ಹದಗೆಟ್ಟ ಗಜೇಂದ್ರಗಡ ಇಳಕಲ್ಲ ರಾ.ಹೆದ್ದಾರಿ


Team Udayavani, Jul 12, 2019, 9:19 AM IST

gadaga-tdy-1..

ಗಜೇಂದ್ರಗಡ: ಗುಂಡಿಯಲ್ಲಿ ತೊಳಲಾಡುತ್ತಾ ಬರುತ್ತಿರುವ ವಾಹನಗಳು.

ಗಜೇಂದ್ರಗಡ: ಗಜೇಂದ್ರಗಡ-ಇಳಕಲ್ಲಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿ ತುಂಬೆಲ್ಲಾ ತೆಗ್ಗು ದಿನ್ನೆಗಳ ತುಂಬಿವೆ. ಇದರ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಾತ್ಕಾಲಿಕ ದುರಸ್ತಿಗೆ ಮುಂದಾಗದೇ ಶಾಶ್ವತ ಪರಿಹಾರಕ್ಕೆ ಕ್ರಮ ಜರುಗಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಪಟ್ಟಣದಿಂದ ಕುಂಟೋಜಿಗೆ ತೆರಳುವ ರಸ್ತೆ ಡಾಂಬರ್‌ ಕಿತ್ತು ದೊಡ್ಡ, ದೊಡ್ಡ ತೆಗ್ಗುಗಳು ನಿರ್ಮಾಣವಾಗಿವೆ. ಹೀಗಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಕಷ್ಟ ಪಡುತ್ತಿದ್ದಾರೆ. ಈಗಾಗಲೇ ಈ ಹೆದ್ದಾರಿಯಲ್ಲಿ ಸಂಚರಿಸಿದ ಎಷ್ಟೋ ಬೈಕ್‌ ಸವಾರರು ಹೊಂಡದ ಸ್ವರೂಪ ತೆಗ್ಗು ದಿನ್ನೆಯಲ್ಲಿ ಬಿದ್ದು ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ಜತೆಗೆ ಕೆಲ ವಾಹನಗಳು ದುರಸ್ತಿಗೆ ಒಳಪಟ್ಟಿವೆ. ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದರೂ ಯಾರೂ ಕೇಳುವರಿಲ್ಲದಂತಾಗಿದೆ ಎನ್ನುವುದು ವಾಹನ ಸವಾರರ ಅಳಲಾಗಿದೆ.

ಕುಂಟೋಜಿ, ಮ್ಯಾಕಲ್ಝರಿ, ಬೆನಕನಹಾಳ, ಮಡಿಕ್ಕೇರಿ, ಹನುಮಸಾಗರ ಸೇರಿದಂತೆ ಅನೇಕ ಹಳ್ಳಿಗಳ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಈ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಪಟ್ಟಣದ ಶಾಲಾ, ಕಾಲೇಜುಗಳನ್ನು ಅವಲಂಬಿಸಿದ್ದಾರೆ. ಹಾಳಾಗಿರುವ ಈ ಹೆದ್ದಾರಿ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಗೆ ಹಲವಾರು ಬಾರಿ ಮನವಿ, ಪ್ರತಿಭಟಿಸಿದರೂ ಸಹ ಕಾಟಾಚಾರಕ್ಕೆಂಬಂತೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ ಹೊರತು ಗುಂಡಿ ಮುಚ್ಚುವ ಶಾಶ್ವತ ಕಾರ್ಯಕ್ಕೆ ಮುಂದಾಗದಿರುವುದು ಜನ ಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.

ರಾಜ್ಯ ಹೆದ್ದಾರಿಯಿದ್ದ ರಸ್ತೆಯನ್ನು ಕೈಗಾದಿಂದ ಇಳಕಲ್ಲವರೆಗೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಿದ್ದಾರೆ. ಆದರೆ ಈ ರಸ್ತೆ ಹಲವು ವರ್ಷಗಳಿಂದಲೂ ಅಭಿವೃದ್ಧಿ ಮಾತ್ರ ಕಂಡಿಲ್ಲ. ರಾಷ್ಟ್ರೀಯ ಹೆದ್ದಾರಿ ಪುನಶ್ಚೇತನಕ್ಕೆ ಸರ್ಕಾರಗಳು ಕೋಟ್ಯಂತರ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸದೇ ಕಳಪೆ ಕಾಮಗಾರಿ ಕೈಗೊಂಡ ಪರಿಣಾಮ ರಸ್ತೆ ಮಧ್ಯದಲ್ಲಿ ಇಂತಹ ಹೊಂಡಗಳು ನಿರ್ಮಾಣವಾಗಿವೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.

ಈ ರಸ್ತೆಯಲ್ಲಿ ಇಳಕಲ್ಲ ಹಾಗೂ ಬಲಕುಂದಿಯಿಂದ ಗಜೇಂದ್ರಗಡ ಮಾರ್ಗವಾಗಿ ಕಾರವಾರ, ದಕ್ಷಣ ಕನ್ನಡ ಜಿಲ್ಲೆಗೆ ತೆರಳುವ ಗ್ರಾನೈಟ್ ಕಲ್ಲುಬಂಡೆಗಳ ಸಾಗಣೆ ಲಾರಿಗಳು ಪಟ್ಟಣದ ಹೆದ್ದಾರಿಗೆ ಲಗ್ಗೆ ಇಟ್ಟಿದ್ದರಿಂದ ಗೌಡಗೇರಿ ಗ್ರಾಮದಿಂದ ಸುಮಾರ ಎರಡು ಕಿಲೋ ಮೀಟರ್‌ ಹೆದ್ದಾರಿ ಡಾಂಬರ್‌ ಕಿತ್ತು ದೊಡ್ಡ ದೊಡ್ಡ ಕಂದಕಗಳು ನಿರ್ಮಾಣವಾಗಿವೆ. ರಸ್ತೆಯಲ್ಲಿ ಸಾಗುವ ವಾಹನಗಳು ಹೊಂಡದ ಸ್ವರೂಪವಾದ ತೆಗ್ಗಿನಲ್ಲಿ ಬಿದ್ದು ತೊಲಳಾಡುತ್ತಾ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಹಾಳಾಗಿರುವ ಈ ಹೆದ್ದಾರಿ ದುರಸ್ತಿಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕೂಡಲೇ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳನ್ನು ಮುಚ್ಚುವ ಮೂಲಕ ಸುಗಮ ಸಂಚಾರಕ್ಕೆ ಕ್ರಮ ಜರುಗಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

 

•ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.