ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್‌ ಕಾಯ್ದೆ ವಿರೋಧಿಸಿ ಧರಣಿ

Team Udayavani, Jan 26, 2020, 3:42 PM IST

gadaga-tdy-3

ಗದಗ: ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆಗಳು ಜನವಿರೋಧಿಯಾಗಿದ್ದು, ಕೂಡಲೇ ಅವುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಘಟಕದಿಂದ ಜಿಲ್ಲಾಡಳಿತದ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು.

ಈ ಕುರಿತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ, ಸಿಎಎ ತಿದ್ದುಪಡಿ ಕಾಯ್ದೆ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತದೆ. ಅನುಚ್ಛೇದ 14ರ ಅನುಸಾರ ಕಾನೂನಿನಡಿ ಎಲ್ಲರೂ ಸಮಾನರು.ಆದರೆ, ಈ ಕಾಯ್ದೆಯಿಂದ ಸಮಾನತೆಯ ಹಕ್ಕಿಗೆ ಚ್ಯುತಿಯಾಗುತ್ತದೆ. ಭಾರತದ ನೆರೆ ದೇಶಗಳಾದ ಪಾಕಿಸ್ತಾನದಲ್ಲಿ ಅಹ್ಮದೀಯರು, ಶ್ರೀಲಂಕಾದಲ್ಲಿತಮಿಳರು, ಮಯನ್ಮಾರನಲ್ಲಿ ರೋಹಿಂಗ್ಯಾ,ಅಫ್ಘಾನಿಸ್ಥಾನದಲ್ಲಿ ಹಜಾರ ಸಮುದಾಯಗಳು ಅಲ್ಪಸಂಖ್ಯಾತರಾಗಿದ್ದು, ಅವರನ್ನು ಪರಿಗಣಿಸಿಲ್ಲ.ಇದರಿಂದಾಗಿ ಅಕ್ರಮ ವಲಸಿಗರಿಗೆ ಪೌರತ್ವದೊರೆಯದೇ ನಿರಾಶ್ರಿತರ ಶಿಬಿರಗಳಲ್ಲಿ ನರಳುವಂತಾಗುತ್ತದೆ ಎಂದು ದೂರಿದರು. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳಲ್ಲಿ ಧರ್ಮದ ಕಾರಣಕ್ಕೆ ದೌರ್ಜನ್ಯಕ್ಕೆ ಒಳಗಾದವರು ಎಂದು ಸಿಎಎ ಕಾಯ್ದೆಯಲ್ಲಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ.

ಆದರೆ ಬಹಿರಂಗವಾಗಿ ಮೋದಿ, ಅಮಿತ್‌ ಶಾ ಮತ್ತು ಬಿಜೆಪಿಯವರು ಧರ್ಮದ ಕಾರಣಕ್ಕೆ ದೌರ್ಜನ್ಯಕ್ಕೆ ಒಳಗಾದವರು ಎಂದು ತಪ್ಪಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಸಿಎಎ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ.  ಆದರೆ ಎನ್‌ಆರ್‌ಸಿ ಮೂಲಕ ಇಲ್ಲಿ ನೂರಾರು ವರ್ಷಗಳಿಂದ ಬದುಕಿರುವ ತಳ ಸಮುದಾಯಗಳು, ಮುಸ್ಲಿಮರು, ಆದಿವಾಸಿಗಳು, ಅಲೆಮಾರಿಗಳ ಪೌರತ್ವವನ್ನು ಕಸಿದುಕೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಮಾನವಿಯತೆ ವಿರೋಧಿಯಾದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಎನ್ನುವ ಕರಾಳ ಶಾಸನಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾಗರಾಜ ಗೋಕಾವಿ, ಮುತ್ತಪ್ಪ ಭಜಂತ್ರಿ, ಪ್ರಕಾಶ ಕಲ್ಲೇಕನವರ, ಪ್ರಕಾಶ ಕಮಡೊಳ್ಳಿ, ಬಸವರಾಜ ಈರಣ್ಣವರ, ಎಲ್‌. ನಾರಾಯಣಸ್ವಾಮಿ, ವಿಜಯ ಮುಳಗುಂದ,ವಿಜಯ ಕಲ್ಮನಿ, ದೇವಪ್ಪ ಲಿಂಗದಾಳ, ಮಾರುತಿ ಅಂಗಡಿ, ಕೆಂಚಪ್ಪ ಮ್ಯಾಗೇರಿ, ಚಂದ್ರು ಹರಿಜನ, ಶರೀಫ ಬಿಳೆಯಲಿ, ಪರಶುರಾಮ ಕಾಳೆ, ಯೂಸೂಫ್‌ ನಮಾಜಿ, ಶಾಕೀರ್‌ ಕಾತರಕಿ, ಇಸ್ಮಾಯಿಲ್‌ ಡಂಬಳ, ಮುನ್ನಾ ರೇಶ್ಮಿ, ದ್ಯಾಮಣ್ಣ ಬಿಂಕದಕಟ್ಟಿ, ಮಂಜು ಲಿಂಗದಾಳ, ಮಹಮ್ಮದ್‌ ಶಾಲಗಾರ, ಸುಧೀರ ಬಿಜಾಪುರ, ದಾವಲ್‌ ಮುಳಗುಂದ, ಶೌಕತಅಲಿ ಕಾತರಕಿ, ಅಕºರಸಾಬ್‌ ಬಬರ್ಚಿ, ಬರಕತಅಲಿ ಮುಲ್ಲಾ ಇದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.