ಭಕ್ತಿ ಸಂಪ್ರದಾಯದಲ್ಲಿ ಜೀವನ ನಡೆಸಿ: ಮೂಜಗು

ಧರ್ಮದ ಪರಂಪರೆಯನ್ನು ನಾವೆಲ್ಲ ಉಳಿಸಿ ಬೆಳೆಸಿ ನಮ್ಮ ನಾಡಿನ ವಿಶೇಷತೆ ಮುಂದುವರೆಸಬೇಕಿದೆ

Team Udayavani, May 2, 2022, 6:24 PM IST

ಭಕ್ತಿ ಸಂಪ್ರದಾಯದಲ್ಲಿ ಜೀವನ ನಡೆಸಿ: ಮೂಜಗು

ನರಗುಂದ: ಮಹಾಮಹಿಮರ ಈ ನಾಡು ಪುಣ್ಯದ ಬೀಡಾಗಿದೆ.ನಾವೆಲ್ಲ ಭಕ್ತಿಯ ಸಂಪ್ರದಾಯದಲ್ಲಿ ಜೀವನ ನಡೆಸಬೇಕು. ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ನಾವಾಗಬೇಕು ಎಂದು ಹುಬ್ಬಳ್ಳಿ ಮೂರು ಸಾವಿರ ಮಠದ ಡಾ| ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಜಾಗೃತ ಕೇಂದ್ರ ಸುಕ್ಷೇತ್ರ ವಿರಕ್ತಮಠದ ಚನ್ನಬಸವ ಶಿವಯೋಗಿಗಳ 153ನೇ ಸ್ಮರಣೋತ್ಸವ ಹಾಗೂ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಮಾತನಾಡಿ,ಧರ್ಮಸೇವೆ ಕಾಯಕ ಸೇವೆ ಇವೆರಡು ಭಕ್ತರ ಪ್ರಮುಖ ಸಾಧನೆಗಳೆಂದು ತಿಳಿಸಿದರು.

ಮಾಜಿ ಸಚಿವ ಬಿ.ಆರ್‌. ಯಾವಗಲ್ಲ ಮಾತನಾಡಿ, ಮಠಾಧೀಶರು ಧಾರ್ಮಿಕ, ವೈಚಾರಿಕತೆ ಪ್ರಚಲಿತಗೊಳಿಸುವ ಮೂಲಕ ಸದಾ ಭಕ್ತರಲ್ಲಿ ಧರ್ಮದ ಅರಿವು ನೀಡುತ್ತಾರೆ. ಸಾಮಾಜಿಕ ಸಮಾನತೆ ಮತ್ತು ಧರ್ಮದ ಪರಂಪರೆಯನ್ನು ನಾವೆಲ್ಲ ಉಳಿಸಿ ಬೆಳೆಸಿ ನಮ್ಮ ನಾಡಿನ ವಿಶೇಷತೆ ಮುಂದುವರೆಸಬೇಕಿದೆ ಎಂದು ಹೇಳಿದರು.

ಕೆಪಿಸಿಸಿ ಸಂಯೋಜಕ ಹಾಗೂ ಮಾಧ್ಯಮ ವಿಶ್ಲೇಷಕ ಡಾ| ಸಂಗಮೇಶ ಕೊಳ್ಳಿಯವರ ಮಾತನಾಡಿ, ಕಾಯಕ ಮತ್ತು ಧರ್ಮ ಕಾರ್ಯಗಳ ಮೂಲಕ ವಿರಕ್ತಮಠ ಶಿವಕುಮಾರ ಸ್ವಾಮಿಗಳು ಧರ್ಮ ಪರಂಪರೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.

ಶಿವಯೋಗಿ ಶಿವಾಚಾರ್ಯರು, ಪ್ರವಚನಕಾರರಾದ ಅಂತೂರ ಬೆಂತೂರ ಕುಮಾರ ದೇವರು ಮಾತನಾಡಿದರು. ಕೊರೊನಾ ವಾರಿಯರ್ಸ್‌ ಪುರಸಭೆ ಪೌರ ಕಾರ್ಮಿಕರನ್ನು ಹಾಗೂ ಅನ್ನಪ್ರಸಾದ ಸೇವಾ ದಾನಿಗಳನ್ನು ಸತ್ಕರಿಸಲಾಯಿತು. ಸಾವಿರಾರು ಭಕ್ತ ಮಹಿಳೆಯರಿಗೆ ಉಡಿ ತುಂಬುವ ಕಾರ್ಯ ನೆರವೇರಿತು. ವಿರಕ್ತಮಠದ ಶಿವಕುಮಾರ ಸ್ವಾಮಿಗಳು, ಈಶ್ವರಯ್ಯ ಹಿರೇಮಠ ಮುಂತಾದವರು ವೇದಿಕೆಯಲ್ಲಿದ್ದರು. ಶ್ರೀಮಠದ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.
ಆರ್‌.ಬಿ. ಚಿನಿವಾಲರ ಹಾಗೂ ಚನ್ನು ನೀಲಗುಂದ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.