ವಾಯುಪುತ್ರ ಹನುಮನಿಗೆ ಭಕ್ತಿ ಸಮರ್ಪಣೆ

Team Udayavani, Apr 20, 2019, 2:03 PM IST

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ಹನುಮ ಜಯಂತಿಯನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ವಿವಿಧಡೆ ಇರುವ ಮಾರುತಿ, ಆಂಜನೇಯ ದೇವಸ್ಥಾನಗಳಲ್ಲಿ ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸುವ ಮೂಲಕ ವಾಯು ಪುತ್ರ ಹನುಮನಿಗೆ ಭಕ್ತಿ ಸಮರ್ಪಿಸಿದರು.

ಅವಳಿ ನಗರದಲ್ಲಿರುವ ಆಂಜನೇಯ ದೇವಸ್ಥಾನಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಬಣ್ಣ ಬಣ್ಣದ ರಂಗೋಲಿಯ ಚಿತ್ತಾರ ಬಿಡಿಸಿ, ತಳಿರು-ತೋರಣಗಳನ್ನು ಕಟ್ಟಿ, ವಿದ್ಯುತ್‌ ದೀಪಗಳಿಂದ ದೇವಸ್ಥಾನಗಳನ್ನು ಶೃಂಗರಿಸಲಾಗಿತ್ತು.

ವಿವಿಧೆಡೆ ವಿಶೇಷ ಪೂಜೆ: ನಗರದ ಪುರಾತನ ಕಿಲ್ಲಾದ ಜೋಡಮಾರುತಿ ದೇವಸ್ಥಾನ, ವಿವೇಕಾನಂದ ನಗರದ ವೀರಾಂಜನೇಯ ದೇವಸ್ಥಾನ, ನರಸಾಪುರದ ಗುಂಡದ ಮಾರುತಿ ಗುಡಿ, ಗಾಂಧಿ  ನಗರದ ಮಾರುತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ರೈಲ್ವೆ ನಿಲ್ದಾಣ ಸಮೀಪದ ಮಾರುತಿ ಮಂದಿರ, ಹುಡ್ಕೊ ಬಡಾವಣೆಯ ಬಯಲು ಆಂಜನೇಯ ದೇವಸ್ಥಾನ, ಶರಣಬಸವೇಶ್ವರ ನಗರದ ಆಂಜನೇಯ ಗುಡಿ, ಹಾತಲಗೇರಿ ನಾಕಾದ ಮಾರುತಿ ದೇವಸ್ಥಾನಗಳಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಬೆಳಗ್ಗೆಯಿಂದಲೇ ವೀರಾಂಜನೇಯನಿಗೆ ಮಹಾ ರುದ್ರಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ-ಹವನ ನೆರವೇರಿಸಿ, ಇಷ್ಟಾರ್ಥಿಗಳ ಸಿದ್ಧಿಗೆ ಪ್ರಾರ್ಥಿಸಿದರು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥದೊಂದಿಗೆ ನಾಡಿನ ಸಮೃದ್ಧಿಗೆ ಪ್ರಾರ್ಥಿಸಲಾಯಿತು.

ಹನುಮನ ತೊಟ್ಟಿಲೋತ್ಸವ: ಬೆಳಗ್ಗೆಯಿಂದಲೇ ಭಕ್ತರು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ತೆರಳಿ ಹೂ-ಹಣ್ಣು, ಕಾಯಿ ಅರ್ಪಿಸಿದರು. ಸುಮಂಗಲೆಯರು ಭಕ್ತರು ಬಾಲ ಹನುಮನನ್ನು ತೊಟ್ಟಿಲಿಗೆ ಹಾಕಿ ತೂಗಿದರು. ನಾಮಕರಣ
ಮಾಡಿ, ಸಂಭ್ರಮಿಸಿದರು. ಮಧ್ಯಾಹ್ನ ದೇವಸ್ಥಾನಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಬಾಲ ಮಾರುತಿಯನ್ನು ತೊಟ್ಟಿಲಿಗೆ ಹಾಕಿ, ಜೋಗುಳ ಗೀತೆಗಳನ್ನು ಹಾಡಿದರು.

ಉತ್ಸಾಹದಿಂದ ತೊಟ್ಟಿಲು ತೂಗಿ ಕೃತಾರ್ಥರಾದರು. ಮಧ್ಯಾಹ್ನ ಇಲ್ಲಿನ ಜೋಡ ಹನುಮಂತನ ದೇವಸ್ಥಾನ ಸೇರಿದಂತೆ ವಿವಿಧಡೆ ಭಕ್ತಾಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಗದಗ: ಮಹಾಮಾರಿ ಕೋವಿಡ್ 19 ತಡೆಗಾಗಿ ದೇಶದಲ್ಲಿ ಲಾಕ್‌ಡೌನ್‌ ಜಾರಿ ಮಾಡಿ ಐದು ದಿನಗಳಾದರೂ ಜಿಲ್ಲೆಯಲ್ಲಿ ಅದರ ಗಂಭೀರತೆ ಕಾಣುತ್ತಿಲ್ಲ. ಅನಗತ್ಯವಾಗಿ ಅಲೆದಾಡುವವರ...

  • ಗದಗ: ಕೋವಿಡ್ 19 ಬಗ್ಗೆ ಜಿಲ್ಲೆಯಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿದೆ. ಆದರೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಈ ಬಗ್ಗೆ ಗಂಭೀರತೆ...

  • ಲಕ್ಷ್ಮೇಶ್ವರ: ಕೋವಿಡ್ 19 ವೈರಸ್‌ ಹರಡದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಾಲೂಕಾಡಳಿತ ಕಟ್ಟಿನಿಟ್ಟಿನ ಕ್ರಮಕೈಗೊಳ್ಳುತ್ತಿದ್ದರೂ ಜನರ ಅಸಹಕಾರ ಮುಂದುವರಿದಿದ್ದು,...

  • ಗದಗ: ಕೋವಿಡ್ 19 ವೈರಾಣು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಲಾಕ್‌ಡೌನ್‌ಗೆ ಜಿಲ್ಲೆಯ ಜನತೆ ದಿನದಿಂದ ದಿನಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ....

  • ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ಥಳೀಯ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಕ್ರಿಮಿನಾಶಕ ಸಿಂಪಡಿಸಲಾಯಿತು. ಕೋವಿಡ್ 19 ವೈರಸ್‌ ಸೋಂಕಿತರು ಜಿಲ್ಲೆಗೆ...

ಹೊಸ ಸೇರ್ಪಡೆ