ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಸಾಥ್
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯಶಸ್ವಿ
Team Udayavani, Mar 21, 2021, 9:00 PM IST
ಗದಗ: ಹತ್ತಾರು ಜನರ ಮಾಸಾಶನ ಅರ್ಜಿಗಳ ವಿಲೇವಾರಿ, ದಶಕಗಳಿಂದ ನನೆಗುದಿಗೆ ಬಿದ್ದಿರುವ ರಾಜಕಾಲುವೆ ನಿರ್ಮಾಣದ ಭರವಸೆ ಸೇರಿದಂತೆ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಯಶಸ್ವಿಯಾಗಿದೆ.
ಶನಿವಾರ ಬೆಳಗ್ಗೆ 10.15 ಗಂಟೆಗೆ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅವರಿಗೆ ಗ್ರಾಮಸ್ಥರು ಹೂಮಾಲೆ ಹಾಕಿ ಗೌರವದಿಂದ ಬರಮಾಡಿಕೊಂಡರು. ಬಳಿಕ ಸುಮಾರು 3 ಗಂಟೆಗಳ ಕಾಲ ಸತತವಾಗಿ ಗ್ರಾಮ ಸಂಚಾರ ನಡೆಸಿದರು. ಅಂಗನವಾಡಿ, ಬೆಂಬಲ ಬೆಲೆ ಯೋಜನೆಯಡಿ ಕಡಲೆ ಖರೀದಿ ಕೇಂದ್ರ, ನ್ಯಾಯಬೆಲೆ ಅಂಗಡಿ ಭೇಟಿ ನೀಡಿ ಪರಿಶೀಲಿಸಿದರು.
ಈ ನಡುವೆ ವಿವಿಧ ಬೀದಿಗಳಿಗೆ ತೆರಳಿದ ಜಿಲ್ಲಾ ಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರಿಂದ ಲಿಖೀತ ಹಾಗೂ ಮೌಖೀಕವಾಗಿ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ಸಣ್ಣಪುಟ್ಟ ಸಮಸ್ಯೆಗಳಿಗೆ ಕೂಡಲೇ ಪರಿಹರಿಸುವಂತೆ ಸ್ಥಳದಲ್ಲಿ ಹಾಜರಿದ್ದ ಅ ಧಿಕಾರಿಗಳಿಗೆ ಡಿಸಿ ಆದೇಶಿಸಿದರು. ಇದೇ ವೇಳೆ ವಿವಿಧ ಸಮಸ್ಯೆ ಮತ್ತು ಯೋಜನೆಗಳ ಅನುಷ್ಠಾನದ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿ, ಸಮಸ್ಯೆಗಳ ಪರಿಹಾರಿಸುವ ಮೂಲಕ ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನ ಮಾಡಿದರು.
ವೇದಿಕೆ ಕಾರ್ಯಕ್ರಮ: ನಂತರ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿ ಎಂ.ಸುಂದರೇಶ ಬಾಬು, “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬುದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಕಾರ್ಯ ಕ್ರಮಗಳಲ್ಲೊಂದು. ಪ್ರತಿ ತಿಂಗಳು 3ನೇ ಶನಿವಾರ ತಾಲೂಕಿನ ಗ್ರಾಮವೊಂದನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಆಯಾ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಜಿಲ್ಲಾ ಧಿಕಾರಿಗಳು ಗ್ರಾಮಕ್ಕೆ ತೆರಳಿ, ಅಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಜನರ ಮನೆ ಬಾಗಿಲಿಗೇ ಸರ್ಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶ ವಾಗಿದೆ ಎಂದರು.
ಎಸಿ ರಾಯಪ್ಪ ಹುಣಸಗಿ ಮಾತನಾಡಿದರು. ಜಿಪಂ ಸಿಇಒ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು
ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಹೇಳಿಕೆ
ಸಾಗರದಲ್ಲಿ ಹೆಚ್ಚುತ್ತಿದೆ ಡೆಂಘೀ ಪ್ರಕರಣ
MUST WATCH
ಹೊಸ ಸೇರ್ಪಡೆ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು
ಐಸಿಸ್, ಅಲ್ಖೈದಾ ಸೇರಿ 11 ಸಂಘಟನೆಗಳಿಗೆ ಲಂಕಾ ನಿಷೇಧ