ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ

Team Udayavani, Nov 19, 2019, 4:18 PM IST

gadaga-tdy-2

ಗದಗ: ಪ್ಲಾಸ್ಟಿಕ್‌ ಮುಕ್ತ ಭಾರತ ಅಭಿಯಾನ ಅಂಗವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್‌ ಕವರ್‌ ಹಾಗೂ ಪ್ಲಾಸ್ಟಿಕ್‌ ಪೇಪರ್‌ ಮಾರಾಟ ಸಂಪೂರ್ಣ ನಿಷಿದ್ಧವಾಗಿದೆ.ಆದರೆ, ಅವಳಿ ನಗರ ಹಾಗೂ ಜಿಲ್ಲೆಯ ವಿವಿಧೆಡೆ ನಡೆಯುವ ಶುಭ ಸಮಾರಂಭ, ಎಗ್‌ ರೈಸ್‌ ಅಂಗಡಿ, ಸಣ್ಣ-ಪುಟ್ಟ ಹೋಟೆಲ್‌ಗ‌ಳಲ್ಲಿ ಆಹಾರ ಮೂಲಕ ವಿಷ ಉಣಿಸುವ ಕಾರ್ಯ ಮುಂದುವರಿದಿದೆ.

ಅವಳಿ ನಗರದಲ್ಲಿ ಪ್ಲಾಸ್ಟಿಕ್‌ ನಿಷೇಧಗೊಂಡಿದೆ. ಪ್ಲಾಸ್ಟಿಕ್‌ ಬಳಕೆ ವೇಳೆ ಸಿಕ್ಕಿ ಬಿದ್ದರೆ ಸಾವಿರಾರು ರೂ. ದಂಡ ವಿಧಿಸುವ ಸಾಧ್ಯತೆಯಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಬಗ್ಗೆ ವಿವಿಧ ಕ್ಯಾಟರಿಂಗ್‌ ಗುತ್ತಿಗೆದಾರರು ಕಿವಿಗೊಡುತ್ತಿಲ್ಲ.

ನಾನಾ ರೀತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ಮುಂದುವರಿಸಿದ್ದಾರೆ. ಮದುವೆ, ಆರಕ್ಷತೆ, ನಿಶ್ಚಿತಾರ್ಥ ಹಾಗೂ ಹುಟ್ಟುಹಬ್ಬ ಸಮಾರಂಭಗಳಲ್ಲಿ ಊಟ ಪೂರೈಕೆ ಗುತ್ತಿಗೆ ಪಡೆದಿರುವ ಕ್ಯಾಟರಿಂಗ್‌ ಸಂಸ್ಥೆಗಳು, ಪ್ಲಾಸ್ಟಿಕ್‌ ಪೇಪರ್‌ಗಳಲ್ಲಿ ಹೋಳಿಗೆಯನ್ನು ಪ್ಯಾಕಿಂಗ್‌ ಮಾಡಿ ಪೂರೈಸುತ್ತಿರುವುದು ಕಂಡುಬರುತ್ತಿದೆ. ಅದರೊಂದಿಗೆ ಕುಡಿಯುವ ನೀರು, ಟೀ-ಕಾಫಿ ಹಾಗೂ ಜ್ಯೂಸ್‌ಗಳನ್ನು ಪ್ಲಾಸ್ಟಿಕ್‌ ಗ್ಲಾಸ್‌ಗಳಲ್ಲಿ ಸರಬರಾಜು ಮಾಡುತ್ತಿದ್ದಾರೆ. ಈ ಕುರಿತು ಪ್ರಶ್ನಿಸಿದರೆ, “ಪ್ಲಾಸ್ಟಿಕ್‌ ಬ್ಯಾನ್‌ ಆಗಿದೆ ನಿಜ. ಆದರೆ, ಈ ಹಿಂದೆ ಬಲ್ಕ್ ಆಗಿ ತೆಗೆದುಕೊಂಡಿದ್ದ ಪ್ಲಾಸ್ಟಿಕ್‌ ಪೇಪರ್‌ ಹಾಗೂ ಗ್ಲಾಸ್‌ಗಳನ್ನೇ ಬಳಕೆ ಮಾಡುತ್ತಿದ್ದೇವೆ. ಅವುಖಾಲಿಯಾಗುತ್ತಿದ್ದಂತೆ ಪೇಪರ್‌ನಿಂದ ತಯಾರಿಸಿದ ಪ್ಲೇಟ್‌, ಗ್ಲಾಸ್‌ಗಳನ್ನು ಬಳಸುತ್ತೇವೆ. ಕಾನೂನು ಜೊತೆಗೆ ನಮ್ಮ ಹೊಟ್ಟೆ ಪಾಡು ನೋಡಿಕೊ ಬೇಕಲ್ವಾ ಸರ್‌’ ಎಂದು ಕ್ಯಾಟರಿಂಗ್‌ ಉಸ್ತುವಾರಿಗಳು ಜಾರಿಕೊಳ್ಳುತ್ತಾರೆ.  ಇನ್ನು, ಸಭೆ- ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರಿರುವುದರಿಂದ ಯಾರೂ ಚರ್ಚೆ ಬೆಳೆಸುವುದಿಲ್ಲ. ಹೀಗಾಗಿ ಕ್ಯಾಟರಿಂಗ್‌ ಆಹಾರ ಪೂರೈಕೆದಾರರು ನಿರಾತಂಕವಾಗಿ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದಾರೆ.

