ಪುರಸಭೆ ನಗರೋತ್ಥಾನ ಕಾಮಗಾರಿ ವಿಳಂಬ

Team Udayavani, Dec 9, 2019, 2:28 PM IST

gadaga-tdy-02

ಗಜೇಂದ್ರಗಡ: ಕಿತ್ತು ಹೋದ ಡಾಂಬರ, ಅರ್ಧಂಬರ್ಧ ಜೋಡಿಸಿರುವ ಇಂಟರಲಾಕ್‌, ಅರ್ಧಕ್ಕೆ ನಿಂತ ಮುಖ್ಯ ರಸ್ತೆಯ ಕಾಮಗಾರಿಯಿಂದ ಗಜೇಂದ್ರಗಡ ಅಭಿವೃದ್ಧಿಗೆ ಮಂಕು ಕವಿದಿದೆ. ಇದರಿಂದ ಯಾರೊಬ್ಬರೂ ಹೇಳ್ಳೋರುಕೇಳ್ಳೋರಿಲ್ಲ. ಪರಿಸ್ಥಿತಿ ಹೀಗಿದ್ದರೂ ಜಿಲ್ಲಾಡಳಿತ ಮೌನಕ್ಕೆ ಶರಣಾಗಿದೆ.

ಪಟ್ಟಣದಲ್ಲಿ ಕಳೆದ ಎರಡು ವರ್ಷದ ಹಿಂದೆಯೇ ಪುರಸಭೆ ನಗರೋತ್ಥಾನ ಯೋಜನೆಯಡಿ 2016-17ನೇ ಸಾಲಿನಲ್ಲಿ 6.37 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅಂದಿನ ಶಾಸಕ ಜಿ.ಎಸ್‌. ಪಾಟೀಲ ಚಾಲನೆ ನೀಡಿದ್ದರು. ಅಂದು ಪ್ರಾರಂಭವಾದ ಕಾಮಗಾರಿ ಈ ವರೆಗೂಪೂರ್ಣಗೊಂಡಿಲ್ಲ. ಕೈಗೆತ್ತಿಕೊಂಡ ಕಾಮಗಾರಿಗಳು ಹಾಳಾಗಿದ್ದು, ಸಾರ್ವಜನಿಕರು ನರಕಯಾತನೆ ಅನುಭವಿಸುವಂತಾಗಿದೆ.

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ: ಪಟ್ಟಣದ ಹುಡೇದ ಮಹಾಲಕ್ಷ್ಮೀ ವೃತ್ತದಿಂದ ಹಿಡಿದು ಉದ್ಯಾನವನದವರೆಗಿನ ಮುಖ್ಯರಸ್ತೆ, ಚಿನಿವಾಲರ ಪ್ಲಾಟ್‌, ಮತ್ತು ಕುಷ್ಟಗಿ ರಸ್ತೆಗೆ ಸಂಪರ್ಕಿಸುವ ರಸ್ತೆಗಳ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದಿದೆ. ಆದರೆ ಕಾಮಗಾರಿ ಮಾತ್ರ ಅರ್ಧಕ್ಕೆ ನಿಂತಿದೆ. ಮುಖ್ಯ ರಸ್ತೆಯಲ್ಲಿ ದೊಡ್ಡ ಜಲ್ಲಿ ಕಲ್ಲು ಹಾಕಿ ಕೈ ಬಿಟ್ಟಿರುವ ಗುತ್ತಿಗೆದಾರರ ವಿಳಂಬ ನೀತಿಯಿಂದಾಗಿ ವಾಹನ ಸವಾರರು ಸ್ಥಳೀಯ ಮತ್ತು ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಈಗಾಗಲೇ ಬಜರಂಗದಳ ವೃತ್ತದಿಂದ ಹಿಡಿದು ಚೌಕಿಮಠದವರೆಗೆ ಡಾಂಬರೀಕರಣ ಮಾಡಲಾಗಿದೆ. ಕಾಮಗಾರಿ ಕೈಗೊಂಡ ಕೆಲ ತಿಂಗಳಲ್ಲಿಯೇ ಅಲ್ಲಲ್ಲಿ ಡಾಂಬರ ಕಿತ್ತು ಹೋಗಿದ್ದು, ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದೆ.

