ಅಭಿವೃದ್ಧಿ ಕಾಣದ ನರೇಗಲ್ಲ ಎಪಿಎಂಸಿ

ಬೆಳೆ ಮಾರಾಟಕ್ಕೆ ರೈತರ ಪರದಾಟಜಾಗ ಖರೀದಿಸಿದರೂ ನಿರ್ಮಾಣವಾಗದ ಕಟ್ಟಡ

Team Udayavani, Jan 9, 2020, 1:33 PM IST

9-January-16

ನರೇಗಲ್ಲ: ಪಟ್ಟಣದಲ್ಲಿ ದಶಕಗಳ ಹಿಂದೆ ನಿರ್ಮಿಸಿರುವ ಎಪಿಎಂಸಿಯ ಅಭಿವೃದ್ಧಿ ಹಾಗೂ ಇಲ್ಲಿನ ವಹಿವಾಟಿನ ಕುರಿತು ಸ್ಥಳೀಯ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಈ ಭಾಗದ ರೈತರಿಗೆ ನೋವಿನ ಸಂಗತಿಯಾಗಿದೆ. ನರೇಗಲ್ಲ ಹೋಬಳಿ ವ್ಯಾಪ್ತಿಯ ಹಳ್ಳಿಗಳು ಹಾಗೂ ಗದಗ, ಯಲಬುರ್ಗಾ ತಾಲೂಕಿನ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟಕ್ಕಾಗಿ ಸದ್ಯ ಗದಗ, ಕೊಪ್ಪಳ ಕೃಷಿ ಉತ್ಪನ ಮಾರುಕಟ್ಟೆ ಸೇರಿದಂತೆ ಹತ್ತು ಹಲವಾರು ನಗರಗಳಿಗೆ ತೆರಳುತ್ತಿದ್ದಾರೆ. ಪಟ್ಟಣದಲ್ಲಿ ಎಪಿಎಂಸಿ ನಿರ್ಮಾಣಗೊಂಡು ದಶಕಗಳು ಕಳೆದರೂ ಎಲ್ಲಿ ಒಂದು ನಯಾಪೈಸೆ ವ್ಯಾಪಾರ, ವಹಿವಾಟು ನಡೆದಿಲ್ಲ. ಇದಕ್ಕೆ ಎಪಿಎಂಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ  ರಣವಾಗಿದೆ.

ಇವರ ಅಸಡ್ಡೆ ಭಾವನೆಯಿಂದ ಇಲ್ಲಿ ಮಳಿಗೆಗಳನ್ನು ನಿರ್ಮಾಣ
ಮಾಡಲು ಸಾಧ್ಯವಾಗುತ್ತಿಲ್ಲ. ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವುದಕ್ಕಾಗಿ ಎಲ್ಲೆಂದರಲ್ಲಿ ತಿರುಗಾಡುವ ಬದಲಿಗೆ ನರೇಗಲ್ಲನ ಉಪ ಕೃಷಿ ಉತ್ಪನ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಖರೀದಿ ಮಾಡಲು ಪ್ರಾರಂಭಿಸಿದರೆ ರೈತರು ಅಲೆದಾಟ ತಪ್ಪಿಸಬಹುದು. ರೈತರು ಸಿಕ್ಕಸಿಕ್ಕ ದಲ್ಲಾಳಿಗಳಿಗೆ ಕಡಿಮೆ ಬೆಲೆಗಳಲ್ಲಿ ಬೆಳೆಗಳನ್ನು ಮಾರಾಟ ಮಾಡುತ್ತಿದ್ದಾರೆ.

ನರೇಗಲ್ಲ ಪಟ್ಟಣದ ಜಕ್ಕಲಿ ರಸ್ತೆಯಲ್ಲಿರುವ ಎಪಿಎಂಸಿ ಉಪ ಕೃಷಿ ಉತ್ಪನ ಮಾರುಕಟ್ಟೆಯಲ್ಲಿ ಸದ್ಯ ಯಾವುದೇ ಮೂಲ ಸೌಲಭ್ಯಗಳು ಹಾಗೂ ಭದ್ರತೆ ಇಲ್ಲದಿರುವುದರಿಂದ ಕಟ್ಟಡಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಅಥವಾ ವಹಿವಾಟು ನಡೆಸುವುದಕ್ಕೆ ಸಾಧ್ಯವಿಲ್ಲ. ಇದಕ್ಕೆ ಪರ್ಯಾಯವಾಗಿ ರೈತರಿಗೆ ಯಾವುದೇ ತೊಂದರೆಯಾಗದಂತೆ ನಾವು ಹಳೆಯ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಅಲ್ಲದೇ ಎಪಿಎಂಸಿಗೆ ಪ್ರತಿ ವರ್ಷ ನೀಡಬೇಕಾದ ಹಣವನ್ನು ಕಟ್ಟುತ್ತಿದೇವೆ. ನಾವುಗಳು ಕೃಷಿ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ಸ್ಥಾಪಿಸಬೇಕಾದರೆ ಎಪಿಎಂಸಿ ಇಲಾಖೆ ವತಿಯಿಂದ ಮೊದಲು ಗೋದಾಮುಗಳನ್ನು ನಿರ್ಮಿಸಿ ಕಾಳುಕಡಿಗಳನ್ನು ಸಂಗ್ರಹ ಮಾಡುವುದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎನ್ನುತ್ತಾರೆ ಜಾಗ ಖರೀದಿಸಿದ ವ್ಯಾಪಾರಸ್ಥರು.