ಗ್ರಾಹಕರ ಸ್ಥಿತಿ ಬೆಂಕಿಯಿಂದ ಬಾಣಲಿಗೆ: ಅವಳಿ ನಗರದ ಪ್ರತಿಯೊಂದು ರಸ್ತೆಗಳಲ್ಲಿ ಇಡ್ಲಿ ಸೆಂಟರ್‌ ಹಾಗೂ ಎಗ್‌ರೈಸ್‌ ಸೆಂಟರ್‌ಗಳು ಕಾಣಸಿಗುತ್ತವೆ. ಪ್ಲಾಸ್ಟಿಕ್‌ ನಿಷೇಧದ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಹೋಟೆಲ್‌ ಗಳಲ್ಲಿ, ರಸ್ತೆ ಬದಿಯ ಎಗ್‌ರೈಸ್‌ ಸೆಂಟರ್‌ಗಳಲ್ಲಿ ಇಡ್ಲಿ, ವಡಾ, ಬಜಿ, ಮಿರ್ಚಿ ಗಾಡಿಗಳಲ್ಲಿ ಬಹುತೇಕ ಪ್ಲಾಸ್ಟಿಕ್‌ ಪೇಪರ್‌ ಬಳಕೆ ಕೈಬಿಡಲಾಗಿದೆ. ಇದೀಗ ಪ್ಲಾಸ್ಟಿಕ್‌ ಪೇಪರ್‌ ಬದಲಾಗಿ ಹಳೇ ರದ್ದಿ ಪೇಪರಲ್ಲಿ ನೀಡುತ್ತಿದ್ದಾರೆ. ದೊಡ್ಡ ಹೋಟೆಲ್‌ಗ‌ಳಿಗೆ ಹೋದರೆ ನೂರಾರು ರೂ.ಗಳು ಖರ್ಚಾಗುತ್ತದೆ ಎಂಬ ಕಾರಣಕ್ಕೆ ಕೂಲಿ ಕಾರ್ಮಿಕರು, ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿಗಳು ತಮ್ಮ ಹಸಿವು ನೀಗಿಸಿಕೊಳ್ಳಲು ಸಹಜವಾಗಿ ಬೀದಿ ಬದಿಯ ಹೋಟೆಲ್‌ಗ‌ಳಿಗೆ ಮೊರೆ ಹೋಗುತ್ತಾರೆ. ಆಹಾರ ಪದಾರ್ಥಗಳೊಂದಿಗೆ ಚಟ್ನಿ, ಸಾಂಬಾರನ್ನು ಹಾಕುತ್ತಿರುದರಿಂದ ರದ್ದಿ ಪೇಪರ್‌ ನಲ್ಲಿರುವ ರಾಸಾನಿಯಕ ವಿಷ ನೇರವಾಗಿ ಹೊಟ್ಟೆ ಸೇರುತ್ತಿದೆ. ಇದರಿಂದಾಗಿ ಗ್ರಾಹಕರ ಸ್ಥಿತಿ ಬೆಂಕಿಯಿಂದ ಬಾಣಲಿಗೆ ಬಿದ್ದಂತಾಗಿದೆ ಎಂಬುದು ಸಾರ್ವಜನಿಕರ ದೂರು.

ಈ ಬಗ್ಗೆ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಪ್ಲಾಸ್ಟಿಕ್‌ ಹಾಗೂ ರದ್ದಿ ಪೇಪರ್‌ಗಳನ್ನು ಬಳಕೆ ಕೈಬಿಟ್ಟು, ಬಾಳೆ, ಅಡಿಕೆ ಎಲೆಗಳಲ್ಲಿ ಪೂರೈಸುವಂತೆ ಕ್ರಮ ಜರುಗಿಸಬೇಕಿದೆ. ಜೊತೆಗೆ ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕಿದೆ.

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.