ಜನರ ಸಮಸ್ಯೆ ಆಲಿಸಲು ಜನಸಂಪರ್ಕ ಕಚೇರಿ

ಈಗಾಗಲೇ ಪಕ್ಷ ಸಂಘಟನೆಗಾಗಿ ಮೊಬೈಲ್‌ ಆ್ಯಪ್‌ ಮೂಲಕ ಸದಸ್ಯತ್ವ ನೋಂದಣಿ ಆರಂಭಿಸಲಾಗಿದೆ

Team Udayavani, Feb 3, 2022, 6:13 PM IST

ಜನರ ಸಮಸ್ಯೆ ಆಲಿಸಲು ಜನಸಂಪರ್ಕ ಕಚೇರಿ

ಗದಗ: ಈ ಬಾರಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಅತ್ಯಲ್ಪ ಮತಗಳೊಂದಿಗೆ ಕಾಂಗ್ರೆಸ್‌ ಜಯ ಗಳಿಸಲಿದೆ ಎಂಬ ರಾಜಕೀಯ ವಿರೋಧಿಗಳ ಲೆಕ್ಕಾಚಾರವನ್ನು ಸಲೀಂ ಅಹ್ಮದ್‌ ಅವರು ತಲೆ ಕೆಳಗಾಗಿಸಿ, ಅತೀ ಹೆಚ್ಚು ಪ್ರಥಮ ಪ್ರಾಶಸ್ತ್ಯದ ಮತಗಳೊಂದಿಗೆ ಜಯಭೇರಿ ಬಾರಿಸಿದ್ದಾರೆ. ಈ ಭಾಗದ ಜನರ ದುಃಖ, ದುಮ್ಮಾನ ಹಾಗೂ ಸಮಸ್ಯೆಗಳನ್ನು ಆಲಿಸಲು ಜನ ಸಂಪರ್ಕ ಕಾರ್ಯಾಲಯ ಆರಂಭಿಸಿರುವುದು ಸ್ವಾಗತಾರ್ಹ ಎಂದು ಕಾಂಗ್ರೆಸ್‌ ಹಿರಿಯ ನಾಯಕ
ಹಾಗೂ ಶಾಸಕ ಎಚ್‌.ಕೆ.ಪಾಟೀಲ ಹೇಳಿದರು.

ನಗರದ ಭೀಷ್ಮ ಕೆರೆ ರಸ್ತೆಯಲ್ಲಿ ಆರಂಭಿಸಲಾದ ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಅವರ ಜನಸಂಪರ್ಕ ಕಾರ್ಯಾಲಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಬಾರಿ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವಿವಿಧ ರಾಜಕೀಯ ಪಕ್ಷಗಳ ನಾಯಕರು ಹೇಳಿಕೊಳ್ಳುತ್ತಿದ್ದರು. ಆದರೆ, ವಿಧಾನ ಪರಿಷತ್‌ ಚುನಾವಣಾ ಫಲಿತಾಂಶದ ಬಳಿಕ ಜಿಲ್ಲೆಯ ಗ್ರಾಪಂಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರ ಸಂಖ್ಯೆ ಎಷ್ಟಿದೆ ಎಂಬುದು ಸ್ಪಷ್ಟವಾಗಿದೆ. ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಎಸ್‌.ಪಾಟೀಲ್‌ ಹಾಗೂ ಮಾಜಿ ಶಾಸಕ ಡಿ.ಆರ್‌.ಪಾಟೀಲ್‌ ಅವರ ನೇತೃತ್ವದಲ್ಲಿ ನಡೆದ
ಸಂಘಟಿತ ಹೋರಾಟದ ಫಲವಾಗಿ ಸಲೀಂ ಅಹ್ಮದ್‌ ಅವರಿಗೆ ಹೆಚ್ಚಿನ ಮತಗಳು ಬಂದಿವೆ ಎಂದರು.

