ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆಗೆ ಗುದ್ದಾಟ ಶುರು

Team Udayavani, Mar 13, 2020, 5:05 PM IST

gadaga-tdy-1

ಗಜೇಂದ್ರಗಡ: ಪಟ್ಟಣದ ಪುರಸಭೆಗೆ ಸರ್ಕಾರ ಮೀಸಲಾತಿ ಪ್ರಕಟಿಸಿದ್ದೇ ತಡ ಕೋಟೆನಾಡಿನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ.

ರಾಜ್ಯ ಸರ್ಕಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪಟ್ಟಿ ಬಿಡುಗಡೆಗೊಳಿಸಿದ ಕ್ಷಣದಿಂದ ಆಡಳಿತ ಚುಕ್ಕಾಣಿಗಾಗಿ ಒಳಗೊಳಗೆ ಪೈಪೋಟಿ ಜೋರಾಗಿದೆ. ಕಳೆದ ಎರಡು ಅವಧಿಯಲ್ಲಿ ಗಜೇಂದ್ರಗಡ ಪುರಸಭೆ ಅಧ್ಯಕ್ಷ ಸ್ಥಾನದಿಂದ ಪುರುಷರಿಗೆ ಅವಕಾಶಗಳು ಕೈತಪ್ಪಿ ಹೋಗಿದ್ದವು. ಆದರೆ ಈ ಬಾರಿ ಅಧ್ಯಕ್ಷ ಸ್ಥಾನ ಎಸ್ಸಿ ಮೀಸಲಾತಿ ಬಂದ ಹಿನ್ನೆಲೆಯಲ್ಲಿ ಪುರುಷರಲ್ಲಿ ತೀವ್ರತರ ಪೈಪೋಟಿ ಆರಂಭವಾಗಿದೆ.

ಪುರಸಭೆಯಲ್ಲಿ 23 ಸ್ಥಾನಗಳಿದ್ದು, ಅಧಿಕಾರ ಗದ್ದುಗೆ ಏರಲು 12 ಸ್ಥಾನ ಬೇಕು. 18 ಸ್ಥಾನ ಹೊಂದಿರುವ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇದರಲ್ಲಿ ಅಧ್ಯಕ್ಷ ಸ್ಥಾನದ ಎಸ್ಸಿ ಮೀಸಲಿನ 7 ಜನ ಸದಸ್ಯರಿದ್ದಾರೆ. ಇನ್ನು ಉಪಾಧ್ಯಕ್ಷ ಸ್ಥಾನದ ಹಿಂದುಳಿದ ವರ್ಗ ಎ ಮಹಿಳೆ ಮೀಸಲಿನ 5 ಜನ ಸದಸ್ಯೆಯರಿದ್ದಾರೆ. ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕಾಗಿ ಸದಸ್ಯರು ಒಳಗೊಳಗೆ ಪಕ್ಷದ ವರಿಷ್ಠರ ದುಂಬಾಲು ಬೀಳಲಾರಂಭಿಸಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ತೀವ್ರ ಪೈಪೋಟಿ: ಅಧ್ಯಕ್ಷ ಸ್ಥಾನಕ್ಕಾಗಿ 10ನೇ ವಾರ್ಡಿನ ರೂಪೇಶ ರಾಠೊಡ, 12ನೇ ವಾರ್ಡಿನ ಕನಕಪ್ಪ ಅರಳಿಗಿಡದ, 16ನೇ ವಾರ್ಡಿನ ಲಲಿತಾ ಸವಣೂರ ಹಾಗೂ 18ನೇ ವಾರ್ಡಿನ ಮುದಿಯಪ್ಪ ಮುಧೋಳ ಮಧ್ಯೆ ತೀವ್ರ ಪೈಪೋಟಿ ಶುರುವಾಗಿದೆ. ಇತ್ತ 22ನೇ ವಾರ್ಡಿನ ಲಕ್ಷ್ಮೀ ಮುಧೋಳ, 17ನೇ ವಾರ್ಡಿನ ಮೂಕಪ್ಪ ನಿಡಗುಂದಿ, 6ನೇ ವಾರ್ಡಿನ ಯು.ಆರ್‌. ಚನ್ನಮ್ಮನವರ ರೇಸ್‌ನಲ್ಲಿದ್ದಾರೆ. ಇನ್ನುಳಿದ ಉಪಾಧ್ಯಕ್ಷ ಸ್ಥಾನಕ್ಕೆ 14ನೇ ವಾರ್ಡಿನ ಉಮಾ ಮ್ಯಾಕಲ್‌, 9ನೇ ವಾರ್ಡಿನ ಕೌಸರಬಾಹುಹುನಗುಂದ ಮುಂಚೂಣಿಯಲ್ಲಿದ್ದಾರೆ.

