ಪ್ಲಾಸ್ಟಿಕ್ ಸಂಗ್ರಹ ಜನ ಜಾಗೃತಿ: ಡಿಸಿ ಜೋಳಿಗೆ ಅಭಿಯಾನ

Team Udayavani, Oct 2, 2019, 10:25 PM IST

ಗದಗ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಹೆಗಲಿಗೆ ಜೋಳಿಗೆ ಹಾಕಿ, ಸಾರ್ವಜನಿಕರಿಂದ ಪ್ಲಾಸ್ಟಿಕ್ ಸಂಗ್ರಹಿಸುವ ಜನ ಜಾಗೃತಿಗಾಗಿ ಮೂಲಕ ವಿಭಿನ್ನ ಪ್ರಯತ್ನ ನಡೆಸಿದರು.

ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಹಾಗೂ ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್ ಎಸ್.ಎನ್., ಪೌರಾಯುಕ್ತ ಮನ್ಸೂರ್ ಅಲಿ, ಪರಿಸರ ಅಭಿಯಂತರರು ಸೇರಿದಂತೆ ಅನೇಕರು ಜೋಳಿಗೆ ಹಾಕುವ ಮೂಲಕ ಕಾಲೇಜು ಆವರಣದಲ್ಲಿ ಹಾಗೂ ನಗರದ ವಿವಿಧೆಡೆ ಬೀಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಜೋಳಿಗೆಗೆ ಹಾಕಿಕೊಂಡರು.

ಇದೇ ವೇಳೆ ವರ್ತಕರು, ಅಂಗಡಿಕಾರರಲ್ಲಿದ್ದ ಅಳಿದುಳಿದ ಪ್ಲಾಸ್ಟಿಕ್ ಚೀಲಗಳನ್ನು ತಮ್ಮ ಜೋಳಿಗೆಗೆ ಹಾಕಿಕೊಳ್ಳುವ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ನಗರಸಭೆಯ ಪರಿಸರ ಅಭಿಯಂತರ ಗಿರೀಶ ತಳವಾರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ವಿವಿಧ ಶಾಲಾ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