ಲಾಕ್‌ಡೌನ್‌ನಲ್ಲಿ ನರೇಗಾ ಆಸರೆ


Team Udayavani, Apr 22, 2020, 5:29 PM IST

ಲಾಕ್‌ಡೌನ್‌ನಲ್ಲಿ  ನರೇಗಾ ಆಸರೆ

ಗದಗ: ಎಲ್ಲೆಡೆ ಕೋವಿಡ್ 19 ಭಯ ಆವರಿಸಿದ್ದರಿಂದ ಜಿಲ್ಲೆಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳು ಕೆಲ ದಿನಗಳ ಕಾಲ ಸ್ಥಗಿತಗೊಂಡಿದ್ದವು. ಆದರೆ ಇತ್ತೀಚೆಗೆ ಗ್ರಾಮೀಣ ಜನರಲ್ಲೂ ಈ ಕುರಿತು ಜಾಗೃತಿ ಮೂಡಿಸಿದ್ದರಿಂದಾಗಿ ಒಂದು ವಾರದಿಂದ ಉದ್ಯೋಗ ಖಾತ್ರಿ ಕಾಮಗಾರಿಗಳು ಚುರುಕು ಪಡೆಯುತ್ತಿವೆ.

ಬಯಲು ಸೀಮೆ ಜಿಲ್ಲೆಯ ಜನರಿಗೆ ಬೇಸಿಗೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗುತ್ತಿತ್ತು. ಆದರೆ ಈ ಬಾರಿ ಮಹಾಮಾರಿ ಕೋವಿಡ್ 19 ಭೀತಿ ಆವರಿಸಿದ್ದರಿಂದ ಉದ್ಯೋಗ ಖಾತ್ರಿ ಕಾಮಗಾರಿಗಳಿಗೆ ತಡೆಯಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರಕಾರ ಪ್ರಕಟಿಸಿರುವ ಪರಿಷ್ಕೃತ ಮಾರ್ಗಸೂಚಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಶಕ್ತಿ ತುಂಬಿದೆ. ಕೋವಿಡ್ 19  ಭಯದಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಆರ್ಥಿಕ ಸಮಸ್ಯೆ ಎದುರಾಗಿತ್ತು. ಆದರೆ ಸರಕಾರದ ಹೊಸ ಮಾರ್ಗ ಸೂಚಿ ಗ್ರಾಮೀಣ ಜನರಲ್ಲಿ ಹೊಸ ಚೈತನ್ಯ ಮೂಡಿಸಿದೆ.

ಮಾನವ ಕೆಲಸಗಳಿಗೆ ಒತ್ತು: ಕೆಲ ವರ್ಷಗಳಿಂದ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಒದಗಿಸುವಂತೆ ಏಪ್ರಿಲ್‌-ಮೇ ತಿಂಗಳಲ್ಲಿ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತದೆ. ಈ ಬಾರಿ ಕೋವಿಡ್ 19 ಭೀತಿಯಿಂದಾಗಿ ಉದ್ಯೋಗ ಖಾತ್ರಿ ಯೋಜನೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿತ್ತು. ಆದರೆ ಕೇಂದ್ರ ಸರಕಾರದ ಹೊಸ ಮಾರ್ಗಸೂಚಿಯಂತೆ ಕಾಮಗಾರಿ ಕೈಗೊಳ್ಳುತ್ತಿದ್ದು, ವೈಯಕ್ತಿಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ವಾರದಿಂದ ನರೇಗಾ ಅಡಿ ಉದ್ಯೋಗಕ್ಕಾಗಿ ಬೇಡಿಕೆ ಹೆಚ್ಚುತ್ತಿದೆ. ಹೌಸಿಂಗ್‌, ಕೆರೆ ಹೂಳೆತ್ತುವುದು, ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಹಳ್ಳಗಳ ಹೂಳೆತ್ತುವುದು, ಶಾಲಾ ಕಾಂಪೌಂಡ್‌ ನಿರ್ಮಾಣ, ಅರಣ್ಯೀಕರಣ, ರಸ್ತೆ ಬದಿ ಸಸಿ ನೆಡುವಿಕೆ, ಚೆಕ್‌ ಡ್ಯಾಂ ಹೂಳೆತ್ತುವ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ.

ವೈಯಕ್ತಿಕ ಕೆಲಸಕ್ಕೆ ಆದ್ಯತೆ: ಆ ಪೈಕಿ ಜಿಲ್ಲೆಯಲ್ಲಿ ಸದ್ಯ 103 ಸಮುದಾಯ ಕಾಮಗಾರಿಗಳು, 961 ವೈಯಕ್ತಿಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರತಿನಿತ್ಯ 4,446 ಕಾರ್ಮಿಕರಿಗೆ ಕೂಲಿ ಒದಗಿಸಲಾಗುತ್ತಿದೆ. ಕೋವಿಡ್ 19  ಹರಡದಂತೆ ವೈಯಕ್ತಿಕ ಕೆಲಸಕ್ಕೆ ಒತ್ತು ನೀಡಿದ್ದು, ಸಮುದಾಯಿಕ ಕಾಮಗಾರಿಗಳಲ್ಲಿ ಕಾರ್ಮಿಕರನ್ನು ದೂರ ದೂರ ನೇಮಿಸಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು. ಒಟ್ಟಾರೆ ಲಾಕ್‌ಡೌನ್‌ನಿಂದ ಮನೆಯಲ್ಲಿ ಕುಳಿತು ಹೈರಾಣಾಗಿದ್ದ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.