ಆಪರೇಷನ್‌ ಹಸ್ತ ಭೀತಿ: ಬಿಜೆಪಿ ಪ್ರವಾಸ

ರವಿವಾರ ಉತ್ತರ ಭಾರತದ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.

Team Udayavani, Jan 8, 2022, 5:05 PM IST

ಆಪರೇಷನ್‌ ಹಸ್ತ ಭೀತಿ: ಬಿಜೆಪಿ ಪ್ರವಾಸ

ಗದಗ: ನಗರಸಭೆಯಲ್ಲಿ ಆಪರೇಷನ್‌ “ಹಸ್ತ’ ಭೀತಿ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ದುಡಿದವರಿಗೆ ಪ್ರವಾಸ ಭಾಗ್ಯ ಕಲ್ಪಿಸಿದೆ.

ಗುರುವಾರ ರಾತ್ರಿ ನಗರದ ಸಂಸದರ ಜನ ಸಂಪರ್ಕ ಕಾರ್ಯಾಲಯದ ಮೂಲಕ ಐಷಾರಾಮಿ ಬಸ್‌ಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಜನರನ್ನು ಮೂರು ದಿನಗಳ ಪ್ರವಾಸಕ್ಕೆ ಕರೆದೊಯ್ಯಲಾಗಿದೆ.

ಬಿಜೆಪಿ ಮುಖಂಡ ಅನಿಲ್‌ ಮೆಣಸಿನಕಾಯಿ, ಎಂ.ಎಸ್‌.ಕರಿಗೌಡ್ರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಬೆಂಗಳೂರು ತಲುಪಿರುವ ಬಿಜೆಪಿ ಮುಖಂಡರ ತಂಡ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಬೆಳಗ್ಗೆ 9.20ಕ್ಕೆ ಆಸ್ಸಾಂನ ಗುವಾಹಟಿಗೆ ಪ್ರಯಾಣ ಬೆಳೆಸಿದೆ. ಶನಿವಾರ ಆಸ್ಸಾಂನ ಕಾಮಾಕ್ಯ ದೇವಿ ದರ್ಶನ ಪಡೆಯಲಿದ್ದು, ಬಳಿಕ ರವಿವಾರ ಉತ್ತರ ಭಾರತದ ಹಲವು ಧಾರ್ಮಿಕ ಹಾಗೂ ಪ್ರವಾಸಿ
ತಾಣಗಳಿಗೆ ಭೇಟಿ ನೀಡಲಿದ್ದಾರೆ.

ಆಪರೇಷನ್‌ “ಹಸ್ತ’ ಆತಂಕ: ಇತ್ತೀಚೆಗೆ ನಡೆದ ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡ್‌ಗಳ ಪೈಕಿ ಬಿಜೆಪಿ 18, ಕಾಂಗ್ರೆಸ್‌ 15 ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಈ ಪೈಕಿ ಪಕ್ಷೇತರರು ಕಾಂಗ್ರೆಸ್‌ ಪರ ಒಲವು ಹೊಂದಿದ್ದಾರೆ. ಅಲ್ಲದೇ, ಸ್ಥಳೀಯ ಶಾಸಕರ ಮತ ಸೇರಿದರೆ ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲ ಸಾಧಿ ಸಿದಂತಾಗುತ್ತದೆ.

ಬಿಜೆಪಿಯಿಂದ ಯಾರಾದರೂ ಕಾಂಗ್ರೆಸ್‌ ಪರ ವಾಲಿದರೆ ಬಿಜೆಪಿಗೆ ಅಧಿಕಾರ ಕೈ ತಪ್ಪಲಿದೆ ಎಂಬ ಆತಂಕವೂ ಪಕ್ಷದ ಮುಖಂಡರನ್ನು ಕಾಡುತ್ತಿದೆ. ಇದೇ ಕಾರಣದಿಂದ ಬಿಜೆಪಿ ತನ್ನ ಸದಸ್ಯರನ್ನು ಹಿಡಿದಿಟ್ಟುಕೊಳ್ಳುವ ಹಾಗೂ ಚುನಾವಣೆಯಲ್ಲಿ ಪಕ್ಷದ ಪರವಾಗಿ ಶ್ರಮಿಸಿದ ಪ್ರಮುಖರನ್ನು ಖುಷಿಪಡಿಸುವ ಉದ್ದೇಶದಿಂದ ಪ್ರವಾಸ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ನಗರಸಭೆಯನ್ನು ಗೆದ್ದಿರುವ ಸಂಭ್ರಮಾಚರಣೆಗಾಗಿ ಸದಸ್ಯರು ಪ್ರವಾಸ ಕೈಗೊಂಡಿದ್ದಾರೆಯೇ ಹೊರತು, ಆಪರೇಷನ್‌ ಕಾಂಗ್ರೆಸ್‌ ಆತಂಕದಿಂದಲ್ಲ. ಎಲ್ಲ ಬಿಜೆಪಿ ಸದಸ್ಯರು ಪಕ್ಷದ ಪರವಾಗಿಯೇ ಇದ್ದಾರೆ. ಅವರನ್ನು ಹಿಡಿದುಟ್ಟುಕೊಳ್ಳುವ ಅಗತ್ಯವೂ ಇಲ್ಲ. ಈ ಪ್ರವಾಸಕ್ಕೆ ಪಕ್ಷದಿಂದ ಯಾವುದೇ ರೀತಿಯಲ್ಲಿ ಆರ್ಥಿಕ ನೆರವು ನೀಡಿಲ್ಲ. ಮೂರು ದಿನಗಳ ಪ್ರವಾಸ ಮಾಡಿ ವಾಪಸ್ಸಾಗಲಿದ್ದಾರೆ.
ಮೋಹನ ಮಾಳಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.