ಔಷಧ-ಹಾಸಿಗೆ-ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಿ : ಡಿಸಿ ಸುಂದರೇಶ್‌ ಬಾಬು

ಸೋಂಕಿತರ ಜೀವ ರಕ್ಷಣೆಗೆ ಮುಂದಾಗಿ

Team Udayavani, May 16, 2021, 5:34 PM IST

15gadag 4

ಗದಗ : ಕೋವಿಡ್ ಸೋಂಕಿನ 2ನೇ ಅಲೆ ಅಧಿಕ ಪ್ರಮಾಣದಲ್ಲಿ ಹರಡುತ್ತಿದ್ದು, ಸೋಂಕಿತರ ಜೀವ ರಕ್ಷಣೆಗೆ ಅಗತ್ಯವಿರುವ ಔಷ ಧ, ಹಾಸಿಗೆ ಹಾಗೂ ಆಕ್ಸಿಜನ್‌ ಕೊರತೆಯಾಗದಂತೆ ನಿಯೋಜಿತ ಅಧಿ  ಕಾರಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಧಿಕಾರಿ ಎಂ.ಸುಂದರೇಶ್‌ ಬಾಬು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್‌ ಸೋಂಕು ನಿಯಂತ್ರಣ ಕುರಿತು ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್‌ ಹಾಲ್‌ ನಲ್ಲಿ ತಾಲೂಕು ಮಟ್ಟದ ವಿವಿಧ ಅ ಧಿಕಾರಿಗಳ ಜತೆಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಜಿಲ್ಲೆಯ ಆಯಾ ತಾಲೂಕಿನ ಸರ್ಕಾರಿ, ಖಾಸಗಿ ಕೋವಿಡ್‌ ಆಸ್ಪತ್ರೆಗಳಿಗೆ ತಲಾ ಒಬ್ಬರು ನೋಡೆಲ್‌ ಅಧಿ  ಕಾರಿಯನ್ನು ಆಕ್ಸಿಜನ್‌ ಸರಬರಾಜು, ಸಂಗ್ರಹ ಹಾಗೂ ನಿರ್ವಹಣೆಗಾಗಿ ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯಕ್ರಮಾಧಿ ಕಾರಿಯೊಬ್ಬರನ್ನು ಆಕ್ಸಿಜನ್‌ ನೋಡೆಲ್‌ ಅ ಧಿಕಾರಿಯಾಗಿ ಹಾಗೂ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್‌ ಸೆಲ್‌ ರಚಿಸಲಾಗಿದೆ. ಇದಕ್ಕೆ ಸಂಖ್ಯಾ ಸಂಗ್ರಹಣಾ ಧಿಕಾರಿಗಳನ್ನು ನೋಡೆಲ್‌ ಅಧಿ  ಕಾರಿಯಾಗಿ ನೇಮಿಸಲಾಗಿದೆ ಎಂದರು.

ನಿಯೋಜಿತ ಅಧಿ ಕಾರಿಗಳು ಆಸ್ಪತ್ರೆಗಳಲ್ಲಿ ಅಗತ್ಯವಿರುವ ಆಕ್ಸಿಜನ್‌ ಪ್ರಮಾಣದ ಮಾಹಿತಿ ಹಾಗೂ ಆಕ್ಸಿಜನ್‌ ಖಾಲಿಯಾಗುವ 24 ಗಂಟೆಗಳ ಮೊದಲೇ ಸಂಬಂಧಿ ತ ಏಜನ್ಸಿಯವರಿಗೆ ಮಾಹಿತಿ ನೀಡಿ, ಆಕ್ಸಿಜನ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾ ವಹಿಸಬೇಕು. ನೋಡೆಲ್‌ ಅಧಿ ಕಾರಿಗಳು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಕ್ಕೆ ನಿಯಮಿತವಾಗಿ ಆಕ್ಸಿಜನ್‌ ಲಭ್ಯತೆಯ ಮಾಹಿತಿ ನೀಡಬೇಕು. ಆಕ್ಸಿಜನ್‌ ಸೆಲ್‌ ಗೆ ನಿಯೋಜಿತ ಆಕ್ಸಿಜನ್‌ ನೋಡೆಲ್‌ ಅಧಿ ಕಾರಿಗಳು ಮಾಹಿತಿ ವಿನಿಮಯ ಮಾಡಬೇಕೆಂದು ಹೇಳಿದರು. ಕೋವಿಡ್‌ ಸೋಂಕಿತರಿಗೆ ರೋಗ ಲಕ್ಷಣಗಳಿಲ್ಲದಿದ್ದಲ್ಲಿ ಮನೆಯಲ್ಲಿಯೇ ಐಸೋಲೇಷನ್‌ ಮಾಡಬೇಕು.

