್ಕಳ ಬೇಸಿಗೆ ಶಿಬಿರದಲ್ಲಿ ಜೀವನದ ಮೌಲ್ಯಗಳು, ಹಾಡು, ಶ್ಲೋಕ, ನೀತಿ ಕಥೆಗಳು, ವ್ಯಕ್ತಿತ್ವ ವಿಕಸನ, ಶುದ್ಧ ಬರಹ ಮುಂತಾದ ವಿಷಯಗಳನ್ನು ಬೋಧಿಸಲಾಗಿದೆ. ನಿವೃತ್ತ ಪ್ರಾಚಾರ್ಯ ಸಿ.ಎಸ್‌. ಸಾಲೂಟಗಿಮಠ, ಪತ್ರಕರ್ತರಾದ ಸಿದ್ಧಲಿಂಗಯ್ಯ ಮಣ್ಣೂರಮಠ, ಪ್ರಭು ಗುಡಾರದ, ಶಂಕರ ತೆಗ್ಗಿನಮನಿ, ಪುರಸಭೆಯ ಶಿವಾನಂದ ಅಜ್ಜನ್ನವರ, ಪ್ರೀತಿ ಗವಿಮಠ, ಮಹಾಂತೇಶ ವಾಳದ, ಶಾಂತಾ ವೀರನಗೌಡ್ರ, ವಾಣಿಶ್ರೀ ಇಂಗಳಳ್ಳಿ ಮುಂತಾದವರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.