ನರೇಗಲ್ಲ ಪಟ್ಟಣದಲ್ಲಿ ಎಪಿಎಂಸಿ ಮಾರುಕಟ್ಟೆ ನಿರ್ಮಿಸಿದರೆ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಕೂಡಲೇ ಜನಪ್ರತಿನಿಧಿಗಳು, ಎಪಿಎಂಸಿ ಜನಪ್ರತಿನಿಧಿಗಳು ಹಾಗೂ ಎಪಿಎಂಸಿ ಅಧಿಕಾರಿಗಳು ಇಲ್ಲಿನ ಉಪ ಕೃಷಿ ಉತ್ಪನ ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಅಂಗಡಿಗಳನ್ನು ನಿರ್ಮಿಸಿದರೆ ದೊಡ್ಡ ಪ್ರಮಾಣದ ಉಳಿತಾಯವಾಗುತ್ತದೆ.
ಪ್ರದೀಪ ಸಂಗನಾಳಮಠ,
ರೈತ

ಕಳೆದ ಮೂರು ವರ್ಷಗಳಿಂದ ಎಪಿಎಂಸಿಯಲ್ಲಿ ಈಗಾಗಲೇ ಒಂದು ಕೋಟಿ ಹತ್ತು ಲಕ್ಷ ರೂ. ಗಳನ್ನು ಎಪಿಎಂಸಿ ನಿಗಮ ಹಾಗೂ ಕೇಂದ್ರ ಸರ್ಕಾರದ ಅನುದಾನವನ್ನು ಬಳಕೆ ಮಾಡಿಕೊಂಡು ತಡೆಗೋಡೆ ಹಾಗೂ ಸಿಸಿ ರಸ್ತೆ, ಮುಚ್ಚು ಹರಾಜು ಮಾರುಕಟ್ಟೆ ಅಲ್ಲದೇ ಕಚೇರಿಗೆ ವಿದ್ಯುತ್‌ ಸರಬರಾಜು ಮತ್ತು ಸದ್ಯ ಗೈಟ್‌ ಮಾಡಲಾಗಿದೆ. ಅಲ್ಲದೇ ವ್ಯಾಪಾರಸ್ಥರನ್ನು ಕರೆದು ಸಭೆಯನ್ನು ಮಾಡಿ ವ್ಯಾಪಾರ ಮಳಿಗೆಯನ್ನು ನಿರ್ಮಿಸಿಕೊಂಡು ತಾವು ವಹಿವಾಟು ಮಾಡಬೇಕು. ತಮ್ಮಗೆ ಹೆಚ್ಚಿನ ಅನುಕೂಲ ಮಾಡಲು ನಾವು ಸಿದ್ಧರಾಗಿದ್ದೇವೆ.
ನಿಂಗನಗೌಡ ಲಕ್ಕನಗೌಡ್ರ
ಎಪಿಎಂಸಿ ಉಪಾಧ್ಯಕ್ಷ

ನರೇಗಲ್ಲ ಪಟ್ಟಣದಲ್ಲಿರವ ಎಪಿಎಂಸಿಯಲ್ಲಿ ನಿವೇಶನಗಳನ್ನು ಖರೀದಿ ಮಾಡಿಕೊಂಡ ವ್ಯಾಪಾರಸ್ಥರು ಕೂಡಲೇ ಅಂಗಡಿಗಳನ್ನು ನಿರ್ಮಿಸಿ ರೈತರಿಗೆ ಅನುಕೂಲ ಮಾಡಬೇಕು. ಅಲ್ಲದೇ ಎಪಿಎಂಸಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲು ಎಪಿಎಂಸಿ ಇಲಾಖೆ ಯೋಜನೆ ರೂಪಿಸಿದೆ.
ಶ್ರೀಧರ ಮಣ್ಣೊರ,
ಹೊಳೆಆಲೂರ ಎಪಿಎಂಸಿ
ಕಾರ್ಯದರ್ಶಿ

„ಸಿಕಂದರ ಎಂ. ಆರಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.