5ನೇ ವಾರ್ಡಿನ ವಿಜಯಾ ಮಳಗಿ, 4ನೇ ವಾರ್ಡಿನ ಸುಜಾತಾಬಾಯಿ ಶಿಂಗ್ರಿ, 7ನೇ ವಾರ್ಡಿನ ಲೀಲಾವತಿ ವನ್ನಾಲ ಸಹ ಕಸರತ್ತು ನಡೆಸಿದ್ದಾರೆ. 5 ಸದಸ್ಯರನ್ನು ಹೊಂದಿದ ಕಾಂಗ್ರೆಸ್‌ ಬಿಜೆಪಿಯ ರಾಜಕೀಯ ಬೆಳವಣಿಗೆಗಳಿಗೆ ತುಪ್ಪ ಸವರಲು ಒಳಗೊಳಗೆ ಸರ್ಕಸ್‌ ನಡೆಸುತ್ತಿದೆ. ಅ ಧಿಕಾರ ಹಿಡಿಯಲು ಬೇಕಾಗುವ ಸಂಖ್ಯಾಬಲ ಇಲ್ಲದಿದ್ದರೂ ಬಿಜೆಪಿ ಆಂತರಿಕ ನಡೆ ಮೇಲೆ ನಿಗಾವಹಿಸಿದೆ. ಮೇಲ್ನೋಟಕ್ಕೆ ಕೆಲ ಕಾಂಗ್ರೆಸ್‌ ಮುಖಂಡರು ನಮಗೆ ಅಧಿಕಾರಕ್ಕಿಂತ ಪಟ್ಟಣದ ಅಭಿವೃದ್ಧಿ ಮುಖ್ಯ. ಈ ನಿಟ್ಟಿನಲ್ಲಿಕಾಂಗ್ರೆಸ್‌ ವಿರೋಧ ಪಕ್ಷವಾಗಿ ಪುರಸಭೆಯಲ್ಲಿ ಜವಾಬ್ದಾರಿ ನಿರ್ವಹಿಸಲಿದೆ ಎಂದು ಕೇಳಿಬರುತ್ತಿದ್ದರೂ ಒಳಗೊಳಗೆ ಬಿಜೆಪಿ ಮೇಲೆ ಕಣಿಟ್ಟಿದೆ.

ಅಧ್ಯಕ್ಷ ಸ್ಥಾನ ಯಾರ ಪಾಲಿಗೆ? :  ಹಿಂದಿನ ಎರಡು ಅವಧಿ ಯಲ್ಲಿ ಪುರಸಭೆ ಅಧ್ಯಕ್ಷ ಗಾದಿಯನ್ನು ಮಹಿಳೆಯರೇ ಅಲಂಕರಿಸಿದ್ದರು. ಕಳೆದ ಅವಧಿಯಲ್ಲಿ ಸಾಮಾನ್ಯ ಮಹಿಳೆ, ನಂತರ ಹಿಂದುಳಿದ ವರ್ಗ ಎ ಮಹಿಳೆಯರು ಪಟ್ಟಣದಲ್ಲಿ ಆಳ್ವಿಕೆ ನಡೆಸಿದ್ದರು. ಆದರೆ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮೀಸಲಾತಿಯುಳ್ಳ ಪುರುಷ ಮತ್ತು ಮಹಿಳೆಯಾದರೂ ಸ್ಪ ರ್ಧಿಸಲು ಅವಕಾಶ ಬಂದೊದಗಿದೆ. ಹೀಗಾಗಿ ಈ ಬಾರಿಯಾದರೂ ಪುರುಷರ ಪಾಲಾಗುತ್ತಾ ಅಧ್ಯಕ್ಷ ಸ್ಥಾನ? ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ವರಿಷ್ಠರ ಭೇಟಿಗೆ ಆಕಾಂಕ್ಷಿಗಳು :  ಬಿಜೆಪಿ ಹೈಕಮಾಂಡ್‌ ಯಾರ ಹೆಸರನ್ನು ಅಧ್ಯಕ್ಷ-ಉಪಾಧ್ಯಕ್ಷ ಗಾದಿಗೆ ಸೂಚಿಸುವರೋ, ಸೇವೆ ಸಲ್ಲಿಸುತ್ತೇವೆ ಎನ್ನುವ ಮಾತುಗಳು ಸಹ ಬಿಜೆಪಿ ವಲಯದಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವೈಯಕ್ತಿಕಬದುಕು- ಬವಣೆಗಿಂತ ಪಕ್ಷದ ಘನತೆ ಮುಖ್ಯ. ಈ ದೆಸೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎನ್ನುವ ಸದಸ್ಯರಿಗೇನು ಕಡಿಮೆ ಇಲ್ಲ.

­-ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.