ಅಭ್ಯರ್ಥಿಗಳ ಚಿತ್ತ ಮನೆ ಮನೆ ಭೇಟಿಯತ್ತ!

Team Udayavani, Aug 30, 2018, 3:48 PM IST

30-agust-19.jpg

ಗಜೇಂದ್ರಗಡ: ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಮತದಾರ ಮನವೊಲಿಸಲು ಅಭ್ಯರ್ಥಿಗಳ ಚಿತ್ತ ಮನೆಗಳ ಭೇಟಿಯತ್ತ ನೆಟ್ಟಿದೆ. ಪಟ್ಟಣದ ಪುರಸಭೆ 23 ವಾರ್ಡ್‌ಗಳಿಗೆ ಆ. 31ರಂದು ನಡೆಯಲಿರುವ ಚುನಾವಣೆ ಕೊನೆ ಹಂತಕ್ಕೆ ಬಂದು ತಲುಪಿದೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮನೆಮನೆಗೆ ಭೇಟಿ ನೀಡಿ ಮತದಾರ ಪ್ರಭುಗಳ ಮನವೊಲಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಮತದಾನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಪಟ್ಟಣದೆಲ್ಲೆಡೆ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ.

ಭರ್ಜರಿ ಪ್ರಚಾರ: ಮತ ಸೆಳೆಯಲು ಅಭ್ಯರ್ಥಿಗಳು ಮನೆಮನೆಗೆ ಭೇಟಿ ಮಳೆಯನ್ನು ಲೆಕ್ಕಿಸದೇ ಪ್ರಚಾರ ಮಾಡುತ್ತಿದ್ದಾರೆ. ಪುರಸಭೆ ಸದಸ್ಯನಾಗಬೇಕೆಂಬ ಹಂಬಲದಿಂದ ಕಣದಲ್ಲಿರುವ ಅಭ್ಯರ್ಥಿಗಳು ಹಗಲು ರಾತ್ರಿಯೆನ್ನದೆ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಲೋಕಸಭೆ ಚುನಾವಣೆಗೆ ದಿಕ್ಸೂಚಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಾದರೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಭದ್ರಬುನಾದಿಯಾಗಲಿದೆ. ರಾಜಕೀಯ ಪಕ್ಷಗಳು ಬೆಳೆಯಲು ರಹದಾರಿಯಾಗಲಿದೆ. ಲೋಕಸಭೆ ಚುನಾವಣೆ ಶೀಘ್ರದಲ್ಲೇ ನಡೆಯಲಿರುವುದರಿಂದ ಸ್ಥಳೀಯ ಸಂಸ್ಥೆ ಚುನಾವಣೆ ಇನ್ನಿಲ್ಲದ ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ವರಿಷ್ಠರ ಎದೆಯಲ್ಲಿ ಈಗಾಗಲೇ ಭಯ ಶುರುವಾಗಿದೆ. ಮುಂದಿನ ಲೋಕಸಭೆ ಚುನಾವಣೆ ಗುರಿ ಇಟ್ಟುಕೊಂಡು ಪುರಸಭೆ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರದ ಗದ್ದುಗೆ ಹಿಡಯಲು ನಾಯಕರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

ರಾತ್ರಿ ಕಾರ್ಯಾಚರಣೆ: ಮತದಾರರ ಸೆಳೆಯಲು ಕಸರತ್ತು: ಹಲವು ದಿನಗಳಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಕತ್ತಲ ರಾತ್ರಿ ಕಾರ್ಯಾಚರಣೆ ಮತ್ತೊಂದು ಆಯಾಮವಾಗಿದೆ. ಮತದಾನದ ಮುನ್ನಾದಿನ ರಾತ್ರಿ ಸಂದರ್ಭದಲ್ಲಿ ಮತದಾರರ ಮನೆ, ಮನೆಗೆ ತೆರಳಿ ಮತದಾರರ ಚಿತ್ತ ತಮ್ಮತ್ತ ಕೇಂದ್ರೀಕರಿಸುವಂಥಹ ತಂತ್ರಗಾರಿಕಗೆ ಮೊರೆ ಹೋಗುತ್ತಿದ್ದಾರೆ.

ಪ್ರತಿಷ್ಠೆಯ ಕಣ: ಪ್ರತಿಷ್ಠೆಯ ಕಣವಾಗಿರುವ ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಅ ಧಿಕಾರ ಹಿಡಿಯಲೇ ಬೇಕೆಂದು ಹಠಕ್ಕೆ ಬಿದ್ದಿರುವ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳು ಪಟ್ಟಣಕ್ಕೆ ರಾಜ್ಯ ನಾಯಕರನ್ನು ಕರೆ ತಂದು ಮತಯಾಚನೆಗೆ ಅಣಿಗೊಳಿಸಿದ್ದರು. ಇದಲ್ಲದೆ ತಂಡೋಪ ತಂಡವಾಗಿ ಪ್ರತಿ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿ ಗೆಲುವು ಪಡೆಯಲು ಯತ್ನಿಸುತ್ತಿದ್ದಾರೆ. ಅಂತಿಮವಾಗಿ ಮತದಾರ ಪ್ರಭು ಯಾರಿಗೆ ಮುದ್ರೆ ಒತ್ತಿ ಗೆಲುವಿಗೆ ನಾಂದಿ ಆಗಲಿದ್ದಾನೆ ಎಂಬುದು ತಿಳಿಯಲಿದೆ.

„ಡಿ. ಜಿ. ಮೋಮಿನ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.