ಮನೆಯಲ್ಲಿ ಸ್ಥಳಾವಕಾಶದ ಕೊರತೆಯಿದ್ದಲ್ಲಿ ಹತ್ತಿರದ ಕೋವಿಡ್‌ ಕೇರ್‌ ಸೆಂಟರ್‌ ಗೆ ಸೋಂಕಿತರನ್ನು ಸ್ಥಳಾಂತರಿಸಬೇಕು. ಸೋಂಕಿತರಿಗೆ ಆಕ್ಸಿಜನ್‌ ಅವಶ್ಯಕತೆ ಕಂಡುಬಂದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ಸೋಂಕಿತರನ್ನು ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಎಲ್ಲ ಕ್ರಮಗಳು ಎಸ್‌ಒಪಿ ನಿಯಮಾನುಸಾರ ಜರುಗಿಸಬೇಕು ಎಂದರು. ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಆಸ್ಪತ್ರೆಗಳಲ್ಲಿ ಎಸ್‌ಓಪಿ ಪ್ರಕಾರ ಚಿಕಿತ್ಸೆ ನೀಡಿ ಗುಣಮುಖರಾದವರನ್ನು ನಿಯಮಾನುಸಾರ ಡಿಸ್‌ ಚಾರ್ಜ್‌ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿನ ಚಿಕಿತ್ಸೆಗಾಗಿ ಅಗತ್ಯವಿರುವ ಔಷ ಧ ಸಲಕರಣೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಆಸ್ಪತ್ರೆಯ ಶುಚಿತ್ವ, ಸೋಂಕಿತರಿಗೆ ಸೂಕ್ತ ಹಾಸಿಗೆ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಬಿಸಿ ನೀರಿನ ವ್ಯವಸ್ಥೆ , ಉತ್ತಮ ಬಿಸಿ ಆಹಾರ ಪೂರೈಕೆಗೆ ಕ್ರಮ ವಹಿಸಬೇಕೆಂದು ನಿರ್ದೇಶಿಸಿದರು.

ವಿನಾಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡಬಾರದು. ಪದೇ ಪದೆ ಸೋಂಕಿತರ ಭೇಟಿಯಿಂದ ಇತರರಿಗೂ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುತ್ತವೆ. ಅದಕ್ಕೆ ಅವಕಾಶ ನೀಡಬಾರದು. ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಸೋಂಕಿತರಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತರಾದಲ್ಲಿ ಎಸ್‌ಓಪಿ ನಿಯಮಾನುಸಾರ ಅಂತ್ಯಕ್ರಿಯೆ ಜರುಗಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಸತೀಶಕುಮಾರ್‌ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ  ಕಾರಿ ಡಾ|ಸತೀಶ ಬಸರೀಗಿಡದ, ಜಿಲ್ಲಾ ಆರ್‌ಸಿಎಚ್‌ ಅ ಧಿಕಾರಿ ಡಾ|ಬಿ.ಎಂ.ಗೊಜನೂರ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾಧವ, ಆಯಾ ತಾಪಂ ಕಾರ್ಯನಿರ್ವಹಣಾ ಧಿಕಾರಿಗಳು, ತಾಲೂಕು ವೈದ್ಯಾ ಧಿಕಾರಿಗಳು, ವಿವಿಧ ಇಲಾಖೆ ಅಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

BCCI announces India’s squad for 3 match T20 and ODI series vs England

ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್

ಬರ್ಮಿಂಗ್‌ಹ್ಯಾಮ್‌: ಭಾರತಕ್ಕೆ ಸವಾಲಿನ ಟೆಸ್ಟ್‌

ಬರ್ಮಿಂಗ್‌ಹ್ಯಾಮ್‌: ಭಾರತಕ್ಕೆ ಸವಾಲಿನ ಟೆಸ್ಟ್‌

ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಸ್ವೀಕೃತ

ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಸ್ವೀಕೃತ

astro

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ

ದ.ಕ., ಉಡುಪಿಯಲ್ಲಿ ಎಡೆಬಿಡದೆ ಸುರಿದ ಮಳೆ; ಹಲವೆಡೆ ಹಾನಿ

tdy-55

ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಮನೋಜ್‌ ಜೈನ್‌

ಸಹಕಾರ ಸಂಸ್ಥೆಗಳ ಸಾಲದ ಮುದ್ರಾಂಕ ಶುಲ್ಕ ಇಳಿಕೆ

ಸಹಕಾರ ಸಂಸ್ಥೆಗಳ ಸಾಲದ ಮುದ್ರಾಂಕ ಶುಲ್ಕ ಇಳಿಕೆ

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ

MUST WATCH

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

udayavani youtube

ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ

udayavani youtube

ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಹೊಸ ಸೇರ್ಪಡೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್‌ಗೆ ಶೋಕಾಸ್ ನೋಟಿಸ್

BCCI announces India’s squad for 3 match T20 and ODI series vs England

ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್

ಬರ್ಮಿಂಗ್‌ಹ್ಯಾಮ್‌: ಭಾರತಕ್ಕೆ ಸವಾಲಿನ ಟೆಸ್ಟ್‌

ಬರ್ಮಿಂಗ್‌ಹ್ಯಾಮ್‌: ಭಾರತಕ್ಕೆ ಸವಾಲಿನ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.