ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾರಕ

Team Udayavani, Jun 13, 2020, 2:05 PM IST

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾರಕ

ಗದಗ: ಕಾಸಿದ್ದವವರಿಗೆ ಜಮೀನು ಖರೀದಿಸುವ ಅವಕಾಶ ನೀಡಲು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಸರಕಾರದ ನಿರ್ಧಾರದಿಂದ ಗ್ರಾಮಗಳ ಆರ್ಥಿಕ ವ್ಯವಸ್ಥೆ ಬುಡಮೇಲಾಗಲಿದೆ ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ಮುಂದೆ ಯಾರು ಬೇಕಾದರೂ, ಯಾವುದೇ ಅಡೆತಡೆಗಳಿಲ್ಲದೇ ಕೃಷಿ ಜಮೀನು ಖರೀದಿಸಬಹುದು. ಇಂತಹ ಅವಕಾಶ ನೀಡಲು ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಮುಂದಾಗಿದೆ. ಇದರಿಂದ ರೈತರ ಜಮೀನುಗಳಿಗೆ ತಕ್ಷಣಕ್ಕೆ ಒಳ್ಳೆಯ ಬೆಲೆ ದೊರಕಬಹುದು. ಆದರೆ ಜಮೀನು ಮಾರಾಟದಿಂದ ಬಂದ ಹಣ ಸದ್ವಿನಿಯೋಗ ಆಗದಿದ್ದರೆ, ಜಮೀನು ಕಳೆದುಕೊಂಡ ರೈತರು ಹಾಗೂ ಅವರ ಮಕ್ಕಳು ಬೀದಿಗೆ ಬರುತ್ತಾರೆ. ಕೃಷಿಕರು ಅಲ್ಲದಿದ್ದರೂ ಜಮೀನು ಖರೀದಿಗೆ ಅವಕಾಶ ದೊರಕಿದರೆ ಕಪ್ಪು ಹಣ ಆಸ್ತಿ ರೂಪದಲ್ಲಿ ಪರಿವರ್ತನೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅನ್ನದಾತನ ರಕ್ಷಣೆಗೆ ಕಾಂಗ್ರೆಸ್‌ ಪಕ್ಷವೇ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದಿದ್ದು, ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪಕ್ಷ ತೀರ್ಮಾನ ಕೈಗೊಳ್ಳಲಿದೆ. ಈ ಕುರಿತಂತೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಶೀಘ್ರವೇ ಮುಂದಿನ ಹೋರಾಟದ ರೂಪುರೇಷೆ ತಯಾರಿಸಲಾಗುತ್ತದೆ ಎಂದು ತಿಳಿಸಿದರು.

ಜುಲೈ ಅಂತ್ಯದೊಳಗೆ ರಾಜ್ಯದ ಎಲ್ಲ ಗ್ರಾಪಂ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಅವಧಿ  ಪೂರ್ಣಗೊಳ್ಳಲಿದೆ. ಕೋವಿಡ್‌ 19 ನೆಪವೊಡ್ಡಿ ಚುನಾವಣೆ ಮುಂದೂಡಿ, ಬಿಜೆಪಿ ಕಾರ್ಯಕರ್ತರ ನಾಮನಿರ್ದೇಶನಕ್ಕೆ ಮುಂದಾಗಿದ್ದ ರಾಜ್ಯ ಸರಕಾರ ಚಿಂತನೆಗೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದಲ್ಲದೇ, ಹೈಕೋರ್ಟ್‌ ಮೆಟ್ಟಿಲೇರಿದ್ದರಿಂದ ಸರಕಾರ ತನ್ನ ಚಿಂತನೆಯಿಂದ ಹಿಂದಕ್ಕೆ ಸರಿದಿದೆ. ನಾಮನಿರ್ದೇಶನ ಬದಲಾಗಿ ಆಡಳಿತಾಧಿಕಾರಿ ನೇಮಿಸುವ ಸುಳಿವು ನೀಡಿರುವುದು ಪ್ರಜಾಪ್ರಭುತ್ವ ಹಾಗೂ ಜನಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದರು.

ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಿಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ ಕುಮಾರ್‌ ಎಚ್ಚರಿಕೆ ಹೆಜ್ಜೆಗಳನ್ನಿಡುತ್ತಿದ್ದಾರೆ. ಈ ಕುರಿತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ, ಒಂದೆರಡು ದಿನಗಳಲ್ಲಿ ಸರಕಾರಕ್ಕೆ ಸೂಕ್ತ ಸಲಹೆ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌. ಪಾಟೀಲ, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.