ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸಲು ಅಗತ್ಯ ಕ್ರಮ

Team Udayavani, Oct 4, 2019, 2:50 PM IST

gadaga-tdy-2

ಗದಗ: ಅ. 15ರ ವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದ್ದು, ಈ ಅವಧಿಯಲ್ಲಿ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮತದಾರರ ಪಟ್ಟಿ ಪರಿಶೀಲನೆ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಜಿಲ್ಲೆಯನ್ನು ಅಗ್ರಸ್ಥಾನಕ್ಕೆ ತರಲು ಭಾರತ ಚುನಾವನಾ ಆಯೋಗವು ಪರಿಚಯಿಸಿದ ವೋಟರ್‌ ಹೆಲ್ಪ್ ಲೈನ್‌ ಮೊಬೈಲ್‌ ಆ್ಯಪ್‌ ಉಪಯೋಗಿಸಿ ಜಿಲ್ಲೆಯನ್ನು ಅಗ್ರಸ್ಥಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸಲು, ಹೆಸರನ್ನು ತೆಗೆದು ಹಾಕಲು, ಪರಿಶೀಲನೆ ಮತ್ತು ದೃಢೀಕರಣ, ತಿದ್ದುಪಡಿಗಳಿಗಾಗಿ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಾಸ್‌ಪೋರ್ಟ್‌, ಚಾಲನಾ ಪರವಾನಗಿ, ಆಧಾರ್‌ ಪತ್ರ, ಪಡಿತರ ಚೀಟಿ, ಸರಕಾರಿ ಅರೆ ಸರಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್‌ ಪಾಸ್‌ ಬುಕ್‌, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ದಾಖಲೆಗಳನ್ನು ಇವುಗಳ ಪೈಕಿ ಒಂದನ್ನು ದಾಖಲೆ ರೂಪದಲ್ಲಿ ಮೊಬೈಲ್‌ ಆ್ಯಪ್‌ ಮೂಲಕ ಅಪ್‌ ಲೋಡ್‌ ಮಾಡಬಹುದಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿ.ಪಂ. ಸಿಇಓ ಡಾ| ಆನಂದ ಕೆ. ಮಾತನಾಡಿ, ವೋಟರ್‌ ಹೆಲ್ಪ್ಲೈನ್‌ ಮೊಬೈಲ್‌ ಆ್ಯಪನ್ನು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಪಡೆದುಕೊಂಡು, ಈಗಾಗಲೇ ನೋಂದಣಿಯಾಗಿರುವ ಮತದಾರರು ತಮ್ಮ ಹಾಗೂ ಕುಟುಂಬ ಸದಸ್ಯರುಗಳ ಹೆಸರು, ವಿಳಾಸ ಮತ್ತಿತರೆ ಮಾಹಿತಿ ಪರಿಶೀಲಿಸಿಕೊಳ್ಳಬೇಕು. ಆಯೋಗದ ವೆಬ್‌ಸೈಟ್‌ ಎನ್‌.ವಿ.ಎಸ್‌.ಪಿ ಪೋರ್ಟಲ್‌ ಮತದಾರರ ಸಹಾಯವಾಣಿ 1950, ಸಾಮಾನ್ಯ ಸೇವಾ ಕೇಂದ್ರ, ಮತದಾರ ನೋಂದಣಿ ಕಚೇರಿ, ಅಟಲ್‌ ಜನ ಸ್ನೇಹಿ ಕೇಂದ್ರ, ಗ್ರಾ.ಪಂ.ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ ಅಲ್ಲದೇ, ಮತಗಟ್ಟೆ ಅಧಿಕಾರಿ ಬಳಿ ಇರುವ ಮತದಾರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿಯರನ್ನು ಅಂಗನವಾಡಿ ಕಾರ್ಯಕರ್ತೆಯರನ್ನಾಗಿ ಬಡ್ತಿ ನೀಡುವ ಹಾಗೂ ಸೇವಾ ವೇತನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕಿ ಅಕ್ಕಮಹಾದೇವಿ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್‌, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.