ಹೇಳ್ಳೋರಿಲ್ಲಕೇಳ್ಳೋರಿಲ್ಲ: ನಗರೋತ್ಥಾನ ಯೋಜನೆಯಡಿ ಪಟ್ಟಣದ ವಿವಿಧ ವಾರ್ಡುಗಳಲ್ಲಿನ ರಸ್ತೆ ಡಾಂಬರೀಕರಣ, ಚರಂಡಿ ನಿರ್ಮಾಣ ಕಾಮಗಾರಿಗಳ ಆರಂಭದ ದಿನದಿಂದ ಹಿಡಿದು ಈ ವರೆಗೂ ಸಂಬಂಧ ಪಟ್ಟ ಇಲಾಖೆ ಅಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡುವುದಾಗಲಿ, ಕಾಮಗಾರಿ ಪರಿಶೀಲಿಸುವುದಾಗಲಿ ಮಾಡಿಲ್ಲ. ಹೀಗಾಗಿ ಗುತ್ತಿಗೆದಾರರು ಲಾಭಕ್ಕಾಗಿ ಹಾಗೂ ಬೇಕಾಬಿಟ್ಟಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ನಗರೋತ್ಥಾನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ನಿಯಮಾವಳಿ ಪ್ರಕಾರ ಚಾಲನೆ ನೀಡಿದ ಒಂಭತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಆದರೆ ಪಟ್ಟಣದಲ್ಲಿನ ಕಾಮಗಾರಿಗಳಿಗೆ ಇಲಾಖೆ ನಿಯಮಾವಳಿ ಅನ್ವಯಿಸುತ್ತದೆಯೋಇಲ್ಲವೋ ಎನ್ನುವ ಅನುಮಾನ ಮೂಡುತ್ತಿದೆ. ಇದರಿಂದ ಬೇಸತ್ತ ಜನರು ತಮ್ಮ ಅಂಗಡಿ, ಮನೆಗಳ ಮುಂದೆ ಸ್ವತಃ ತಾವೇ ಇಂಟರಲಾಕ್‌ ಜೋಡಣೆ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಗುತ್ತಿಗೆದಾರರು ಮಾಡುವ ಪ್ರಲಾಪಕ್ಕೆ ಶಾಲೆ ಮಕ್ಕಳು ಸಹ ಶಾಲೆ ಮುಂದಿನ ರಸ್ತೆ ಬದಿಗೆ ಇಂಟರಲಾಕ್‌ ಜೋಡಣೆ ಮಾಡಿಕೊಳ್ಳುತ್ತಿರುವುದು ವ್ಯವಸ್ಥೆ ಲೋಪಕ್ಕೆ ಹಿಡಿದ ಕೈಗನ್ನಡಿ. ಸರ್ಕಾರಗಳು ಕಚ್ಚಾರಸ್ತೆ ಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಕೋಟ್ಯಂತರ ಅನುದಾನ ಬಿಡುಗಡೆ ಮಾಡಿ, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಬೇಕೆಂದು ಗುತ್ತಿಗೆದಾರರಿಗೆ ನಿಯಮ ಹೇರಿದರೂ ಸಹ ಗುತ್ತಿಗೆದಾರರು ಕಮೀಷನ್‌ ಆಮಿಷಕ್ಕಾಗಿ ಮತ್ತೂಬ್ಬರಿಗೆ ಕಾಮಗಾರಿ ನೀಡುವ ಮೂಲಕ ಅಭಿವೃದ್ಧಿ ಹಿನ್ನಡೆಗೆ ಕಾರಣರಾಗುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬರುತ್ತಿವೆ. ಅವ್ಯವಸ್ಥೆ ಆಗರವಾಗಿರುವ ಗಜೇಂದ್ರಗಡ ಅಭಿವೃದ್ಧಿ ಕುರಿತು ಕೂಡಲೇ ಜಿಲ್ಲಾ ಧಿಕಾರಿ ಮತ್ತು ಜಿಲ್ಲಾ ಯೋಜನಾ ನಿರ್ದೇಶಕರು ಪಟ್ಟಣಕ್ಕೆ ಭೇಟಿ ನೀಡಿ, ಅರ್ಧಕ್ಕೆ ನಿಂತಿರುವ ಕಾಮಗಾರಿ ಕುರಿತು ಕ್ರಮ ಕೈಗೊಳ್ಳಬೇಕೆನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.