ಜೂ. 1ರಿಂದ ಮುಂಬೈ-ಗದಗ ರೈಲು ಸಂಚಾರ ಆರಂಭ

Team Udayavani, May 29, 2020, 2:40 PM IST

ಜೂ. 1ರಿಂದ ಮುಂಬೈ-ಗದಗ ರೈಲು ಸಂಚಾರ ಆರಂಭ

ಗದಗ: ಈಗಾಗಲೇ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದವರಿಂದಲೇ ಜಿಲ್ಲೆಯಲ್ಲಿ ಕೋವಿಡ್‌-19 ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಜೂ. 1ರಿಂದ ಮುಂಬೈ ಸಿಎಸ್‌ಟಿ ರೈಲ್ವೆ ನಿಲ್ದಾಣದಿಂದ ಗದಗಿಗೆ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ. ಹೈರಿಸ್ಕ್ ವಲಯದಲ್ಲಿರುವ ಮಹಾರಾಷ್ಟ್ರದಿಂದ ಪ್ರತಿನಿತ್ಯ ಸಾವಿರಾರು ಜನರು ಆಗಮಿಸುವುದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.

ಸುಮಾರು 2 ತಿಂಗಳ ಬಳಿಕ ಮುಂಬೈ-ಗದಗ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗುತ್ತಿರುವುದು ಆಯಾ ಭಾಗದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಕುಟುಂಬಗಳಿಗೆ ವರದಾನವಾಗಿದೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ ಹೊರರಾಜ್ಯದ ಜನರಿಗೆ ಸಾರಿಗೆ ಸೌಲಭ್ಯವಿಲ್ಲದೇ, ಪರದಾಡುವಂತಾಗಿತ್ತು. ಆದರೆ ಮೇ 27ರಂದು ಸೆಂಟ್ರಲ್‌ ರೈಲ್ವೆ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂ. 1ರಿಂದ ಗದಗ-ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಲ್‌ನಿಂದ ವಾಡಿ ಮಾರ್ಗವಾಗಿ ಪ್ರತಿದಿನ ಎಕ್ಸಪ್ರಸ್‌ ರೈಲು ಸಂಚರಿಸಲಿದೆ. ಜಿಲ್ಲಾಡಳಿತಕ್ಕೆ ಮಾಹಿತಿ ಇಲ್ಲ: ಮಹಾರಾಷ್ಟ್ರದ ಸೋಲಾಪುರ ಡಿವಿಜನಲ್‌ ಮ್ಯಾನೇಜರ್‌ ಅಜಯ್‌ ಕುಮಾರ್‌ ಅವರು ಕಲಬುರ್ಗಿ ಜಿಲ್ಲಾ ಧಿಕಾರಿಗೆ ಪತ್ರ ಬರೆದ ಪತ್ರದಲ್ಲಿ ಮುಂಬೈ ಸಿಎಸ್‌ಟಿ-ಗದಗ ಮಧ್ಯೆ ರೈಲು ಕಾರ್ಯಾಚರಣೆ ನಡೆಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ವಿವಿಧ ರೈಲುಗಳು ವಾಡಿ ಮಾರ್ಗವಾಗಿ ಚಲಿಸಲಿವೆ. ಪ್ರಯಾಣಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಆದರೆ ಈ ಬಗ್ಗೆ ಗದಗ ಜಿಲ್ಲಾಡಳಿತಕ್ಕೆ ಅಧಿಕೃತ ಮಾಹಿತಿ ಇಲ್ಲ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮುಂಬೈ-ಗದಗ ನಡುವೆ ಜು. 1ರಿಂದ ರೈಲು ಆರಂಭಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ನಾಳೆ ಈ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ಮಾಹಿತಿ ಪಡೆಯುತ್ತೇನೆ. ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್‌ ಮಾಡಲು ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಶಾಲಾ-ಕಾಲೇಜು, ವಸತಿ ನಿಲಯಗಳಿವೆ. ಆದರೆ ಸರಕಾರದ ಆದೇಶ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.