ಈ ಹಿಂದೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸಲೀಂ ಅಹ್ಮದ್‌ ಅವರು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕೆಲಸ ಮಾಡಿದ್ದರು. ಆಗ ನಮ್ಮಿಬ್ಬರ ಮಧ್ಯೆ ಗ್ರಾಮೀಣಾಭಿವೃದ್ಧಿ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿತ್ತು. ದೇಶದ ಗ್ರಾಮೀಣಾಭಿವೃದ್ಧಿ, ಅಲ್ಪಸಂಖ್ಯಾತರು, ದೀನ ದಲಿತರು ಹಾಗೂ ಹಿಂದುಳಿದವರ ಬಗ್ಗೆ ಸಲೀಂ ಅಹ್ಮದ್‌ ಅವರು ಹೆಚ್ಚಿನ ಕಾಳಜಿ ಹೊಂದಿದ್ದಾರೆ. ಈ ಬಾರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಧ್ವನಿಯನ್ನು ಗಟ್ಟಿಗೊಳಿಸುವ ಮೂಲಕ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅ ಧಿಕಾರಕ್ಕೆ ಬರುವಂತೆ ಮಾಡಲಾಗುತ್ತದೆ. ಕಾಂಗ್ರೆಸ್‌ ಅ ಧಿನಾಯಕಿ ಸೋನಿಯಾ ಗಾಂಧಿ , ಯುವ ನಾಯಕ ರಾಹುಲ್‌ ಗಾಂಧಿ  ಅವರ ಕೈ ಬಲಪಡಿಸಲಾಗುತ್ತದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ಮಾತನಾಡಿ, ಗದಗ ಜಿಲ್ಲೆಯ ಜನರ ಕುಂದುಕೊರತೆಗಳನ್ನು ಆಲಿಸಲು, ಜನರ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಸ್ಪಂದಿಸುವ ಸಲುವಾಗಿ ಗದಗ, ಹುಬ್ಬಳ್ಳಿ ಹಾಗೂ ಹಾವೇರಿಯಲ್ಲೂ ಜನಸಂಪರ್ಕ ಕಾರ್ಯಾಲಯ ಆರಂಭಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಅನಗತ್ಯ ಅಲೆದಾಟ ತಪ್ಪಲಿದೆ ಎಂದರು.

ಈಗಾಗಲೇ ಪಕ್ಷ ಸಂಘಟನೆಗಾಗಿ ಮೊಬೈಲ್‌ ಆ್ಯಪ್‌ ಮೂಲಕ ಸದಸ್ಯತ್ವ ನೋಂದಣಿ ಆರಂಭಿಸಲಾಗಿದೆ. 1000 ಮತದಾರರಿರುವ ಬೂತ್‌ ಮಟ್ಟದಿಂದ ಕೇಡರ್‌ ಬೇಸ್ಡ್ ಕಾರ್ಯಕರ್ತರ ಸಂಘಟನೆಗೆ ಒತ್ತು ನೀಡಲು ಉದ್ದೇಶಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬಹು ಚುರುಕಿನಿಂದ ಸದಸ್ಯತ್ವ ನಡೆಯುತ್ತಿದೆ. ಗದಗ ಜಿಲ್ಲೆಯಲ್ಲೂ ಸದಸ್ಯತ್ವ ನೋಂದಣಿಯನ್ನು ತೀವ್ರಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಪಕ್ಷದ ವಿವಿಧ ಘಟಕಗಳು, ಸಕ್ರಿಯ ಕಾರ್ಯಕರ್ತರಿಗೆ ಹೊಣೆ ನೀಡಲಾಗುವುದು ಎಂದು ವಿವರಿಸಿದರು.

ಅದರೊಂದಿಗೆ ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ ಕೇಂದ್ರ ಹಾಗೂ ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರ ವಿಫಲ್ಯ, ಶೇ.40 ರಷ್ಟು ಕಮಿಷನ್‌, ಭ್ರಷ್ಟಾಚಾರವನ್ನು ಸಾರ್ವಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಮುಂಬರುವ ಜಿಪಂ, ತಾಪಂ ಹಾಗೂ ಶಾಸನಸಭೆಗಳ ಚುನಾವಣೆಗೂ ಸಿದ್ಧತೆ ನಡೆಸಲಾಗುವುದು ಎಂದು ಹೇಳಿದರು. ವೇದಿಕೆ ಮೇಲೆ ಮಾಜಿ ಶಾಸಕರಾದ ಡಿ.ಆರ್‌ .ಪಾಟೀಲ್‌, ಶ್ರೀಶೈಲಪ್ಪ ಬಿದರೂರ, ಎನ್‌.ಎಚ್‌. ಕೋನರೆಡ್ಡಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌ .ಪಾಟೀಲ್‌, ನಗರಸಭೆ ಸದಸ್ಯ ಸುರೇಶ್‌ ಕಟ್ಟಮನಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.