Mundargi: ದೇಶ ಎಚ್‌ಐವಿ ಮುಕ್ತವಾಗಿಸಲು ಸಹಕರಿಸಿ


Team Udayavani, Dec 3, 2023, 1:29 PM IST

Mundargi: ದೇಶ ಎಚ್‌ಐವಿ ಮುಕ್ತವಾಗಿಸಲು ಸಹಕರಿಸಿ

ಮುಂಡರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ನಿಯಂತ್ರಣ ಘಟಕ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಆಸ್ಪತ್ರೆ, ಶ್ರೀ ಜಗದ್ಗುರು ಅನ್ನದಾನೀಶ್ವರ ಕಲಾ ವಾಣಿಜ್ಯ
ವಿಜ್ಞಾನ ಸಂಯುಕ್ತ ಪದವಿ ಕಾಲೇಜ, ಪೂಜಾರ ಪ್ಯಾರಾ ಮೆಡಿಕಲ್‌ ಕಾಲೇಜ್‌ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಜನಜಾಗೃತಿ, ಜಾಥಾ ಕಾರ್ಯಾಕ್ರಮವನ್ನು ಹಸಿರು ನಿಶಾನೆ ಮೂಲಕ ಉದ್ಘಾಟಿಸಿದರು.

ಬಳಿಕ ಜಗದ್ಗುರು ಅನ್ನದಾನೀಶ್ವರ ಪ.ಪೂ. ಕಾಲೇಜನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಕೆ. ಶಿವರಾಜ ಸ್ವಾಮಿಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಎಚ್‌ಐ ವಿ/ಏಡ್ಸ್‌ ಕುರಿತು ಯಾರು ಇಂತಹ ಭಯಾನಕ ಕಾಯಿಲೆಗೆ ಒಳಗಾಗದೆ ತಮ್ಮ ಶೈಕ್ಷಣಿಕ ರಂಗಕ್ಕೆ ಪ್ರಾಧ್ಯಾನತೆ ಕೊಟ್ಟು ಶಿಕ್ಷಣ ಪಡೆದು ಅದರ ಜೊತೆಗೆ ಎಚ್‌ಐ ವಿ/ಏಡ್ಸ್‌ ಅಂತಹ ಭಯಾನಕ ಕಾಯಿಲೆಯಿಂದ ಸಮಾಜವನ್ನು ಮುಕ್ತಗೊಳಿಸಬೇಕೆಂದು ಕರೆ ನೀಡಿದರು.

ತಾಲೂಕು ಆರೋಗ್ಯ-ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನ ಮಾತನಾಡಿ, ವಿದ್ಯಾರ್ಥಿಗಳಿಗೆ ಏಡ್ಸ್ ಹರಡುವ ಮಾರ್ಗ ಮತ್ತು ತಡೆಗಟ್ಟುವಿಕೆ ವಿಧಾನಗಳ ಕುರಿತು ತಿಳಿಸಿದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಆಪ್ತ ಸಮಾಲೋಚಕ ಮಂಜುನಾಥ ಕಳಸಾಪುರ, ದೇಶದ ಯುವ ಜನತೆಗೆ ಭಾರತ ಹಿಂದು ರಾಷ್ಟ್ರವಾಗಿದ್ದು, ನಾವು ಹಿಂದು ಸಂಸ್ಕೃತಿ ಅಳವಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರು ಹೇಳುವಂತೆ ಮದುವೆ ಆಗುವವರೆಗೆ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬ್ರಹ್ಮಾಚರಣೆ ಪರಿಪಾಲನೆ ಮಾಡಿ ಎಂದು ಕಿವು ಮಾತನ್ನು ಹೇಳಿದರು. ಒಬ್ಬಳೆ ಹೆಂಡತಿ, ಒಬ್ಬಳೆ ಗಂಡ ಎಂಬ ನಮ್ಮ ಭಾರತೀಯ ಸಂಸ್ಕೃತಿ ಅಳವಡಿಸಿಕೊಳ್ಳಲು ಕರೆ ನೀಡಿದರು. ಉಪನ್ಯಾಸಕ ಬಸವರಾಜ ಜೋಗಿನರವರು ನಿರೂಪಿಸಿದರು. ಶಿವಕುಮಾರ ವಂದಿಸಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ. ಬಡಿಗೇರ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕೆ.ಎಸ್‌. ಚೌಟಗಿ, ಕೆ.ಪಿ. ಗಂಭೀರ, ಪ್ರವೀಣ ರಡ್ಡಿ ಮತ್ತು ಪೂಜಾರ ಪ್ಯಾರಾ ಮೆಡಿಕಲ್ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಸವಡಿ, ಜೆ.ಎ. ಕಾಲೇಜಿನ ಸಮಸ್ತ ಉಪನ್ಯಾಸಕ ವರ್ಗದವರು ಇದ್ದರು.

ಏಡ್ಸ್‌ ಜಾಗೃತಿ-ಕ್ಯಾಂಡಲ್‌ ಜಾಥಾ
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏಡ್ಸ್‌ ದಿನದ ನಿಮಿತ್ತ ಕ್ಯಾಂಡಲ್‌ ಜಾಥಾ ಮತ್ತು ಮೌನಾಚರಣೆ ಕಾರ್ಯಕ್ರಮ ಜರುಗಿತು. ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಅರುಂಧತಿ ಕುಲಕರ್ಣಿ ಮಾತನಾಡಿ, ಎಚ್‌ಐವಿ ಸೋಂಕಿನಿಂದ ಮರಣ ಹೊಂದಿದವರ ಸಂತಾಪ ಸೂಚಕವಾಗಿ ಶೋಕವ್ಯಕ್ತ ಪಡಿಸಲು ಹಾಗೂ ಅವರಿಗೆ ಚಿರಶಾಂತಿ ಕೋರಲು ಕ್ಯಾಂಡಲ್‌ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ಸೋಂಕಿತರು ಎದೆಗುಂದದೆ ಮಾನಸಿಕ ಸ್ಥೈರ್ಯ ಮತ್ತು ಸದೃಢತೆಯಿಂದ ಜೀವನ ಸಾಗಿಸಲು ಸಂಘ-ಸಂಸ್ಥೆಗಳು ಇಲಾಖೆಯೊಂದಿಗೆ ಕೈಜೋಡಿಸಿ ಶ್ರಮಿಸಬೇಕು ಎಂದು ಹೇಳಿದರು. ಸುಮಿತ್ರಾ ಮಾವಿನಕಾಯಿ ಪ್ರಾರ್ಥಿಸಿದರು. ಬಸವರಾಜ ಲಾಳಗಟ್ಟಿ ಸ್ವಾಗತಿಸಿ, ನಿರೂಪಿಸಿದರು. ಸಂತೋಷ ಬಡಿಗೇರ ವಂದಿಸಿದರು. ಕ್ಯಾಂಡಲ್‌ ಜಾಥಾದಲ್ಲಿ ಎಆರ್‌ಟಿ ಕೇಂದ್ರದ ಸಿಬ್ಬಂದಿ, ಐಸಿಟಿಸಿ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.